ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನನ್ನ ಮುಖವನ್ನೇ ನೊಡಿಲ್ಲವೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏಕವಚನದಲ್ಲಿ ಹಗುರವಾಗಿ ಮಾತನಾಡಿದ್ದಾರಂತೆ. ಮುಖವನ್ನೇ ನೋಡದವರನ್ನು ಎರಡು ಮೂರು ಭಾರಿ ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನಿಸಿದ್ರಾ ಎಂದು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಸಿದ್ಧರಾಮಯ್ಯರ ಜೊತೆ ಏಕವಚನದಲ್ಲಿ ಮಾತನಾಡುವಷ್ಟು ನನಗೆ ಅವರ ಜೊತೆ ಸಲಿಗೆ ಇಲ್ಲ. ಸಲಿಗೆ ಇದ್ದವರಲ್ಲಿ ಅವರು ಮಾತನಾಡಲಿ. ಒಬ್ಬ ಮಾಜಿ ಮುಖ್ಯಮಂತ್ರಿಗೆ ಇದು ಶೋಭೆಯಲ್ಲ. ಹಲವಾರು ಬಾರಿ ನಾನು ಅವರನ್ನು ಭೇಟಿ ಮಾಡಿದ್ದೇನೆ. ಕಾಂಗ್ರೆಸ್ ಸೇರುವಂತೆ ಸಿದ್ದರಾಮಯ್ಯ ಒತ್ತಾಯಿಸಿದ್ರು ನಾನು ಸೇರುವುದಿಲ್ಲ ಅಂತ ನೇರವಾಗಿ ಹೇಳಿದ್ದೆ. ನಾನು ಯಾರು ಅಂತ ಗೊತ್ತಿಲ್ಲದೆ ಅವರು ಪಕ್ಷಕ್ಕೆ ಸೇರಿಸಿಕೊಳ್ಳಲು ಮುಂದಾದ್ರಾ? ನನ್ನ ವ್ಯಕ್ತಿತ್ವ ಗೊತ್ತಿಲ್ಲದೆ ಏನೂಂತ ಪಕ್ಷಕ್ಕೆ ಸೇರಿಸಲು ಮುಂದಾಗಿದ್ದರು ಸೊರಕೆ, ಪ್ರಮೋದ್ ಮಧ್ವರಾಜ್ , ಅಭಯಚಂದ್ರ ಜೈನ್ ನನ್ನನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆದಿದ್ದರು. ನಾನು ಯಾರು ಅಂತ ಗೊತ್ತಿಲ್ಲದೆ ಇಷ್ಟೆಲ್ಲಾ ಮಾಡಿದ್ರಾ ಎಂದರು. ಕುಂದಾಪ್ರ ಡಾಟ್ ಕಾಂ ಸುದ್ದಿ.
ನಾನು ರಾಜಕೀಯವಾಗಿಯೂ ಹಗುರವಾಗಿ ಮಾತನಾಡುವ ವ್ಯಕ್ತಿ ಅಲ್ಲ. ಸಿದ್ದರಾಮಯ್ಯ ಜನವೇ ಹಗೂರ. ವ್ಯಕ್ತಿ ಹಗೂರ ಇದ್ದಾಗ ಇಂತಹ ಹಗೂರ ಮಾತು ಬರುತ್ತದೆ. ಒಂದು ಹುದ್ದೆಗೆ ಹೋದ ಕೂಡಲೇ ದೊಡ್ಡ ಮನುಷ್ಯ ಆಗಲ್ಲ. ಆತನ ಮಾತು ನಡವಳಿಗೆ ಸರಿ ಇರಬೇಕು. ಸಿದ್ದರಾಮಯ್ಯ ಮಾತಿಂದ ಮತದಾರರಿಗೆ ಬಹಳ ಬೇಸರ ಆಗಿದೆ. ನಾನು ಸಿದ್ದರಾಮಯ್ಯ ನ ಆಶೀರ್ವಾದದಲ್ಲಿ ಬದುಕಿದವ ಅಲ್ಲ. ನನಗೆ ಜನ ೫೬ ಸಾವಿರ ಮತದ ಅಂತರದಲ್ಲಿ ಗೆಲ್ಲಿಸಿದ್ದಾರೆ. ಕುಂದಾಪುರ ಕ್ಷೇತ್ರದ ಜನರ ಪ್ರೀತಿ ಸಾಕು ಎಂದು ಪ್ರತಿಕ್ರಿಯಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರಿನಲ್ಲಿ ನಡೆದ ಸಮಾವೇಶದಲ್ಲಿ ಸಿದ್ದರಾಮಯ್ಯನವರ ಮಾತಿನ ತುಣುಕು ಜಿಲ್ಲೆಯಾದ್ಯಂತ ವೈರಲ್ ಆಗಿ ಹಾಲಾಡಿ ಅಭಿಮಾನಿಗಳು ಫುಲ್ ಗರಮ್ ಆಗಿದ್ದರು.