ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: 2014ನೇ ಇಸವಿಯಲ್ಲಿ ದಾಖಲುಗೊಂಡ ಪೋಸ್ಕೊ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಸೆಶನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸಿ, ಶಿಕ್ಷೆಗೆ ಒಳಗಾಗಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಬೆಳ್ವೆ ಗ್ರಾಮದ ಮಾರಿಕೊಡ್ಲು ನಿವಾಸಿ ಸತೀಶ್ ನಾಯ್ಕ (30) ಎಂಬುವನನ್ನು ಶಂಕರನಾರಾಯಣ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಆಪಾಧಿತನ್ನು ಶಂಕರನಾರಾಯಣ ಪೊಲೀಸರು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆತನಿಗೆ ನ್ಯಾಯಂಗ ಬಂಧನ ವಿಸ್ತರಿಸಲಾಗಿದೆ.
2014ರಲ್ಲಿ ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ 9 ವರ್ಷದ ಬಾಲಕಿಯನ್ನು ಬಲವಂತವಾಗಿ ಬಾಯಿಮುಚ್ಚಿ ತನ್ನ ಮನೆಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು.
ಆರೋಪಿಯನ್ನು ಬಂಧಿಸುವಲ್ಲಿ ಶಂಕರನಾರಾಯಣ ಪಿ.ಎಸ್.ಐ ಪ್ರಕಾಶ್ ಕೆ ಮಾರ್ಗದರ್ಶನದಲ್ಲಿ ಎ.ಎಸ್.ಐ. ಪ್ರಭಾಕರ ಬಿ. ಮತ್ತು ಹೆಡ್ ಕಾನ್ಸ್’ಟೇಬಲ್ ನಾರಾಯಣ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.










