ಡಿ.9ಕ್ಕೆ ಹುಬ್ಬಳ್ಳಿ ಬಿವಿಬಿ ತಾಂತ್ರಿಕ ಶಿಕ್ಷಣ ವಿಶ್ವವಿದ್ಯಾಲಯ ಹಳೆ ವಿದ್ಯಾರ್ಥಿಗಳ 2ನೇ ಅಂತಾರಾಷ್ಟ್ರೀಯ ಸಮ್ಮೇಳನ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಹುಬ್ಬಳ್ಳಿಯ ಕೆ.ಎಲ್.ಇ. ತಾಂತ್ರಿಕ ಶಿಕ್ಷಣ ವಿಶ್ವವಿದ್ಯಾಲಯದ ಹಳೆ ವಿದ್ಯಾರ್ಥಿಗಳೆಲ್ಲಾ ಸೇರಿ ಡಿಸೆಂಬರ್ 9 ರಂದು ಪೂನಾದ ವಿಮಾನನಗರದ “ನೋವೋಟೆಲ್ ಹೋಟೆಲ್”ನಲ್ಲಿ ೨ನೇ ಅಂತರಾಷ್ಟ್ರೀಯ ಸಮ್ಮೇಳನ ಹಮ್ಮಿಕೊಂಡಿದ್ದಾರೆ.

Call us

Click Here

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಇನ್ಫೋಸಿಸ್ ಫೌಂಡೇಶನ್ ಚೇರ್‌ಮನ್ ಡಾ. ಸುಧಾಮೂರ್ತಿ, ಎಐಸಿಟಿಇ ಯ ಚೇರ್‌ಮನ್ ಹಾಗೂ ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ ಕೋರೆ ಹಾಗೂ ಮಾಜಿ ಸಚಿವ ಬಸವರಾಜ ಬೊಮ್ಮಾಯಿಯವರು ಆಗಮಿಸಲಿದ್ದಾರೆ.

ಹುಬ್ಬಳ್ಳಿಯ ಕೆ.ಎಲ್.ಇ. ತಾಂತ್ರಿಕ ಶಿಕ್ಷಣ ವಿಶ್ವವಿದ್ಯಾಲಯ ಈ ಹಿಂದೆ ಬಿ. ವಿ. ಭೂಮರೆಡ್ಡಿ ತಾಂತ್ರಿಕ ವಿಶ್ವವಿದ್ಯಾಲಯ ಎಂದು ಕರೆಯಲ್ಪಡುತ್ತಿತ್ತು. ಇಲ್ಲಿ ಕಲಿತ ಹಲವಾರು ಹಳೆ ವಿದ್ಯಾರ್ಥಿಗಳು ಇಂದು ವಿಶ್ವದ ಪ್ರಸಿದ್ಧ ಸಂಸ್ಥೆಗಳಲ್ಲಿ, ದೇಶಗಳಲ್ಲಿ ಹೆಸರು ಗಳಿಸಿದ್ದಾರೆ. ಆ ಪೈಕಿ ಇನ್ಫೋಸಿಸ್ ಫೌಂಡೇಶನ್‌ನ ಡಾ. ಸುಧಾಮೂರ್ತಿ, ವಿವೇಕ್ ಕುಲಕರ್ಣಿ, ಎಸ್.ಆರ್. ಹಿರೇಮಠ ಮೊದಲಾದವರು ಪ್ರಮುಖರು. ಹೆಚ್ಚಿನ ಸಂಖ್ಯೆಯಲ್ಲಿ ಹಳೆ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೋರಲಾಗಿದೆ.

Leave a Reply