ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳು ಜ. 8 ಮತ್ತು 9ರಂದು ಭಾರತ ಬಂದ್‌ಗೆ ಕರೆ ನೀಡಲಾಗಿದ್ದು ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.
ಶಾಲಾ ಕಾಲೇಜಿಗೆ ರಜೆ:
ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಮಾಹಿತಿ ನೀಡಿದ್ದಾರೆ. ಒಂದೊಮ್ಮೆ ಬಂದ್ ಆದಲ್ಲಿ ಜಿಲ್ಲೆಯ ಶಾಲಾ ಕಾಲೇಜುಗಳ ಮಕ್ಕಳಿಗೆ ತೊಂದರೆಯಾಗಬಹುದೆನ್ನುವ ನಿಟ್ಟಿನಲ್ಲಿ ರಜೆ ಘೋಷಿಸಲಾಗಿದೆ.
ಕರಾವಳಿಯಲ್ಲಿ ಎಂದಿನಂತೆ ಬಸ್ ಸಂಚಾರ:
ಜಿಲ್ಲೆಯಲ್ಲಿ ಎಂದಿನಂತೆ ಕೆಎಸ್ಸಾರ್ಟಿಸಿ ಬಸ್ ಸಂಚಾರ ಇರಲಿದ್ದು, ಎಲ್ಲಾದರೂ ನಾಳೆ ಬೆಳಿಗ್ಗೆ ಅಹಿತಕರ ಘಟನೆ ನಡೆದು, ಬಸ್ಸಿಗೆ ಹಾನಿಯಾಗುವ ಸಂದರ್ಭ ಇದ್ದರೆ ಕೂಡಲೇ ನಾವು ಬಸ್ಸು ಸಂಚಾರ ಸ್ಥಗಿತಗೊಳಿಸುತ್ತೇವೆ. ಪರಿಸ್ಥಿತಿಯನ್ನು ಅವಲೋಕಿಸಿಕೊಂಡು ಬಸ್ ಗಳನ್ನು ಓಡಿಸಬೇಕೇ ಅಥವಾ ನಿಲ್ಲಿಸಬೇಕೇ ಎಂಬುವುದಾಗಿ ನಿರ್ಧರಿಸಲಿದ್ದೇವೆ ಎಂದು ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ದೀಪಕ್ ತಿಳಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.
ಮುಷ್ಕರಕ್ಕೆ ಈ ಹಿಂದೆಯೇ ದ.ಕ ಜಿಲ್ಲೆಯಲ್ಲಿ ರಿಕ್ಷಾ ಚಾಲಕರ ಸಂಘ ಬೆಂಬಲ ಸೂಚಿಸಿದ್ದು, ಸಿಟಿ ಬಸ್ ಮತ್ತು ಇತರ ಪ್ರದೇಶಗಳಿಗೆ ತೆರಳುವ ಖಾಸಗಿ ಬಸ್ ಮಾಲಕರು ಸಭೆ ನಡೆ ಭಾರತ್ ಬಂದ್‌ಗೆ ನಮ್ಮ ಬೆಂಬಲ ನೀಡುವುದಿಲ್ಲ ಎನ್ನುವ ತೀರ್ಮಾನಕ್ಕೆ ಬಂದಿದ್ದಾರೆ. ಈ ಹಿನ್ನಲೆಯಲ್ಲಿ ಅವಿಭಜಿತ ಜಿಲ್ಲೆಯಲ್ಲಿ ಖಾಸಗಿ ಬಸ್‌ಗಳ ಸಂಚಾರ ಎಂದಿನಂತೆ ಇರಲಿದೆ ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕೆನರಾ ಬಸ್ ಮಾಲೀಕರ ಸಂಘದ ಅಧ್ಯಕ್ಷ ರಾಜವರ್ಮ ಬಲ್ಲಾಳ್ ತಿಳಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.