Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಮಾಜದ ಸ್ವಸ್ಥ್ಯಕ್ಕೆ ಕಲೆಯ ಆಸ್ವಾದನೆ ಆಗತ್ಯ: ಸುರಭಿ ಜೈಸಿರಿಯಲ್ಲಿ ಪ್ರಕಾಶ್ಚಂದ್ರ ಶೆಟ್ಟಿ
    ಊರ್ಮನೆ ಸಮಾಚಾರ

    ಸಮಾಜದ ಸ್ವಸ್ಥ್ಯಕ್ಕೆ ಕಲೆಯ ಆಸ್ವಾದನೆ ಆಗತ್ಯ: ಸುರಭಿ ಜೈಸಿರಿಯಲ್ಲಿ ಪ್ರಕಾಶ್ಚಂದ್ರ ಶೆಟ್ಟಿ

    Updated:24/01/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಇಂದಿನ ದಿನದಲ್ಲಿ ಜನರು ಒತ್ತಡದ ಜೀವನ ಸಾಗಿಸುತ್ತಿದ್ದಾರೆ. ಬಹುತೇಕರು ಬದುಕಿಗಾಗಿ ಹೋರಾಟ ಮಾಡುತ್ತಿದ್ದರೇ, ಕೆಲವರು ಅಧಿಕಾರ ಮತ್ತು ಸಂಪತ್ತಿನ ಬೆನ್ನತ್ತಿದ್ದಾರೆ. ಈ ನಡುವೆ ಕಲೆ, ಸಂಸ್ಕೃತಿ, ಕ್ರೀಡೆಗಳಲ್ಲಿ ತೊಡಗಿಕೊಳ್ಳುವ, ಆಸ್ವಾದಿಸಲು ಸಮಯ ಇಲ್ಲದಾಗಿದೆ ಎಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು.

    Click Here

    Call us

    Click Here

    ಅವರು ಬುಧವಾರ ಬೈಂದೂರು ಶಾರದಾ ವೇದಿಕೆಯಲ್ಲಿ ೧೯ನೇ ವರ್ಷದ ಸಂಭ್ರಮದಲ್ಲಿರುವ ಸುರಭಿ ರಿ. ಬೈಂದೂರು ಇದರ ’ಸುರಭಿ ಜೈಸಿರಿ’ ಸಾಂಸ್ಕೃತಿಕ ವರ್ಷಧಾರೆಗೆ ಚಾಲನೆ ನೀಡಿ ಮಾತನಾಡಿದರು.

    ತಮ್ಮ ಮಕ್ಕಳು ಇಂಜಿನಿಯರ್, ಡಾಕ್ಟರ್ ಆಗಬೇಕು ಮತ್ತು ಮನೆಯಲ್ಲಿ ಬಂಧಿಯಾಗಿರಬೇಕೆಂಬ ಎಂಬ ಆಶಯದೊಂದಿಗೆ ಅವರನ್ನು ಸಲಹುತ್ತಿರುವ ತಂದೆ ತಾಯಂದಿರ ನಡುವೆ ಮಕ್ಕಳ ನೈಜ ಶಿಕ್ಷಣಕ್ಕೆ ಪೂರಕವಾಗಿರುವ ಕಲಾ ಚಟುವಟಿಕೆಯಲ್ಲಿ ಕೆಲವರಾದರೂ ತೊಡಗಿಕೊಳ್ಳುವಂತೆ ಮಾಡಿರುವುದು ನಿಜಕ್ಕೂ ಹೆಮ್ಮೆಯ ವಿಚಾರ ಎಂದು ಸಂತಸ ವ್ಯಕ್ತಪಡಿಸಿದ ಅವರು ಸಮಾಜದ ಸ್ವಾಸ್ಥ್ಯವನ್ನು ಕಾಪಾಡಲು ಕಲಾ ಸಂಘಗಳು ಅಗತ್ಯವೆಂದರು.

    ಅಧ್ಯಕ್ಷತೆ ವಹಿಸಿದ್ದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ ಸಂಗೀತ, ಕಲೆಗಳನ್ನು ಪ್ರೋತ್ಸಾಹಿಸುವ ಕೆಲಸ ಸುರಭಿಯಂತಹ ಸಂಸ್ಥೆಗಳಿಂದ ನಿರಂತವಾಗಿ ನಡೆಯುತ್ತಿದೆ. ಮಕ್ಕಳು ಬಾಲ್ಯದಲ್ಲಿಯೇ ಇಂತಹ ಕಲಾಪ್ರಕಾರಗಳಲ್ಲಿ ತೊಡಗಿಸಿಕೊಂಡು ಭವಿಷ್ಯದಲ್ಲಿ ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳುವಲ್ಲಿ ಬೈಂದೂರಿನ ಕಲಾ ಸಂಸ್ಥೆಗಳು ತನ್ನದೇ ಆದ ಕೊಡುಗೆ ನೀಡಿದೆ ಎಂದರು.

    Click here

    Click here

    Click here

    Call us

    Call us

    ಸಂಗೀತ ಕಲಾವಿದೆ ಗೌರಿ ತಗ್ಗರ್ಸೆ ಅವರನ್ನು ಸನ್ಮಾನಿಸಲಾಯಿತು. ಸುರಭಿಯ ಸಂಗೀತ ಗುರು ವಿದ್ವಾನ್ ಮಧೂರು ಪಿ. ಬಾಲಸುಬ್ರಹ್ಮಣ್ಯಂ ಹಾಗೂ ಚಿತ್ರಕಲಾ ಶಿಕ್ಷಕ ಗಿರೀಶ್ ತಗ್ಗರ್ಸೆಗೆ ವಿದ್ಯಾರ್ಥಿಗಳು ಗುರುವಂದನೆ ಸಲ್ಲಿಸಿದರು. ಸಂಗೀತ ಪರೀಕ್ಷೆಯಲ್ಲಿ ಉತ್ತೀರ್ಣರಾದ, ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಗೌರವಿಸಲಾಯಿತು.

    ಬೈಂದೂರು ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್‌ನ ಆಡಳಿತ ಟ್ರಸ್ಟೀ ಬಿ. ರಾಮಕೃಷ್ಣ ಶೇರುಗಾರ್ ಶುಭಶಂಸನೆಗೈದರು. ಜಿಲ್ಲಾ ಪಂಚಾಯತ್ ಸದಸ್ಯ ಸುರೇಶ್ ಬಟವಾಡಿ, ಜೆಸಿಐ ಶಿರೂರು ಅಧ್ಯಕ್ಷ ನಾಗೇಶ್ ಕೆ. ಅತಿಥಿಗಳಾಗಿದ್ದರು.

    ಸುರಭಿ ಬೈಂದೂರು ನಿರ್ದೇಶಕ ಸುಧಾಕರ ಪಿ. ಬೈಂದೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗಣೇಶ್ ಬೈಂದೂರು ಸನ್ಮಾನಿತರ ಪರಿಚಯ ಮಾಡಿದರು. ಸುರಭಿ ರಿ. ಬೈಂದೂರು ಅಧ್ಯಕ್ಷ ಸತ್ಯನಾ ಕೊಡೇರಿ ಸ್ವಾಗತಿಸಿ, ಕಾರ್ಯದರ್ಶಿ ರಾಮಕೃಷ್ಣ ಉಪ್ಪುಂದ ಧನ್ಯವಾದಗೈದರು. ಕೀರ್ತಿ ಉಪ್ಪುಂದ ಕಾರ್ಯಕ್ರಮ ನಿರೂಪಿಸಿದರು.

    ► ಸಂಗೀತ ಕಲಾವಿದೆ ಗೌರಿ ತಗ್ಗರ್ಸೆಗೆ ಸನ್ಮಾನ – https://kundapraa.com/?p=30917 .

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಸ್ರೂರು ಶ್ರೀ ಶಾರದಾ ಕಾಲೇಜು: ಮಾನಸಿಕ ಆರೋಗ್ಯ ಕಾರ್ಯಕ್ರಮ

    09/10/2026

    ಎಮ್‌ಐಟಿಯಲ್ಲಿ ‘MITK AI VISION 24H’ ರಾಷ್ಟ್ರಮಟ್ಟದ ಹ್ಯಾಕಥಾನ್‌ಗೆ ಚಾಲನೆ

    09/10/2026

    ಶ್ರೀ ಗುರುನರಸಿಂಹ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಆನಂದ್ ಸಿ. ಕುಂದರ್ ಪುನರಾಯ್ಕೆ

    09/10/2026
    Leave A Reply Cancel Reply

    eight − seven =

    Call us

    Click Here

    Call us

    Call us

    Call us
    Highest Viewed Recently
    • ಬಸ್ರೂರು ಶ್ರೀ ಶಾರದಾ ಕಾಲೇಜು: ಮಾನಸಿಕ ಆರೋಗ್ಯ ಕಾರ್ಯಕ್ರಮ
    • ಎಮ್‌ಐಟಿಯಲ್ಲಿ ‘MITK AI VISION 24H’ ರಾಷ್ಟ್ರಮಟ್ಟದ ಹ್ಯಾಕಥಾನ್‌ಗೆ ಚಾಲನೆ
    • ಶ್ರೀ ಗುರುನರಸಿಂಹ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಆನಂದ್ ಸಿ. ಕುಂದರ್ ಪುನರಾಯ್ಕೆ
    • ಆಳ್ವಾಸ್: ʼಜ್ಯೂರಿಸ್ ಓಡಿಸ್ಸಿ –ದ ಜರ್ನಿ ಇನ್‌ಟು ಲಾʼ ಹಾಗೂ ಕಾನೂನು ಜಾಗೃತಿ ಕಾರ್ಯಕ್ರಮ  
    • ಗುರುಕುಲ ಪಬ್ಲಿಕ್ ಸ್ಕೂಲ್: ಸಂಸ್ಕಾರ – ಸಿಂಚನ – ಹೆತ್ತವರ ಪಾದಗಳಿಗೆ ನಮನ ಕಾರ್ಯಕ್ರಮ ಸಂಪನ್ನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.