ಸಾರ್ವಜನಿಕರ ಸಹಕಾರದಿಂದ ಸರಕಾರಿ ಶಾಲೆಗಳ ಪುನಶ್ಬೇತನ ಸಾಧ್ಯ: ಗೋವಿಂದ ಬಾಬು ಪೂಜಾರಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸರಕಾರಿ ಶಾಲೆಗಳು ಸಮರ್ಪಕವಾಗಿ ಮುನ್ನಡೆಯಬೇಕಾದರೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ. ಆರ್ಥಿಕವಾಗಿ ಪ್ರಬಲರಾದವರು ಗಳಿಸಿದ ಒಂದಂಶವನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸುವುರಿಂದ ಶಾಲೆ ಹಾಗೂ ಊರು ಅಭಿವೃದ್ಧಿ ಕಾಣಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ನಮ್ಮ ಟ್ರಸ್ಟ್ ಪೂರಕ ವಾತಾವರಣ ಕಲ್ಪಿಸಿಕೊಟ್ಟಿದೆ ಎಂದು ಉಪ್ಪುಂದ ಶ್ರೀವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ, ಉದ್ಯಮಿ ಗೋವಿಂದ ಬಾಬು ಪೂಜಾರಿ ಅಭಿಪ್ರಾಯಪಟ್ಟರು.

Call us

Click Here

ಬಿಜೂರು ಗ್ರಾಮದ ಸಾಲಿಮಕ್ಕಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಟ್ರಸ್ಟ್ ವತಿಯಿಂದ ಸ್ಕೂಲ್‌ಬ್ಯಾಗ್ ಹಾಗೂ ನೋಟ್‌ಬುಕ್ ವಿತರಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಜೀವನ, ದಾರಿ, ಕನಸುಗಳನ್ನು ನನಸು ಮಾಡಿಕೊಳ್ಳಲು ಸರಿಯಾದ ಮಾರ್ಗದರ್ಶನದ ಅಗತ್ಯತೆ ಇದೆ. ಉತ್ತಮ ಜನರ ಸಹವಾಸ ಗೆಳೆತನ ಬೆಳೆಸಿಕೊಂಡರೆ ಮಾತ್ರ ನಮ್ಮ ಜೀವನ ಉತ್ತಮವಾಗಲು ಸಾಧ್ಯ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.

ಎಸ್‌ಡಿಎಂಸಿ ಅಧ್ಯಕ್ಷ ಮಂಜುನಾಥ ಆಚಾರ್ ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯ ಅಂಗನವಾಡಿ ಹಾಗೂ ಶಾಲಾ ಮಕ್ಕಳಿಗೆ ಬ್ಯಾಗ್ ಹಾಗೂ ಪುಸ್ತಕ ವಿತರಿಸಲಾಯಿತು. ಸಿಆರ್‌ಪಿ ಸುಬ್ರಹ್ಮಣ್ಯ ಜಿ. ಉಪ್ಪುಂದ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ರವಿ ದೇವಾಡಿಗ, ಗ್ರಾಪಂ ಸದಸ್ಯ ಗಣೇಶ ದೇವಾಡಿಗ, ಮಕ್ಕಳ ಮಿತ್ರ ರಾಜೇಂದ್ರ ಬಿಜೂರು, ಟ್ರಸ್ಟ್ ಸದಸ್ಯರಾದ ಸುಧಾಕರ ಪೂಜಾರಿ, ನರಸಿಂಹ ಬಿ. ನಾಯಕ್, ರಾಘವೇಂದ್ರ ಪೂಜಾರಿ, ಜಯರಾಮ ಶೆಟ್ಟಿ, ಅನಂತಪದ್ಮನಾಭ ನಾಯರಿ ಉಪಸ್ಥಿತರಿದ್ದರು. ಶಿಕ್ಷಕ ಗಣೇಶ ಪೂಜಾರಿ ಸ್ವಾಗತಿಸಿ, ನಿರೂಪಿಸಿದರು.

Leave a Reply