ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಬುಧವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಭಾಗೀರಥಿ ಅಧ್ಯಕ್ಷರಾಗಿ ಮತ್ತು ವೆಂಕಟ ಪೂಜಾರಿ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ.
ಬೈಂದೂರು ತಹಶೀಲ್ದಾರ್ ರವಿ ಕಲಾಲ್ ಪಂಚಾಯಿತಿ ಸಭಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಿ, ಫಲಿತಾಂಶ ಘೋಷಣೆ ಮಾಡಿದರು. ಬಹುಮತ ಪಡೆದಿದ್ದ ಬಿಜೆಪಿ ಬೆಂಬಲಿತರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆ ನಡೆಯಿತು.
ನೂತನವಾಗಿ ಆಯ್ಕೆಯಾದ ವೈ.ಶ್ರೀನಿವಾಸ ಖಾರ್ವಿ ಮತ್ತು ಪ್ರೇಮಾ ಸಿ.ಎಸ್. ಪೂಜಾರಿ ಅವರನ್ನು ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಶೋಭಾ ಜಿ.ಪುತ್ರನ್ ಶುಭ ಹಾರೈಸಿದ್ದಾರೆ.