ಲೇಖಕಿ ಡಾ. ಪಾರ್ವತಿ ಜಿ ಐತಾಳ್ ಅವರಿಗೆ ಸಾಹಿತ್ಯಶ್ರೀ ಪ್ರಶಸ್ತಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನ ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕಿ ಮತ್ತು ಲೇಖಕಿ ಡಾ. ಪಾರ್ವತಿ ಜಿ.ಐತಾಳ್ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಕೊಡಮಾಡುವ 2018ನೇ ಸಾಲಿನ ಸಾಹಿತ್ಯಶ್ರೀ ಪ್ರಶಸ್ತಿ ಲಭಿಸಿದೆ.

Call us

Click Here

ಕನ್ನಡ, ಇಂಗ್ಲಿಷ್, ಹಿಂದಿ, ಮಲೆಯಾಳ ಮತ್ತು ತುಳು-ಹೀಗೆ ಐದು ಭಾಷೆಗಳಲ್ಲಿ ಬರೆಯುವ ಪಾರ್ವತಿ ಐತಾಳ್ ಈ ಭಾಷೆಗಳ ನಡುವೆ ಪ್ರಸಿದ್ಧ ಲೇಖಕರ ಹಲವಾರು ಕೃತಿಗಳನ್ನು ಅನುವಾದಿಸಿದ್ದಾರಲ್ಲದೆ, ಸ್ವತಂತ್ರವಾಗಿಯೂ ಸಣ್ಣಕಥೆ, ಕಾದಂಬರಿ, ವಿಮರ್ಶೆ, ನಾಟಕ ಮತ್ತು ವೈಚಾರಿಕ ಪ್ರಬಂಧ ಕೃತಿಗಳನ್ನು ಪ್ರಕಟಿಸಿದ್ದಾರೆ. ಇದುವರೆಗೆ 40 ಅನುವಾದಿತ ಕೃತಿಗಳು, 23 ಸ್ವತಂತ್ರ ಕೃತಿಗಳು, ನಾಲ್ಕು ಸಂಪಾದಿತ ಮತ್ತು ಸಹಲೇಖಕರಾಗಿ ೯ಕೃತಿಗಳನ್ನು ಪ್ರಕಟಿಸಿದ್ದಾರೆ. ೮ ಕೃತಿಗಳು ಪ್ರಕಟಣೆಯ ಹಂತದಲ್ಲಿವೆ. ಹಲವಾರು ರಾಜ್ಯ ಮತ್ತು ರಾಷ್ಟ್ರಮಟ್ಟದ ಕಾರ್ಯಾಗಾರ ಮತ್ತು ವಿಚಾರ ಸಂಕಿರಣಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯ ನಿರ್ವಹಿಸಿದ್ದಾರೆ.

ಮಾರ್ಚ್ 3 ರಂದು ಜರಗಲಿರುವ ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿಯೂ ಇವರು ಆಯ್ಕೆಯಾಗಿದ್ದಾರೆ.

 

Leave a Reply