ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗ ಮಾಹಿತಿ ಕಾರ್ಯಾಗಾರ ನಡೆಯಿತು. ಎರೆನಾ ಆನಿಮೇಶನ್ ಸಂಸ್ಥೆಯ ಸಂಜಯ್ ಪಾಟೀಲ್ ವಿದ್ಯಾರ್ಥಿಗಳಿಗೆ ಆನಿಮೇಶನ್ ಕೋರ್ಸ್‌ಗಳನ್ನು ಪರಿಚಯಿಸಿ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡಿದರು. ಈ ಸಂದರ್ಭ ಎರೆನಾ ಆನಿಮೇಶನ್‌ನ ಪ್ರಜ್ವಲಾ ಶೆಟ್ಟಿ, ಕಾಲೇಜಿನ ನಿರ್ದೇಶಕ ಪ್ರೊ. ದೋಮ ಚಂದ್ರಶೇಖರ್, ಪ್ರಭಾರ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಮಹೇಶ್ ಬಾಬು ಉಪಸ್ಥಿತರಿದ್ದರು.