Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ ಅವಳಿ ಕೊಲೆ ಪ್ರಕರಣ: 14 ಆಪಾದಿತರಿಗೆ ನ್ಯಾಯಾಂಗ ಬಂಧನ, ಇಬ್ಬರಿಗೆ ಪೊಲೀಸ್ ಕಸ್ಟಡಿ
    ಅಪಘಾತ-ಅಪರಾಧ ಸುದ್ದಿ

    ಕೋಟ ಅವಳಿ ಕೊಲೆ ಪ್ರಕರಣ: 14 ಆಪಾದಿತರಿಗೆ ನ್ಯಾಯಾಂಗ ಬಂಧನ, ಇಬ್ಬರಿಗೆ ಪೊಲೀಸ್ ಕಸ್ಟಡಿ

    Updated:15/02/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕೋಟ ಅವಳಿ ಕೊಲೆ ಪ್ರಕರಣಕ್ಕೆ ಸಂಬಧಿಸಿದಂತೆ ಎಲ್ಲಾ ಹದಿನಾರು ಆಪಾದಿತರ ಶುಕ್ರವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, 14 ಜನರಿಗೆ ಮಾ.೧ರ ತನಕ ನ್ಯಾಯಾಂಗ ಬಂಧನ ಹಾಗೂ ಇಬ್ಬರಿಗೆ ಫೆ.20ರ ತನಕ ಪೊಲೀಸ್ ಕಸ್ಟಿಡಿಗೆ ಒಪ್ಪಿಸಲಾಗಿದೆ.

    Click Here

    Call us

    Click Here

    ಕೋಟ ಪೊಲೀಸ್ ಠಾಣೆ ಸರಿಹದ್ದಿನ ಮಣೂರು ಚಿಕ್ಕಿನಕರೆ ಸಮೀಪ ಸ್ನೇಹಿತರಾದ ಭರತ್ ಶ್ರೀಯಾನ್ ಹಾಗೂ ಯತೀಶ್ ಕರ್ಕೇರ ಎಂಬವರ ತಲವಾರಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಕೊಲೆ ನಡೆದ ನಂತರ ಆಪಾದಿತರು ತಲೆ ಮರೆಸಿಕೊಂಡಿದ್ದು, ವಿವಿಧ ಸ್ಥಳದಲ್ಲಿ ಕೊಲೆಗೆ ಸಂಬಂಧಿಸಿದ ವ್ಯಕ್ತಿಗಳ ಪೊಲೀಸರು ಬಂಧಿಸಿದ್ದರು. ಕೊಲೆಯಲ್ಲಿ ಭಾಗಿ ಹಾಗೂ ಸಾಕ್ಷಿನಾಶ ಮತ್ತು ಕೊಲೆಗಾರರಿಗೆ ಸಹಕಾರ ಮಾಡಿದ ಆರೋಪದಡಿ ಒಟ್ಟು ೧೬ಜನರ ಬಂಧಿಸಿದ್ದು, ಎಲ್ಲರನ್ನು ಕುಂದಾಪುರ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯ ನ್ಯಾಯಾಧೀಶ ಶ್ರೀಕಾಂತ್ ಮುಂದೆ ಹಾಜರು ಪಡಿಸಲಾಗಿತ್ತು.

    ಅಭಿಷೇಕ್ ಪಾಲನ್, ರೊಟ್ಟಿ ನಾಗರಾಜ್, ಸಂತೋಷ್ ಕುಂದರ್, ಪ್ರಣವ್ ರಾವ್, ಪವನ್ ಅಮೀನ್, ವಿರೇಂದ್ರ ಆಚಾರ್ಯ, ರಿತೀಶ್ ಕರ್ಕೇರಾ, ಶಂಕರ ಮೊಗವೀರ, ರಾಜಶೇಖರ ರೆಡ್ಡಿ, ಹರೀಶ್ ರೆಡ್ಡಿ, ಜಿಪಂ ಸದಸ್ಯ ರಾಘವೇಂದ್ರ ಕಾಂಚನ್, ಮಹೇಶ್ ಗಾಣಿಗ, ರವಿಚಂದ್ರ ಹಾಗೂ ರವೀಂದ್ರ ಎಂಬವರಿಗೆ ಮಾ.೧ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    ಜ.26 ರಾತ್ರಿ ಲೋಹಿತ್ ಪೂಜಾರಿ ಮನೆ ಮುಂದೆ ಭರತ್ ಶ್ರೀಯಾನ್ ಹಾಗೂ ಯತೀಶ್ ಕರ್ಕೇರ ಎಂಬವರ ಹರೀಶ್ ರೆಡ್ಡಿ, ಸಹೋದರರು ಹಾಗೂ ಸಹಚರರು ತಲಾವರು ಬೀಸಿ ಕೊಲೆ ಮಾಡಿ ನಾಪತ್ತೆಯಾಗಿದ್ದರು. ರೋಹಿತ್ ಪೂಜಾರಿ ಮನೆ ಥಂಡಾಸ್ ಬಿಟ್ ವಿಷಯದಲ್ಲಿ ಹರೀಶ್ ರೆಡ್ಡಿ ಹಾಗೂ ಲೋಹಿತ್ ಪೂಜಾರಿ ನಡುವೆ ವೈಮನಸ್ಸಿದ್ದು, ಮೆಹೆಂದಿ ಕಾರ‍್ಯಕ್ರಮ ಮುಗಿಸಿ ಮನೆಗೆ ಲೋಹಿತ್ ಪೂಜಾರಿ ಬರುವ ಸಮಯದಲ್ಲಿ ಕೊಲೆ ಆಪಾದಿತರು ಫಾಲೋ ಮಾಡಿಕೊಂಡು ಬಂದಿದ್ದರು. ತನ್ನ ಮೇಲೆ ಹಲ್ಲೆ ನಡೆಯುತ್ತದೆ ಎಂಬ ಭಯದಲ್ಲಿ ಲೋಹಿತ್ ಪೂಜಾರಿ ಭರತ್ ಹಾಗೂ ಯತೀಶ್ ಅವರಿಗೆ ದೂರವಾಣಿ ಮೂಲಕ ಸಹಾಯ ಯಾಚಿಸಿದ್ದರು.

    ಕೋಟದಿಂದ ಭರತ್ ಹಾಗೂ ಯತೀಶ್ ಸ್ಥಳಕ್ಕೆ ಬಂದಿದ್ದು, ಮೊದಲು ಭರತ್ ಮೇಲೆ ತಲವಾರು ಧಾಳಿ ನಡೆಸಲಾಗಿತ್ತು. ಭರತ್ ಸ್ಥಳದಲ್ಲೇ ಮೃತಪಟ್ಟರೆ ಯತೀಶ್ ಆಸ್ಪತ್ರೆಗೆ ಹೋಗುವ ದಾರಿ ಮಧ್ಯೆ ಮೃತಪಟ್ಟಿದ್ದರು. ಕೊಲೆ ಕೃತ್ಯ ಖಂಡಿಸಿ, ಆರೋಗಿಗಳ ತಕ್ಷಣ ಬಂಧಿಸುವಂತೆ ಕೋಟದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಲ್ಲದೆ, ಕೋಟ ಶ್ರೀ ಅಮೃತೇಶ್ವರ ದೇವಸ್ಥಾಲದಲ್ಲಿ ಕೊಲೆ ಆಪಾದಿತರಿಗೆ ಶಿಕ್ಷೆ ನೀಡುವಂತೆ ಹುಯಿಲು ನೀಡಲಾಗುತ್ತು. ತನಿಕಾಧಿಕಾರಿ ಜೈಶಂಕರ್, ಬ್ರಹ್ಮಾವರ ವೃತ್ತ ನಿರೀಕ್ಷಕ ಶ್ರೀಕಾಂತ್ ಬಿಗಿ ಪೊಲೀಸ್ ಬಂದೋಬಸ್ತಿನಲ್ಲಿ ಅರೋಪಿಗಳ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

    Click here

    Click here

    Click here

    Click Here

    Call us

    Call us

    ಕೋಟ ಅವಳಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವ ಹಿನ್ನೆಲೆಯಲ್ಲಿ ಗುರುವಾರ ಪೊಲೀಸರು ಇಬ್ಬರ ಬಂಧಿಸಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಬೆಳಗ್ಗೆ ಎಂಟು ಹಾಗೂ ಮಧ್ಯಾಹ್ನ 8 ಜನ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಗುರುವಾರ ಬಂಧಿಸಿದ ರೋಪಿಗಳಾದ ಚಂದ್ರಶೇಖರ ರೆಡ್ಡಿ ಹಾಗೂ ಸುಜಯ್ ಎಂಬವರಿಗೆ ನ್ಯಾಯಾಧೀಶ ಶ್ರೀಕಾಮತ್ ಫೆ.20ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಿದ್ದಾರೆ.

    ಜಾಮೀನಿಗಾಗಿ ಅರ್ಜಿ
    ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ ಸಿಬ್ಬಂದಿ ಪವನ್ ಅಮೀನ್, ವಿರೇಂದ್ರ ಆಚಾರ್ಯ ಹಾಗೂ ಕಾಲೇಜ್ ವಿದ್ಯಾರ್ಥಿ ಪ್ರಣವ್ ರಾವ್ ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಹಿರಿಯ ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರ ಅರ್ಜಿ ಸಲ್ಲಿಸಿದರು. ಆಪಾದಿತರಾದ ಪವನ್ ಅಮೀನ್, ವಿರೇಂದ್ರ ಆಚಾರ್ಯ ಹಾಗೂ ಪ್ರಣವ್ ರಾವ್ ಘಟನೆಯಲ್ಲಿ ನೇರವಾಗಿ, ಒಳ ಸಂಚು ಹಾಗೂ ಪ್ರಚೋದನೆಯಲ್ಲಿ ಭಾಗಿಯಾಗಿಲ್ಲ. ಸಾಕ್ಷೀ ನಾಶ ಹಾಗೂ ಆರೋಪಿಗಳು ತಪ್ಪಿಸಿಕೊಳ್ಳಲು ಸಹಕರಿಸಿದ್ದಾರೆ ಎನ್ನುವ ಆರೋಪಗಳು ಜಾಮೀನು ಪರಿಗಣನೆಗೆ ಅರ್ಹವಾಗಿದ್ದು, ಜಾಮೀನು ಅರ್ಜಿ ಶೀಘ್ರವೇ ಇತ್ಯರ್ಥ ಪಡಿಸುವಂತೆ ಮನವಿ ಮಾಡಿದರು. ಪ್ರಾಸಿಕ್ಯೂಶನ್ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಸುಮಂಗಲ ನಾಯಕ್ ಮಂಡಿಸಲಿರುವುದರಿಂದಾಗಿ ಜಾಮೀನು ಅರ್ಜಿ ವಿಚಾರಣೆ ಶನಿವಾರಕ್ಕೆ ಮುಂದೂಡಲಾಗಿದೆ.

    ಇದನ್ನೂ ಓದಿ:
    ► ಕೋಟದಲ್ಲಿ ಯುವಕರಿಬ್ಬರ ಬರ್ಬರ ಕೊಲೆ – https://kundapraa.com/?p=30959 .
    ► ಕೋಟದಲ್ಲಿ ಸ್ನೇಹಿತರಿಬ್ಬರ ಕೊಲೆ: ರಸ್ತೆಯಲ್ಲಿ ಶವವಿಟ್ಟು ಪ್ರತಿಭಟನೆ – https://kundapraa.com/?p=30976 .
    ► ಸಾವಿನಲ್ಲೂ ಒಂದಾದ ಆಪ್ತ ಸ್ನೇಹಿತರು. ಮರುಗಿದ ಕೋಟ ಜನತೆ – https://kundapraa.com/?p=30979 .
    ► ಕೋಟ ಯುವಕರ ಹತ್ಯೆ ಪ್ರಕರಣ: ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ – https://kundapraa.com/?p=31009 .
    ► ಕೋಟ ಅವಳಿ ಕೊಲೆ ಪ್ರಕರಣ: ಜಿ.ಪಂ ಸದಸ್ಯ ರಾಘವೇಂದ್ರ ಕಾಂಚನ್ ಸೇರಿದಂತೆ 6 ಮಂದಿ ಬಂಧನ – https://kundapraa.com/?p=31071 .
    ► ಡಬ್ಬಲ್ ಮರ್ಡರ್​ ಆರೋಪಿಗಳ ಜೊತೆ ನಂಟು, ಇಬ್ಬರು ಪೇದೆಗಳ ಆರೆಸ್ಟ್​ – https://kundapraa.com/?p=31204 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    5 × 4 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.