ವಿದ್ಯಾರ್ಥಿಗಳಿಂದ ಮತದಾನ ಜಾಗೃತಿ ಜಾಥಾ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶುಭದಾ ಆಂಗ್ಲಮಾಧ್ಯಮ ಶಾಲೆಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಮತದಾನ ಸಾಕ್ಷರತಾ ಕ್ಲಬ್ ವಿದ್ಯಾರ್ಥಿಗಳಿಂದ ಮತದಾನ ಜಾಗೃತಿ ಜಾಥಾ ನಡೆಯಿತು.

Call us

Click Here

ಕಿರಿಮಂಜೇಶ್ವರದಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಆರಂಭಗೊಂಡು ಅರೆಹೊಳೆ ಮಾರ್ಗವಾಗಿ ಮೆರವಣಿಗೆಯ ಮೂಲಕ ಶಾಲೆಗೆ ಆಗಮಿಸಿದರು. ಮತದಾನದ ಕುರಿತು ವಿವಿಧ ಘೋಷಣೆಗಳ ನಾಮಫಲಕಗಳನ್ನು ಪ್ರದರ್ಶಿಸಿ, ಘೋಷಣೆಗಳ ಮೂಲಕ ಮತದಾನದ ಅರಿವು ಮೂಡಿಸಿದರು.

ಮುಖ್ಯ ಶಿಕ್ಷಕ ರವಿದಾಸ್ ಶೆಟ್ಟಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಭೋಧಿಸಿದರು. ವಿದ್ಯಾರ್ಥಿಗಳು, ಶಿಕ್ಷಕರು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಜಾಥಾದಲ್ಲಿ ಸಂಸ್ಥೆಯ ನಿರ್ದೇಶಕರು, ಸಂಚಾಲಕರು, ಶಿಕ್ಷಕರು ,ಶಾಲಾ ವಾಹನಚಾಲಕರು ಭಾಗವಹಿಸಿ ಜಾಥಾಕ್ಕೆ ಮೆರಗು ತಂದರು. ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ತಂಪು ಪಾನೀಯ ನೀಡಲಾಯತು. ಶಾಲೆಯ ಸ್ಥಾಪಕ ಅಧ್ಯಕ್ಷ ಡಾ. ಎನ್.ಕೆ.ಬಿಲ್ಲವರು ಜಾಥಾದಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದಿಸಿದರು.

Leave a Reply