ಕುಂದಾಪುರ: ಅಫಘಾತದಲ್ಲಿ ಗಾಯಗೊಂಡಿದ್ದ ಹೆಡ್ ಕಾನ್ಸ್ಟೇಬಲ್ ನಿಧನ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬ್ರಹ್ಮಾವರದಿಂದ ಬೈಕಿನಲ್ಲಿ ಬರುತ್ತಿದ್ದ ವೇಳೆ ಹಿಂದಿನಿಂದ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದ ಕುಂದಾಪುರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಚಂದ್ರಶೇಖರ್ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ. ಹೆಡ್ ಕಾನ್ಸ್ಟೇಬಲ್ ಚಂದ್ರಶೇಖರ್ (42) ಭಾನುವಾರ ಸಂಜೆ ಕರ್ತವ್ಯ ನಿಮಿತ್ತ ಬ್ರಹ್ಮಾವರದಿಂದ ಬರುತ್ತಿದ್ದ ವೇಳೆ ಮಾಬುಕಳ ಬ್ರಿಡ್ಜ್ ಬಳಿ ಅಪಘಾತ ನಡೆದಿದ್ದು ಟೆಂಪೋ ಚಾಲಕ ವಾಹನ ನಿಲ್ಲಿಸದೇ ಪರಾರಿಯಾಗಿದ್ದ. ಕುಂದಾಪ್ರ ಡಾಟ್ ಕಾಂ ಸುದ್ದಿ.

Call us

Click Here

ಅಪಘಾತದಿಂದ ಚಂದ್ರಶೇಖರ್ ರಸ್ತೆಗೆ ಬಿದ್ದು ಕುತ್ತಿಗೆ, ತಲೆಗೆ ಗಂಭೀರ ಗಾಯಗಳಾಗಿದ್ದು ಪ್ರಜ್ಞಾ ಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ಯಾರೂ ಕೂಡ ಅವರನ್ನು ಆಸ್ಪತ್ರೆಗೆ ಕೊಂಡೊಯ್ದಿರಲಿಲ್ಲ. ಅದೇ ವೇಳೆ ಉಡುಪಿಯಿಂದ ಚುನಾವಣಾ ವಿಚಾರದಲ್ಲಿ ಸಭೆ ಮುಗಿಸಿ ಆ ಮಾರ್ಗವಾಗಿ ಬರುತ್ತಿದ್ದ ಕುಂದಾಪುರ ಪಿಎಸ್ಐ ಹರೀಶ್ ಆರ್, ಹಾಗೂ ಚಾಲಕ ಲೋಕೇಶ್ ಮತ್ತು ಸಿಬ್ಬಂದಿಗಳು ಕೂಡಲೇ ಚಂದ್ರಶೇಖರ್ ಅವರನ್ನು ಕೂಡಲೇ ಮಣಿಪಾಲ ಆಸ್ಪತ್ರೆಗೆ ಸಾಗಿಸುವ ಕಾರ್ಯ ಮಾಡಿದ್ದರು. ಕಳೆದ ಇಪ್ಪತ್ತು ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಚಂದ್ರಶೇಖರ್ ಪ್ರಸ್ತುತ ಮೂರಾನ್ಲು ವರ್ಷಗಳಿಂದ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಸೇವೆಯಲ್ಲಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

 

Leave a Reply