ಪ್ರಧಾನಿ ಮೋದಿ ಅವರು ಕೇವಲ ವ್ಯಕ್ತಿಯಾಗಿರದೇ ದೇಶದ ಶಕ್ತಿಯಾಗಿದ್ದಾರೆ: ನಟಿ ತಾರಾ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನಲವತ್ತಾರು ಸಾವಿರ ಕೋಟಿ ರೂ. ರೈತರ ಸಾಲಮನ್ನಾ ಮಾಡಿದ್ದೇವೆಂದು ಹೇಳುತ್ತಿದ್ದಾರೆ. ಆದರೆ ಎಷ್ಟು ಜನ ರೈತರು ಇದರ ಪ್ರಯೋಜನ ಪಡೆದುಕೊಂಡಿದ್ದಾರೆ ಎಂಬುದು ಯಕ್ಷಪ್ರಶ್ನೆಯಾಗಿಯೇ ಉಳಿದಿದೆ. ಮನ್ನಾ ಮಾಡಿದ್ದೇವೆಂದು ಹೇಳುವವರು ರಾಜ್ಯದಲ್ಲಿ ನಡೆಯುವ ಎರಡನೇ ಹಂತದ ಚುನಾವಣೆಯ ಮುನ್ನಾವಾದರೂ ಶ್ವೇತಪತ್ರ ಹೊರಡಿಸಲಿ ಆಗ ಜನರಿಗೆ ಸತ್ಯಾಸತ್ಯತೆ ತಿಳಿಯುತ್ತದೆ ಎಂದು ರಾಜ್ಯ ಬಿಜೆಪಿ ನಾಯಕಿ, ಚಿತ್ರ ನಟಿ ತಾರಾ ಹೇಳಿದರು.

Call us

Click Here

ಇಲ್ಲಿನ ಬಿಜೆಪಿ ಕಛೇರಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರ ಸರಕಾರ ಕೃಷಿಕರ ಕಲ್ಯಾಣಕ್ಕಾಗಿ ಕಿಸಾನ್ ಸಮ್ಮಾನ್ ಯೋಜನೆ ಜಾರಿಗೆ ತಂದಿತ್ತು. ಆದರೆ ರಾಜ್ಯದಲ್ಲಿನ ಸಂಮಿಶ್ರ ಸರಕಾರ ಅರ್ಹ ರೈತರ ಪಟ್ಟಿಯನ್ನೇ ಕೇಂದ್ರಕ್ಕೆ ಸಮರ್ಪಕವಾಗಿ ನೀಡದೇ ಕೃಷಿಕರಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.

ಈಗ ಮೋದಿ ಅವರು ಕೇವಲ ವ್ಯಕ್ತಿಯಾಗಿರದೇ ದೇಶದ ಬಹುದೊಡ್ಡ ಶಕ್ತಿಯಾಗಿದ್ದಾರೆ. ೨೦೧೪ರಲ್ಲಿ ಕೇವಲ ಮೋದಿ ಅವರ ಹೆಸರಿನಲ್ಲಿ ಚುನಾವಣೆ ಎದುರಿತ್ತಿದ್ದೇವೆ. ಆದರೆ ಈಗ ಮೋದಿ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ದೇಶದ ಭದ್ರತೆಗಾಗಿ ಅವರಿಟ್ಟ ದಿಟ್ಟಹೆಜ್ಜೆಯನ್ನು ಇಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದೇವೆ. ಇಂದು ಸಮಾಜದ ಎಲ್ಲಾ ವರ್ಗದವರೂ ಬಿಜೆಪಿಯ ಬಗೆಗೆ ಒಲವು ಹೊಂದಿದ್ದಾರೆ. ಯುಪಿಎ ಸರಕಾರದ ಅವಧಿಯಲ್ಲಿ ಬೆಲೆ ಏರಿಕೆ ದೇಶದ ಜನರ ಸಮಸ್ಯೆಯಾಗಿತ್ತು. ಆದರೆ ಈಗ ಅದು ಚರ್ಚೆಗೆ ಬಂದಿಲ್ಲ. ಕೇಂದ್ರ ಸರಕಾರ ಮೀನುಗಾರರ ಕಲ್ಯಾಣಕ್ಕಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸುತ್ತಿರುವುದು ಮೀನುಗಾರರ ಬಗೆಗಿರುವ ಬದ್ಧತೆಯನ್ನು ತೋರಿಸುತ್ತದೆ ಎಂದರು.

ಕಳೆದ ಉಪಚುನಾವಣೆಯ ಬಳಿಕ ಕಡಿಮೆ ಅವಧಿಯಲ್ಲಿ ಸಂಸದರಾಗಿದ್ದ ರಾಘವೇಂದ್ರ ಅವರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಜನಮೆಚ್ಚುಗೆ ಗಳಿಸಿದ್ದಾರೆ ಎಂದ ಅವರು ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿಗೆ ಪ್ರಬಲ ಪೈಪೋಟಿ ನೀಡುತ್ತಿದ್ದ ಕಾಂಗ್ರೆಸ್ ಪಕ್ಷ ಇಂದು ಚಿಹ್ನೆಯನ್ನು ಕಳೆದುಕೊಂಡು ಅಸ್ತಿತ್ವವೇ ಇಲ್ಲದಂತಾಗಿದೆ ಎಂದರು. ಕಾಂಗ್ರೆಸ್ ಕಾರ್ಯಕರ್ತರದ್ದು ಮನೆ ಕಳೆದುಕೊಂಡಂತಹ ಪರಿಸ್ಥಿತಿಯಾಗಿದ್ದು ಬಲವಂತವಾಗಿ ಜೆಡಿಎಸ್‌ನೊಂದಿಗೆ ಕೈಜೊಡಿಸುವ ದುಸ್ಥಿತಿ ಬಂದೊದಗಿದೆ ಎಂದು ಟೀಕಿಸಿದರು.

Click here

Click here

Click here

Click Here

Call us

Call us

ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು ಅಲ್ಲಿ ಇಬ್ಬರೂ ಅಭ್ಯರ್ಥಿಗಳು ಸಿನೆಮಾ ಹಿನ್ನೆಲೆ ಬಂದವರಾಗಿದ್ದರಿಂದ ಸಹಜವಾಗಿ ಜನರಲ್ಲಿ ಕುತೂಹಲವಿತ್ತು. ಅಲ್ಲದೇ ಅಂಬರೀಶ್ ಪತ್ನಿ, ಮುಖ್ಯಮಂತ್ರಿ ಮಗ ಎನ್ನುವ ಕಾರಣಕ್ಕೆ ಇನ್ನಷ್ಟು ಹೈಪ್ರೊಪೈಲ್ ಪಡೆದಿತ್ತು. ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆಲ್ಲುವ ವಿಶ್ವಾಸವಿದೆ ಎಂದರು. ಸುಶಿಕ್ಷಿತರೇ ಇರುವ ಬೆಂಗಳೂರು ನಗರದಲ್ಲಿ ಮತದಾನದ ಪ್ರಮಾಣ ಕುಸಿದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಚುನಾವಣಾ ಆಯೋಗ ಸಾಕಷ್ಟು ಜಾಗೃತಿ ಮೂಡಿಸಿದ ಹೊರತಾಗಿಯೂ ಕಡಿಮೆ ಪ್ರಮಾಣದಲ್ಲಿ ಮತದಾನ ಆಗಿರುವುದು ವಿಷಾದನೀಯ ಸಂಗತಿ ಎಂದರು.

ಶಾಸಕ ಬಿ. ಎಂ ಸುಕುಮಾರ ಶೆಟ್ಟಿ ಮಾತನಾಡಿ ಬೈಂದೂರು ವಿಧಾಸಭಾ ಕ್ಷೇತ್ರದ ಏಳು ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಬಲಿಷ್ಠವಾಗಿದೆ. ಈ ಭಾರಿ ಮೋದಿ ಹವಾ ಇನ್ನಷ್ಟು ಹೆಚ್ಚಾಗಿದ್ದು ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರಿಗೆ ೫೦ ಸಾವಿರಕ್ಕೂ ಅಧಿಕ ಅಂತರ ದೊರಕಿಸಿಕೊಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಕ್ಷೇತ್ರಾಧ್ಯಕ್ಷ ಸದಾನಂದ ಉಪ್ಪಿನಕುದ್ರು, ಮುಖಂಡರಾದ ದೀಪಕ್‌ಕುಮಾರ್ ಶೆಟ್ಟಿ, ರಾಮಚಂದ್ರ ಬೈಕಂಪಾಡಿ, ಬಾಲಚಂದ್ರ ಭಟ್, ಪ್ರವೀಣ ಗುರ್ಮೆ, ಸುರೇಶ್ ಬಂಟ್ವಾಡಿ, ಶರತ್ ಶೆಟ್ಟಿ, ಪ್ರಿಯದರ್ಶಿನಿ ಮೊದಲಾದವರು ಉಪಸ್ಥಿತರಿದ್ದರು.

Leave a Reply