ಕುಂದಾಪುರ: ರಾಜ್ಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಆಡಳಿತ) ಆಲೋಕ್‌ಮೋಹನ್ ಅವರು ಕುಂದಾಪುರದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಕಾರ್ಯ ವೈಖರಿ, ನಕ್ಸ್‌ಲ್ ಚಟುವಟಿಕೆ ಹಾಗೂ ಕಾನೂನು ಸುವಸ್ಥೆಯ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಿದರು.
ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕರಾದ ಅಮ್ರೀತ್‌ಪಾಲ್, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸಂತೋಷ್‌ಕುಮಾರ, ಕುಂದಾಪುರ ಪೊಲೀಸ್ ಉಪವಿಭಾಗದ ಡಿವೈಎಸ್‌ಪಿ ಎಂ.ಮಂಜುನಾಥ ಶೆಟ್ಟಿ, ಉಡುಪಿ ಪೊಲೀಸ್ ಉಪವಿಭಾಗದ ಡಿವೈಎಸ್‌ಪಿ ಚಂದ್ರಶೇಖರ, ಸರ್ಕಲ್ ಇನ್ಸ್‌ಪೆಕ್ಟರ್‌ಗಳಾದ ಗಿರೀಶ್, ದಿವಾಕರ ಪಿ.ಎಂ, ಶ್ರೀಕಾಂತ್, ಸುದರ್ಶನ್, ಸುನೀಲ್ ನಾಯಕ್ ಹಾಗೂ ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಕೊಲ್ಲೂರಿಗೆ ಭೇಟಿ: ಪತ್ನಿ ಸಮೇತರಾಗಿ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದ ರಾಜ್ಯದ ಪೊಲೀಸ್ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆಲೋಕ್‌ಮೋಹನ್ ದೇವರ ದರ್ಶನ ಪಡೆದು, ಅರ್ಚಕರ ಮೂಲಕ ವಿಶೇಷ ಪೂಜೆ ಸಲ್ಲಿಸಿದರು. ಇದೆ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೃಷ್ಣಪ್ರಸಾದ ಅಡ್ಯಂತಾಯ ದಂಪತಿಗಳನ್ನು ದೇವಸ್ಥಾನದ ವತಿಯಿಂದ ಗೌರವಿಸಿದರು.