ಆರೋಗ್ಯ ಸಲಹೆ: ಹೆಚ್1ಎನ್1 – ಇರಲಿ ಮುನ್ನೆಚ್ಚರಿಕೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಮಾಹಿತಿ.
ಕುಂದಾಪುರ: ರಾಜ್ಯದ ವಿವಿಧ ಭಾಗಗಳಲ್ಲಿ ಶ್ವಾಸಕೋಶದ ಸೋಂಕು ಕಾಣಿಸಿಕೊಂಡು ನೆಗಡಿ, ಕೆಮ್ಮು, ಜ್ವರದ ಜೊತೆಗೆ ಉಸಿರಾಟದ ತೊಂದರೆಯಿಂದ ಜನರು ಆಸ್ಪತ್ರೆಗೆ ದಾಖಲಾಗಿದ್ದು, ಪರೀಕ್ಷಿಸಿದಾಗ ಹೆಚ್1ಎನ್1 ಸೋಂಕು ಪತ್ತೆಯಾಗಿತ್ತು. ಕುಂದಾಪುರ ತಾಲೂಕಿನಲ್ಲಿಯೂ ಕೆಲವೊಂದು ಪ್ರಕರಣಗಳು ವರದಿಯಾಗುತ್ತಿದ್ದು, ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

Call us

Click Here

ಹೆಚ್1ಎನ್1 ಇನ್‌ಪ್ಲೂಯೆಂಜಾ ಸಾಮಾನ್ಯ ಫ್ಲೂ ಹರಡುವ ರೀತಿಯಲ್ಲಿಯೇ ಹರಡುತ್ತದೆ. ಸಾಮಾನ್ಯವಾಗಿ ಸೋಂಕಿತರು ಕೆಮ್ಮಿದಾಗ ಸೀನಿದಾಗ ಈ ವೈರಸ್ ಹರಡುತ್ತದೆ.

ಮುಂಜಾಗೃತ ಕ್ರಮಗಳು: ಕೆಮ್ಮುವಾಗ ಅಥವಾ ಸೀನುವಾಗ ಬಾಯಿ ಮತ್ತು ಮೂಗಿಗೆ ಕರವಸ್ತ್ರವನ್ನು ಅಡ್ಡವಾಗಿ ಇಡುವುದು ಮತ್ತು ಉಪಯೋಗಿಸಿದ ಕರವಸ್ತ್ರವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವುದು. ಕೈಗಳನ್ನು ಸಾಬೂನಿನಿಂದ ಮತ್ತು ನೀರಿನಿಂದ ಚೆನ್ನಾಗಿ ತೊಳೆದುಕೊಳ್ಳಬೇಕು. ಕಣ್ಣು, ಮೂಗು, ಬಾಯಿಯನ್ನು ಕೈ ತೊಳೆಯದೇ ಮುಟ್ಟಬಾರದು. ಅತಿಯಾಗಿ ಜನಸಂದಣಿ ಇರುವ ಸ್ಥಳದಲ್ಲಿ ಹೋಗುವುದನ್ನು ತಪ್ಪಿಸುವುದು. ಫ್ಲೂ, ಜ್ವರದಿಂದ ಬಳಲುತ್ತಿರುವ ವ್ಯಕ್ತಿಗಳಿಂದ ದೂರವಿರಬೇಕು. ರಸ್ತೆಯಲ್ಲಿ ಅಥವಾ ಜನವಿರುವ ಪ್ರದೇಶದಲ್ಲಿ ಉಗುಳಬಾರದು. ವೈದ್ಯರ ಸಲಹೆ ಇಲ್ಲದೆ ಔಷಧಿ ತೆಗೆದು ಕೊಳ್ಳಬಾರದು. ವೈಯಕ್ತಿಕ ಸ್ವಚ್ಚತೆ ಪಾಲಿಸಿ, ಸ್ನಾನ ಮಾಡಿ ಶುಭ್ರ ಭಟ್ಟೆ ಧರಿಸುವುದು.

ಹೆಚ್1ಎನ್1 ಲಕ್ಷಣಗಳು: ಉಸಿರಾಟದ ತೊಂದರೆ, ಜ್ವರ, ಕೆಮ್ಮು, ಮೂಗಿನ ಸೋರುವಿಕೆ, ಮೈ ಕೈ ನೋವು, ಚಳಿ, ಸುಸ್ತು, ಚರ್ಮದ ಅಥವಾ ತುಟಿಗಳ ನೀಲಿ ಬಣ್ಣ, ಕಫದಲ್ಲಿ ರಕ್ತ ಕಾಣಿಸಿಕೊಳ್ಳುವುದು ಈ ರೀತಿ ಲಕ್ಷಣಗಳು ಕಂಡುಬಂದರೆ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಬೇಕು ಅಥವಾ ಆರೋಗ್ಯ ಕಾರ್ಯಕರ್ತರು / ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಸೂಕ್ತ ಮಾಹಿತಿಯನ್ನು ಪಡೆದುಕೊಳ್ಳುವುದು.

 

Click here

Click here

Click here

Click Here

Call us

Call us

Leave a Reply