ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುವೈತ್/ಕುಂದಾಪುರ: ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆ, ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಇತ್ತೀಚೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನೆಡೆದ 44ನೆಯ ವಾರ್ಷಿಕ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸುರೇಶ್ ಶ್ಯಾಮ್ ರಾವ್ ನೇರಂಬಳ್ಳಿ ಅವರಿಗೆ ಈ ಸಾಲಿನ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಯಿತು.
ಸುರೇಶ್ ಅವರು ಕಳೆದ 17 ವರ್ಷಗಳಿಂದ ಕುವೈತ್ ನಲ್ಲಿ ಹಲವಾರು ಸಂಘ-ಸಂಸ್ಥೆಗಳ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ, ಕುವೈತ್‌ನಲ್ಲಿ ಕನ್ನಡ ಚಲನಚಿತ್ರ ವಿತರಕರಾಗಿ, ಸಾಹಿತ್ಯ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ವಿಶೇಷವಾಗಿ ಸಾಮಾಜಿಕ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿರುವುದಕ್ಕಾಗಿ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.
ಹೈಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ನಾಗಮೋಹನ ದಾಸ್, ಡಾ|ಮಹೇಶ್ ಜೋಷಿ, ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್. ಎ. ಚನ್ನೇಗೌಡ, ಆರ್ಯಭಟ ಸಾಂಸ್ಕೃತಿಕ ಸಂಸ್ಥೆ ಸ್ಥಾಪಕಾಧ್ಯಕ್ಷ ಡಾ|ಎಚ್.ಎಲ್.ಎನ್. ರಾವ್ ರವರು ಉಪಸ್ಥಿತರಿದ್ದು ಪ್ರಶಸ್ತಿ ಪ್ರದಾನ ನೆರವೇರಿಸಿದರು.