ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಉತ್ತರ ಕರ್ನಾಟಕದ ನೆರೆ ಸಂತ್ರಸ್ತರ ಸಂಕಷ್ಟಕ್ಕೆ ಮಿಡಿದ ಬೈಂದೂರು ಯುವ ಕಾಂಗ್ರೆಸ್ ಕಾರ್ಯಕರ್ತರ ತಂಡ ಭಾನುವಾರ ಮಾಜಿ ಶಾಸಕ ಗೋಪಾಲ ಪೂಜಾರಿಯವರ ಸೂಚನೆ ಮೇರೆಗೆ ಬೈಂದೂರು ಪೇಟೆಯಲ್ಲಿ ಪರಿಹಾರ ಸಾಮಾಗ್ರಿ ಸಂಗ್ರಹಣೆ ಕಾರ್ಯ ನಡೆಸಿತು.
ಈ ಸಂದರ್ಭ ಬ್ಲಾಕ್ ಅಧ್ಯಕ್ಷ ಮದನ್ ಕುಮಾರ್, ವಂಡ್ಸೆ ಬ್ಲಾಕ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ, ಮುಖಂಡರುಗಳಾದ ಎಸ್. ರಾಜು ಪೂಜಾರಿ, ಪ್ರಕಾಶ್ಚಂದ್ರ ಶೆಟ್ಟಿ, ಮೋಹನ್ ಪೂಜಾರಿ, ಜಿಲ್ಲಾ ಪಂಚಾಯತ್ ಸದಸ್ಯೆ ಗೌರಿ ದೇವಾಡಿಗ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಶೇಖರ್ ಪೂಜಾರಿ, ತಾಲೂಕು ಪಂಚಾಯತ್ ಸದಸ್ಯ ಜಗದೀಶ್ ದೇವಾಡಿಗ, ಯಡ್ತರೆ ಪಂಚಾಯತ್ ಅಧ್ಯಕ್ಷೆ ಮೂಕಾಂಬು ದೇವಾಡಿಗ, ಸದಸ್ಯ ಉಮೆಶ್ ದೇವಾಡಿಗ, ವಾಸು ಪೂಜಾರಿ, ದೀಪಕ್ ನಾವುಂದ, ಸನತ್ ಬಳೆಗಾರ್ ಕೊಲ್ಲೂರು, ಪ್ರಶಾಂತ್ ಪೂಜಾರಿ ಕರ್ಕಿ, ವಿಜಯ್ ನಾಗೂರು, ಜಯಂತ್ ಬಡಾಕೆರೆ, ಹರೀಶ್ ಮರವಂತೆ, ವಿನಾಯಕ್ ಕೊಲ್ಲೂರು, ಸೋಮಶೇಖರ್ ಮೊದಲಾದವರು ಪಾಲ್ಗೊಂಡರು.