ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ತಾಲೂಕು ಆಡಳಿತದ ವತಿಯಿಂದ ಬೈಂದೂರು ಗಾಂಧಿ ಮೈದಾನದಲ್ಲಿ ಮೊದಲ ಭಾರಿಗೆ ಸ್ವಾತಂತ್ರ್ಯ ದಿನಾಚರಣೆ ಜರುಗಿತು.
ಬೈಂದೂರು ತಹಶೀಲ್ದಾರ್ ಬಸಪ್ಪ ಪಿ. ಪೂಜಾರ್ ಧ್ವಜಾರೋಹಣ ನೇರವೇರಿಸಿ ಮಾತನಾಡಿ ದೇಶದ ಸ್ವಾತಂತ್ರ್ಯಕ್ಕಾಗಿ ಕೆಚ್ಚೆದೆಯಿಂದ ಹೋರಾಡಿದ ಧೀರರನ್ನು, ಅಸಂಖ್ಯಾತ ಹೋರಾಟಗಾರರನ್ನು ಅಗತ್ಯವಾಗಿ ಸ್ಮರಿಸಿಕೊಳ್ಳಬೇಕಿದೆ. ಎಲ್ಲರ ತ್ಯಾಗವನ್ನು ಮರೆಯದೇ, ನಾವುಗಳು ಭವ್ಯ ರಾಷ್ಟ್ರ ನಿರ್ಮಾಣದಲ್ಲಿ ತೊಡಿಸಿಕೊಳ್ಳಬೇಕಿದೆ.
ಕರ್ತವ್ಯದ ಪ್ರಾಮಾಣಿಕ ನಿರ್ವಹಣೆ ಹಾಗೂ ಜವಾಬ್ದಾರಿಯನ್ನು ಅರಿತು ಮುನ್ನಡೆಯಬೇಕಾದ ಸಂದರ್ಭವಿದು. ಯುವ ಜನತೆ ಎಲ್ಲಾ ಕ್ಷೇತ್ರದಲ್ಲಿಯೂ ಅರ್ಪಣಾ ಭಾವದಿಂದ ತೊಡಗಿಸಿಕೊಳ್ಳಬೇಕು. ಸಹಬಾಳ್ವೆ ಸಾಮರಸ್ಯವೇ ನಮ್ಮ ಜೀವನದ ಗುರಿಯಾಗಬೇಕು ಎಂದವರು. ಸಂದೇಶವಿತ್ತರು.
ಈ ಸಂದರ್ಭ ತಾಲೂಕು ಪಂಚಾಯತ್ ಅಧ್ಯಕ್ಷೆ ಶ್ಯಾಮಲಾ ಕುಂದರ್, ಯಡ್ತರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಮೂಕಾಂಬು ದೇವಾಡಿಗ, ಪೊಲೀಸ್ ವೃತ್ತನಿರೀಕ್ಷಕ ಪರಮೇಶ್ವರ ಗುನಗ, ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಶಂಕರ ಪೂಜಾರಿ, ಗೌರಿ ದೇವಾಡಿಗ, ಸುರೇಶ ಬಟವಾಡಿ, ತಾಲೂಕು ಪಂಚಾಯತ್ ಸದಸ್ಯರುಗಳಾದ ಸುಜಾತ ದೇವಾಡಿಗ, ಮಾಲಿನಿ ಕೆ, ಜಗದೀಶ ದೇವಾಡಿಗ, ಪುಪ್ಪರಾಜ ಶೆಟ್ಟಿ, ಬೈಂದೂರು ತಾಲೂಕು ಹೋರಾಟ ಸಮಿತಿ ಅಧ್ಯಕ್ಷ ಬಿ. ಜಗನ್ನಾಥ ಶೆಟ್ಟಿ, ಹೋಂಗಾರ್ಡ್‌ನ ರಾಘವೇಂದ್ರ ಎಂ., ಜಿ.ಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಕೊಲ್ಲೂರು ಮೂಕಾಂಬಿಕಾ ದೇವಳದ ಮಾಜಿ ಧರ್ಮದರ್ಶಿ ಜಯಾನಂದ ಹೋಬಳಿದಾರ್, ಯಡ್ತರೆ ಗ್ರಾಮ ಪಂಚಾಯತ್ ಸದಸ್ಯರುಗಳು, ದೀಪಕ್‌ಕುಮಾರ್ ಶೆಟ್ಟಿ, ಶರತ್‌ಕುಮಾರ್ ಶೆಟ್ಟಿ, ಪ್ರಿಯದರ್ಶಿನಿ ಬೆಸ್ಕೂರು, ಸುಬ್ರಹ್ಮಣ್ಯ ಬಿಜೂರು ತಾಲೂಕು ಮಟ್ಟದ ಅಧಿಕಾರಿಗಳು, ಶಾಲಾ ಶಿಕ್ಷಕರು ಇದ್ದರು.
ಈ ಸಂದರ್ಭ ಬೈಂದೂರು ಠಾಣಾಧಿಕಾರಿ ಬಿ. ಎನ್. ತಿಮ್ಮೇಶ್ ಗೌರವ ವಂದನೆ ಸಲ್ಲಿಸಿದರು. ಸಭಾ ಕಾರ್ಯಕ್ರಮದಲ್ಲಿ ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ವಿವಿಧ ಶಾಲಾಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.