ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಲಕ್ಷಾಂತರ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಕಾರಣರಾಗುವ, ದೇಶ ಕಟ್ಟುವ ಶಕ್ತಿ ಇರುವ ಅಧ್ಯಾಪನವೇ ಶ್ರೇಷ್ಠ ವೃತ್ತಿ. ದೇವರಿಗೂ ಗುರುವಿಗೂ ಸಮಾನ ಸ್ಥಾನ ನೀಡುವುದರ ಹಿಂದೆ ಆ ವೃತ್ತಿಯ ಘನತೆ ಅಡಗಿದೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು, ಕ್ಷೇತ್ರ ಸಂಪನ್ಮೂಲ ಕಛೇರಿ ಸಂಯುಕ್ತಾಶ್ರಯದಲ್ಲಿ ಸರ್ವಪಳ್ಳಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರಾಥಮಿಕ ಹಂತದಲ್ಲಿ ಗುರು ಶಿಷ್ಯರ ಸಂಬಂಧ ಗಾಡವಾಗಿರುತ್ತದೆ. ಶಿಕ್ಷಕರ ಮಾತೇ ಮಕ್ಕಳಿಗೆ ವೇದವಾಕ್ಯದಂತಿರುತ್ತದೆ. ವ್ಯಕ್ತಿ ಎಷ್ಟೇ ದೊಡ್ಡವನಾದರೂ ತನ್ನ ಬಾಲ್ಯದಲ್ಲಿ ಕಲಿಸಿದ ಶಿಕ್ಷಕರನ್ನು ಮರೆಯಲಾರ ಎಂದ ಅವರು ಸಮಾಜ ಕಟ್ಟ ಕಡೆಯ ಮಗುವಿಗೂ ಶಿಕ್ಷಣ ದೊರೆಯುವಂತಾದರೆ ದೇಶ ಉನ್ನತಿಯನ್ನು ಸಾಧಿಸಲು ಸಾಧ್ಯ ಎಂದರು.
ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಟಿ. ಬಾಬು ಶೆಟ್ಟಿ, ತಾಲೂಕು ಪಂಚಾಯತ್ ಅಧ್ಯಕ್ಷ ಶ್ಯಾಮಲಾ ಕುಂದರ್, ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಶಂಕರ ಪೂಜಾರಿ, ಸುರೇಶ್ ಬಟವಾಡಿ, ಗೌರಿ ದೇವಾಡಿಗ, ಶೋಭಾ ಜಿ. ಪುತ್ರನ್, ತಾಲೂಕು ಪಂಚಾಯತ್ ಸದಸ್ಯರುಗಳಾದ ಜಗದೀಶ ದೇವಾಡಿಗ, ಪುಪ್ಪರಾಜ ಶೆಟ್ಟಿ, ಮಾಲಿನಿ ಕೆ., ಸುಜಾತ ದೇವಾಡಿಗ, ಪ್ರಮೀಳಾ ದೇವಾಡಿಗ, ರಾಜು ದೇವಾಡಿಗ, ಕೆರ್ಗಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಸೋಮು, ಕುಂದಾಪುರ ಲೈಯನ್ಸ್ ಕೋಸ್ಟಲ್ ಸೈಡ್ ಅಧ್ಯಕ್ಷರಾದ ಅಶೋಕ್ ಶೆಟ್ಟಿ, ಸರಕಾರಿ ನೌಕರರ ಸಂಘದ ಅಧ್ಯಕ್ಷ ದಿನಕರ ಶೆಟ್ಟಿ, ಬೈಂದೂರು ತಾಲೂಕು ಕಾರ್ಯನಿರ್ವಹಣಾಧಿಕಾರಿ ಭಾರತಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಡಾ. ಕಿಶೋರ್ ಕುಮಾರ್ ಶೆಟ್ಟಿ, ಎಸ್‌ಸಿ. ಎಸ್‌ಟಿ ಶಿಕ್ಷಕರ ಸಂಘದ ಅಧ್ಯಕ್ಷ ವೆಂಕಪ್ಪ ಉಪ್ಪಾರ್, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಂದ್ರ ಶೆಟ್ಟಿ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪ್ರವೀಣ ಶೆಟ್ಟಿ, ಭಡ್ತಿ ಹೊಂದಿದ ಪ್ರೌಢಶಾಲಾ ಸಹ ಶೀಕ್ಷಕರ ಸಂಘದ ಅಧ್ಯಕ್ಷ ಕೇಶವ ನಾಯ್ಕ್, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಮಹಾಬಲ ಕೆ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ರಾಜೀವ ಶೆಟ್ಟಿ, ವಿವಿಧ ಶಿಕ್ಷಕರ ಸಂಘಗಳ ಅಧ್ಯಕ್ಷರುಗಳಾದ ಚಂದ್ರ ದಏವಾಡಿಗ, ಮಂಜುನಾಥ ದೇವಾಡಿಗ, ಶೇಖರ ಪೂಜಾರಿ ಮೊದಲಾದವು ಉಪಸ್ಥಿತರಿದ್ದರು.
ಸರ್ವಪಳ್ಳಿ ರಾಧಾಕೃಷ್ಣನ್ ಅವರ ಪೋಟೋಗೆ ಪುಪ್ಪನಮನ ಸಲ್ಲಿಸಲಾಯಿತು. ನಿವೃತ್ತ ಶಿಕ್ಷಕರುಗಳನ್ನು ಸನ್ಮಾನಿಸಲಾಯಿತು. ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಜ್ಯೋತಿ ಶ್ರೀನಿವಾಸ್ ಸ್ವಾಗತಿಸಿ, ಸುಬ್ರಹ್ಮಣ್ಯ ಉಪ್ಪುಂದ, ಅಬ್ದುಲ್ ರವೂಫ್ ಕಾರ್ಯಕ್ರಮ ನಿರೂಪಿಸಿದರು.
► ಶಿಕ್ಷಕರಿಂದ ಪ್ರಜ್ಞಾವಂತ ನಾಗರಿಕರ ಸೃಷ್ಟಿಸುವ ಕಾರ್ಯ – https://kundapraa.com/?p=32979 .