ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ೨೬ ವರ್ಷಗಳ ಕಾಲ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಸಿಬ್ಬಂದಿ ರಮೇಶ್ ಅಡಿಗ ಅವರಿಗೆ ಅವರಿಗೆ ಸಂಸ್ಥೆಯ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.
ಸಹಕಾರಿ ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಚಿನ್ನದ ಉಂಗುರ ತೊಡಿಸಿ ಸನ್ಮಾನಿಸಿ ಮಾತನಾಡಿ ಯಾವುದೇ ಸಂಸ್ಥೆಯಲ್ಲಿ ಸೇವಾ ಮನೋಭಾವದ ಆಡಳಿತ ಮಂಡಳಿಯ ಜೊತೆಗೆ ಉತ್ತಮ ಸಿಬ್ಬಂದಿ ಇದ್ದರೆ ಅದರ ಯಶಸ್ಸು ಕಾಣಲು ಸಾಧ್ಯವಿದೆ. ರಮೇಶ್ ಅಡಿಗ ಅವರು ಶಿಸ್ತು ಹಾಗೂ ಸಂಸ್ಥೆಯ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸಿ ಸಂಸ್ಥೆಯ ಏಳ್ಗೆಯಲ್ಲಿ ಶ್ರಮಿಸಿದ್ದಾರೆ ಎಂದರು.
ಸಂಘದ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಅಭಿನಂದಿಸಿದರು. ಈ ಸಂದರ್ಭ ಸಂಸ್ಥೆಯ ಉಪಾಧ್ಯಕ್ಷ ಎಂ. ಚಂದ್ರಶೀಲ ಶೆಟ್ಟಿ, ನಿರ್ದೇಶಕರಾದ ಭೋಜ ನಾಯ್ಕ್, ಜಗದೀಶ್ ಪಿ. ಪೂಜಾರಿ, ರಾಮಕೃಷ್ಣ ಖಾರ್ವಿ, ಪ್ರಕಾಶ ದೇವಾಡಿಗ, ನಾಗಮ್ಮ, ಮಂಜು ಪೂಜಾರಿ, ವಿಠಲ ಗೌಡ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಜೀವ ಮಡಿವಾಳ ಇದ್ದರು.
ನಿರ್ದೇಶಕ ಎಂ. ವಿನಾಯಕ ರಾವ್ ಸ್ವಾಗತಿಸಿ, ನಿರ್ದೇಶಕ ವಾಸು ಪೂಜಾರಿ ವಂದಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು.
















