ಪ್ರೀತಿ, ವಿಶ್ವಾಸ ಹಾಗೂ ಮನುಷ್ಯತ್ವದಿಂದ ಸದೃಢ ಸಮಾಜ ನಿರ್ಮಾಣ ಸಾಧ್ಯ : ಎಸ್. ರಾಜು ಪೂಜಾರಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಜನರಲ್ಲಿ ಸಾತ್ವಿಕತೆ ಬೆಳೆಯುವ ಉದ್ದೇಶದಿಂದ ಯುವಜನತೆಗೆ ಗುರುಗಳ ಸಂದೇಶವನ್ನು ತಿಳಿಸುವ ಮೂಲಕ ಮುಂದಿನ ಪೀಳಿಗೆಗೂ ವಿಸ್ತರಿಸಬೇಕಾಗಿದೆ. ಪ್ರೀತಿ, ವಿಶ್ವಾಸ ಹಾಗೂ ಮನುಷ್ಯತ್ವದ ಸದೃಢ ವಿಚಾರಗಳಿಂದ ಬಲಿಷ್ಠ ರಾಷ್ಟ್ರ ನಿರ್ಮಿಸಲು ಎಲ್ಲರನ್ನು ಒಟ್ಟುಗೂಡಿಸಲು ಸಾಧ್ಯವಿದೆ ಎಂದು ಜಿಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು.

Call us

Click Here

ಯಡ್ತರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಭಾಂಗಣದಲ್ಲಿ ಭಾನುವಾರ ಸ್ಥಳೀಯ ಬಿಲ್ಲವ ಸಮಾಜ ಸೇವಾ ಸಂಘ ಆಯೋಜಿಸಿದ ಬ್ರಹ್ಮಶ್ರೀ ನಾರಾಯಣ ಗುರು ಜನ್ಮದಿನಾಚರಣೆಯಲ್ಲಿ ಗುರುಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು ಒಂದೇ ಜಾತಿ, ಒಂದೇ ಮತ, ಒಬ್ಬನೇ ದೇವರು ಎನ್ನುವ ಸರಳ ಸಂದೇಶವನ್ನು ವಿಶ್ವಕ್ಕೆ ನೀಡಿದ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದ ಸಾರ್ವಕಾಲಿಕ ಸಿದ್ಧಾಂತ, ಸಾಮಾಜಿಕ ನ್ಯಾಯ ಪರಿಕಲ್ಪನೆಯೊಂದಿಗೆ ಇಂದಿನ ಯುವ ಪೀಳಿಗೆ ಹೆಜ್ಜೆ ಇಡಬೇಕು. ಮನುಷ್ಯ ಮನುಷ್ಯರ ನಡುವೆ ಬಾಂದ್ಯವ ವೃದ್ಧಿಸಬೇಕು. ಪ್ರೀತಿ ವಿಶ್ವಾಸಗಳಿಂದ ಬಾಳಬೇಕು ಎಂದರು.

ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ಮ್ಯಾನೆಜಿಂಗ್ ಟ್ರಸ್ಟಿ ಗೋವಿಂದ ಬಾಬು ಪೂಜಾರಿ ಮಾತನಾಡಿ ಇಂದು ಯುವ ಸಮುದಾಯ ಧಾರ್ಮಿಕ, ಸಾಮಾಜಿಕ ಪ್ರಜ್ಞೆ, ಕಾಳಜಿ ಇಲ್ಲದೆ ಸೂತ್ರ ಹರಿದ ಗಾಳಿಪಟದಂತಾಗಿದೆ. ನಿರ್ದಿಷ್ಟವಾದ ಗುರಿ, ಚೌಕಟ್ಟು ಬದುಕಿಗೆ ಇಲ್ಲವಾದರೆ ಜೀವನದ ಅರ್ಥವೇ ಕೆಟ್ಟು ಹೋಗುತ್ತದೆ. ಸಂಸ್ಕಾರವಂತರಾಗಿ ಸಮಾಜದಲ್ಲಿ ಉತ್ತಮ ಜೀವನ ನಡೆಸುವಂತಾಗಬೇಕು. ನಾವು ನಮ್ಮಲ್ಲಿನ ಜಾತಿಯನ್ನು ಕಿತ್ತೊಗೆದು ಒಟ್ಟಾಗಿ, ರಾಜಕೀಯ ಷಡ್ಯಂತ್ರವನ್ನು ಬದಿಗೊತ್ತಿ ಸಂಘಟಿತರಾಗಬೇಕಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ದೊಟ್ಟಯ್ಯ ಪೂಜಾರಿ ಸ್ವಾಗತಿಸಿದರು. ಸಮುದಾಯದ ಹಿರಿಯರಾದ ಕಾಡಿಗುಂಡಿ ಗೋವಿಂದ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ಮುಖಂಡರಾದ ಉದ್ಯಮಿ ಗೋವಿಂದ ಬಾಬು ಪೂಜಾರಿ, ಬೈಂದೂರು ಗ್ರಾಪಂ ಉಪಾಧ್ಯಕ್ಷ ಎಸ್. ವೆಂಕಟ ಪೂಜಾರಿ, ಸದಸ್ಯರಾದ ಗೋಪಾಲ ಪೂಜಾರಿ, ರಾಧಾ ಪೂಜಾರಿ, ಕುಪ್ಪಯ್ಯ ಪೂಜಾರಿ, ಕೃಷ್ಣ ಪೂಜಾರಿ, ಉಪಸ್ಥಿತರಿದ್ದರು. ಗಣೇಶ ಪೂಜಾರಿ ಪ್ರಾಸ್ತಾವಿಸಿ, ಕಿಶೋರ್ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು.

Leave a Reply