ಕುಂದಾಪ್ರ ಡಾಟ್ ಕಾಂ ಸುದ್ದಿ.
ಬ್ರಹ್ಮಾವರ : ವಿದ್ಯಾಲಕ್ಷ್ಮೀ ಗ್ರೂಪ್ ಆಪ್ ಇನ್‌ಸ್ಟಿಟ್ಯೂಷನ್ ಬ್ರಹ್ಮಾವರ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಬ್ರಹ್ಮಾವರ ಇದರ ಸಹಯೋಗದೋಂದಿಗೆ ಕಾಲೇಜಿನ ವಿದ್ಯಾರ್ಥಿಗಳಿಗೆ ಹದಿಹರೆಯದ ಸಮಸ್ಯೆಗಳು ಹಾಗೂ ಸಾಂಕ್ರಾಮಿಕ ರೋಗದ ಮಾಹಿತಿ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಯಿತು.
ಸಮುದಾಯ ಆರೋಗ್ಯ ಕೇಂದ್ರ ಬ್ರಹ್ಮಾವರ ಇದರ ವೈಧ್ಯಾಧಿಕಾರಿಗಳಾದ ಡಾ.ದೀಕ್ಷಿತಾ ಉದ್ಘಾಟಿಸಿ, ಹದಿಹರೆಯದ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಇದರ ಹಿರಿಯ ಚಿಕಿತ್ಸಾ ಮೇಲ್ವಿಚಾರಕರಾದ ಮಂಜುನಾಥರವರು ಸಾಂಕ್ರಾಮಿಕ ರೋಗಗಳ ಹರಡುವಿಕೆ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸಿದರು.
ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಬ್ರಮಣ್ಯರವರು ಕಾರ್ಯಕ್ರಮದ ಅಧ್ಯಕತೆಯನ್ನು ವಹಿಸಿದ್ದು, ಕಾಲೇಜಿನ ನಿರ್ದೇಶಕರಾದ ಮಮತ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ರವಿಚಂದ್ರರವರು ಅತಿಥಿಗಳನ್ನು ಸ್ವಾಗತಿಸಿದರು. ಸಮುದಾಯ ಆರೋಗ್ಯ ಕೇಂದ್ರ ಬ್ರಹ್ಮಾವರ ಇದರ ಸಿಬ್ಬಂದಿಗಳಾದ ಶ್ರೀಮತಿ ಅನುಷಾ, ಪ್ರಸಾದ, ಭಾರತಿ, ಸ್ನೇಹಲತಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಕಾಲೇಜಿನ ಎಲ್ಲಾ ವಿದ್ಯಾರ್ಥಿನಿಯರ ವೈದಕೀಯ ತಪಾಸಣೆ ನಡೆಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ಪ್ರೋ. ವಾಣಿಶ್ರೀಕಾರ್ಯಕ್ರಮವನ್ನು ನಿರ್ವಹಿಸಿ ವಂದಿಸಿದರು. ಹಾಗೂ ಕಾಲೇಜಿನ ಎಲ್ಲಾ ಉಪನ್ಯಾಸಕ ವೃಂದದವರು ಸಹಕರಿಸಿದರು.










