ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಸರಕಾರದ ಉಚಿತ ಸೈಕಲ್ ನೀಡುವ ಯೋಜನೆಯಿಂದ ಮಕ್ಕಳಿಗೆ ಶೈಕ್ಷಣಿಕ ಪ್ರೇರಣೆ ದೊರೆತಿದ್ದು, ಶಾಲೆ ತೊರೆಯುತ್ತಿರುವ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ವಿದ್ಯಾರ್ಥಿಗಳು ಸರಕಾರದ ವತಿಯಿಂದ ಉಚಿತವಾಗಿ ನೀಡಿರುವ ಸೈಕಲ್‌ನ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಲೂಕು ಪಂಚಾಯತ್ ಸದಸ್ಯ ಸುರೇಂದ್ರ ಖಾರ್ವಿ ಹೇಳಿದರು.
ಅವರು ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ರಾಜ್ಯ ಸರಕಾರದಿಂದ ಉಚಿತವಾಗಿ ವಿತರಿಸಲಾಗುವ ಸೈಕಲ್‌ಗಳನ್ನು ಶನಿವಾರ ವಿತರಿಸಿ ಮಾತನಾಡಿದರು.
ಶಾಲೆಯ ಎಸ್‌ಡಿಎಂಸಿ ಉಪಾಧ್ಯಕ್ಷೆ ಶಾರದಾ ಆರ್.ಪೂಜಾರಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಬಿ.ರಾಘವೇಂದ್ರ ಪೈ ಶುಭ ಹಾರೈಸಿದರು. ಗ್ರಾಮ ಪಂಚಾಯತ್ ಸದಸ್ಯೆ ಸಕು ಉದಯ ಜಿ., ನಾಗರಾಜ ಖಾರ್ವಿ, ಎಸ್‌ಡಿಎಂಸಿ ಸದಸ್ಯರಾದ ಅಶೋಕ ಪೂಜಾರಿ, ರವಿಶಂಕರ ಖಾರ್ವಿ, ಸುಧಾಕರ ಖಾರ್ವಿ, ರಾಘವೇಂದ್ರ ಪೂಜಾರಿ, ರೇಣುಕಾ ಮೊಗವೀರ, ದೇವಕಿ ಮೊಗವೀರ, ಇಂದಿರಾ ಖಾರ್ವಿ, ಗೋಪಾಲ ಖಾರ್ವಿ, ಸಹಶಿಕ್ಷಕರು, ಪೋಷಕರು ಮತ್ತಿತರರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಸುಜಾತಾ ಕೆ. ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕ ಶಶಿಶಂಕರ್ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕಿ ಸುಮತಿ ಎಂ. ವಂದಿಸಿದರು.










