ಗೋವಿಂದ ಬಾಬು ಪೂಜಾರಿ ಅವರಿಗೆ ಸಾಧನಾಶ್ರೀ ಪ್ರಶಸ್ತಿ ಪ್ರದಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಉದ್ಯಮ ಹಾಗೂ ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಅವಿರತವಾಗಿ ತೊಡಗಿಸಿಕೊಂಡಿರುವ ಬಿಜೂರಿನ ಗೋವಿಂದ ಬಾಬು ಪೂಜಾರಿ ಅವರಿಗೆ ಜೆಸಿಐ ಉಪ್ಪುಂದ ಇಲ್ಲಿನ ಮಾತೃಶ್ರೀ ಸಭಾಭವನದಲ್ಲಿ ಆಯೋಜಿಸಿದ 15ನೇ ಜೇಸಿ ಸಪ್ತಾಹದಲ್ಲಿ ಸಾಧನಾಶ್ರೀ ಪ್ರಶಸ್ತಿ ಪ್ರದಾನಿಸಿ ಗೌರವಿಸಲಾಯಿತು.

Call us

Click Here

ಪರಿಶ್ರಮದಿಂದಲೇ ಬದುಕು ಕಟ್ಟಿಕೊಂಡ ಗೋವಿಂದ ಬಾಬು ಪೂಜಾರಿ ಅವರು ಹಂತ ಹಂತವಾಗಿ ಸಾಧನೆಯ ಶಿಖರವೇರಿದವರು. ಶೆಫ್‌ಟಾಕ್ ಪುಡ್ & ಹಾಸ್ಪಿಟಾಲಿಟಿ ಸಂಸ್ಥೆಯ ಆಡಳಿತ ನಿರ್ದೇಶಕರಾಗಿರುವ ಗೋವಿಂದ ಪೂಜಾರಿ ಅವರು ಮುಂಬೈ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ತಮ್ಮ ಉದ್ಯಮವನ್ನು ವಿಸ್ತರಿಸಿ ಸಾವಿರಾರು ಮಂದಿಗೆ ಉದ್ಯೋಗ ನೀಡಿದ್ದಾರೆ. ಹುಟ್ಟೂರಿನಲ್ಲಿ ಶ್ರೀ ವರಲಕ್ಷ್ಮಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಹಾಗೂ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಸ್ಥಾಪಿಸಿ ಹತ್ತಾರು ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದ್ದಾರೆ.

Leave a Reply