ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ : ರೂ 79.5 ಲಕ್ಷ ಲಾಭ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಸಾಗರ್ ಕ್ರೆಡಿಟ್ ಕೋಪರೇಟಿವ್ ಸೊಸೈಟಿಯು ಕಳೆದ ವರ್ಷ ರೂ 154 ಕೋಟಿ ವ್ಯವಹಾರ ನಡೆಸಿ ರೂ 79.5 ಲಕ್ಷ ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ 13 ಲಾಭಾಂಶ ನೀಡಲಾಗುವುದು ಎಂದು ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಹೇಳಿದರು.

Call us

Click Here

ಬುಧವಾರ ನಡೆದ ಸೊಸೈಟಿಯ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಂಘವು 17 ವರ್ಷ ಪೂರೈಸಿದೆ. ಐದು ಕಡೆ ಶಾಖೆಗಳನ್ನು ಹೊಂದಿದೆ. ಶಿರೂರು, ಗುಲ್ವಾಡಿ, ತೆಕ್ಕಟ್ಟೆಯಲ್ಲಿ ನೂತನ ಶಾಖೆಗಳನ್ನು ತೆರೆಯಲಿದೆ. ಕುಂದಾಪುರ ಶಾಖೆ ಸ್ವಂತ ನಿವೇಶನ, ಕಟ್ಟಡ ಹೊಂದಿದೆ. ಬೈಂದೂರಿನ ಪ್ರಧಾನ ಕಚೇರಿ ಕಟ್ಟಡ ನಿರ್ಮಾಣಕ್ಕೆ ನಿವೇಶನ ಗುರುತಿಸಲಾಗಿದೆ. ಸದ್ಯ ರೂ 36.4 ಕೋಟಿ ಠೇವಣಿ ಸಂಗ್ರಹ ಹೊಂದಿದ್ದು, ಮುಂದಿನ ವರ್ಷ ಅದಕ್ಕೆ ರೂ 10 ಕೋಟಿ ಸೇರಿಸಲು ನಿರ್ಧರಿಸಲಾಗಿದೆ. ಆಡಳಿತ ಮಂಡಳಿ, ಸಿಬ್ಬಂದಿ ಸಹಕಾರದಿಂದ ಸೊಸೈಟಿ ಪ್ರಗತಿ ಸಾಧಿಸುತ್ತಿದೆ ಎಂದು ಅವರು ಹೇಳಿದರು.

ಉಪಾಧ್ಯಕ್ಷ ಎಸ್. ರಾಜು ಪೂಜಾರಿ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಕುಷ್ಟ ಬಿಲ್ಲವ ವಾರ್ಷಿಕ ವರದಿ, ಲೆಕ್ಕಪತ್ರ, ಮುಂದಿನ ವರ್ಷದ ಅಂದಾಜು ಆಯವ್ಯಯ ಪತ್ರ ಮಂಡಿಸಿದರು. ಸದಸ್ಯರಾದ ಉಪ್ಪುಂದ ಮೋಹನ ಪೂಜಾರಿ, ಕೃಷ್ಣ ಬಿಲ್ಲವ ದೊಂಬೆ ಸಂಘದ ಪ್ರಗತಿ ದೃಷ್ಟಿಯಿಂದ ಅನುಸರಿಸಬೇಕಾದ ಕ್ರಮಗಳ ಕುರಿತು ಸಲಹೆ ನೀಡಿದರು. ಉನ್ನತ ಶಿಕ್ಷಣ ಪಡೆಯುತ್ತಿರುವ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.

ನಿರ್ದೇಶಕರಾದ ಕೆ. ಶಂಕರ ಪೂಜಾರಿ, ಕೆ. ಶ್ರೀನಿವಾಸ ಪೂಜಾರಿ, ಚಿಕ್ಕು ಪೂಜಾರಿ, ಎನ್. ಅಣ್ಣಪ್ಪ ಬಿಲ್ಲವ, ಜಯಸೂರ್ಯ ಪೂಜಾರಿ, ಕಲ್ಪನಾ ಬಿ. ಪೂಜಾರಿ, ಎಂ. ಪುಟ್ಟ ಬಿಲ್ಲವ, ಶೇಖರ ಪೂಜಾರಿ, ಯು. ಕೇಶವ ಪೂಜಾರಿ, ಉದಯ ಜಿ. ಪೂಜಾರಿ ಇದ್ದರು.

Click here

Click here

Click here

Click Here

Call us

Call us

 

 

Leave a Reply