Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಲ್ಲೂರು ಶ್ರೀ ಮೂಕಾಂಬಿಕಾ ಸನ್ನಿಧಿಯಲ್ಲಿ ಶರನ್ನವರಾತ್ರಿ ಸಂಭ್ರಮ
    ಊರ್ಮನೆ ಸಮಾಚಾರ

    ಕೊಲ್ಲೂರು ಶ್ರೀ ಮೂಕಾಂಬಿಕಾ ಸನ್ನಿಧಿಯಲ್ಲಿ ಶರನ್ನವರಾತ್ರಿ ಸಂಭ್ರಮ

    Updated:22/09/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೊಲ್ಲೂರು: ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಸೆ.29ರಿಂದ ಅ8ರ ತನಕ ನಡೆಯಲಿರುವ ನವರಾತ್ರಿ ಉತ್ಸವಕ್ಕೆ ಸಕಲ ಸಿದ್ದತೆಗಳು ನಡೆದಿದೆ. ದೇವಳವು ಸಂಪೂರ್ಣ ಹೊಸ ವಿನ್ಯಾಸಗಳಿಂದ ಕೂಡಿದ ಪುಷ್ಪಾಲಂಕಾರ ಹಾಗೂ ವಿದ್ಯುದ್ದೀಪಗಳಿಂದ ಅಲಂಕೃತಗೊಂಡು ಕಂಗೊಳಿಸುತ್ತಿದೆ.

    Click Here

    Call us

    Click Here

    ಮಹಾನವಮಿಯಂದು ಬೆಳಿಗ್ಗೆ ಚಂಡಿಕಾಯಾಗ, ಮಧ್ಯಾಹ್ನ  ರಥೋತ್ಸವ ನಡೆಯಲಿದೆ. ವಿಜಯದಶಮಿಯಂದು ಬೆಳಿಗ್ಗೆ 4ರಿಂದ ವಿದ್ಯಾರಂಭ, ಅಪರಾಹ್ನ ನವಾನ್ನಪ್ರಾಶನ ಸಂಜೆ  ಶ್ರೀ ಮೂಕಾಂಬಿಕೆಯ ವಿಜಯೋತ್ಸವ ಜರುಗಲಿದೆ. ಪ್ರತಿದಿನ ಆಹ್ವಾನಿತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

    ದೇವಳದ ಸೌಪರ್ಣಿಕಾ ಮತ್ತು ಕಾಶೀ ಸ್ನಾನ ಘಟ್ಟದಲ್ಲಿ ಹೆಚ್ಚಿನ ಬೆಳಕಿನ ವ್ಯವಸ್ಥೆ ಹಾಗೂ ಭದ್ರತಾ ಸಿಬ್ಬಂದಿಗಳ ನಿಯೋಜನೆ, ಸಭಾಭವನದಲ್ಲಿ ಹೆಚ್ಚುವರಿ ಊಟದ ವ್ಯವಸ್ಥೆ ಜೊತೆಗೆ ವಾಹನ ನಿಲುಗಡೆ ಹಾಗೂ ಸುಗಮ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವುದು, ಸಿಸಿ ಕ್ಯಾಮೆರಾ ಮೇಲೆ ಹದ್ದಿನ ಕಣ್ಗಾವಲು ಇಂತಹ ಹಲವಾರು ವಿಚಾರಗಳ ಬಗ್ಗೆ ಈಗಾಗಲೇ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಎಂ. ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗಿದೆ. ನವರಾತ್ರಿಯ ದಿನಗಳಲ್ಲಿ ಮದ್ಯಪಾನ ನಿಷೇದಿಸುವುದು, ದೇವಳದ ಪರಿಸರದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವುದು ಸೇರಿದಂತೆ ಮುಂತಾದ ವಿಚಾರಗಳ ಬಗ್ಗೆಯೂ ವಿಶೇಷ ಮುತುವರ್ಜಿವಹಿಸಲಾಗಿದೆ. ಕುಂದಾಪ್ರ ಡಾಟ್ ಕಾಂ

    ಶ್ರೀ ಮೂಕಾಂಬಿಕೆಯ ದರ್ಶನ ಪಡೆಯಲು ಹಾಗೂ ಸೇವೆಗಾಗಿ ರಾಜ್ಯ, ಹೊರರಾಜ್ಯ, ದೇಶ-ವಿದೇಶದಿಂದ ಅಗಮಿಸುವ ಲಕ್ಷಾಂತರ ಭಕ್ತರಿಗೆ ಯಾವೂದೇ ರೀತಿಯ ತೊಂದರೆಯಾಗದಂತೆ ದೇವಳದ ವತಿಯಿಂದ ಸಕಲ ರೀತಿಯಲ್ಲಿ ಮೂಲಸೌಕರ್ಯವನ್ನು ಮಾಡಲಾಗಿದೆ. ದೇವಳದ ಸಿಬ್ಬಂದಿಗಳು, ಗ್ರಾಮಸ್ಥರು, ಸ್ಥಳೀಯಾಡಳಿತ ಕೂಡಾ ಉತ್ಸವದ ಕುರಿತು ವಿಶೇಷ ಕಾಳಜಿವಹಿಸಿದೆ. ಅಲ್ಲದೇ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಪೋಲೀಸ್ ಇಲಾಖೆ ಕೂಡಾ ಉತ್ಸವದ ಯಶಸ್ಸಿಗೆ ಕೈಜೋಡಿಸಿದ್ದು, ಬಿಗು ಬಂದೋಬಸ್ತಿನ ವ್ಯವಸ್ಥೆ ಮಾಡಲಾಗಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    5 × five =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.