ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಶಿರೂರು ಹತ್ತಿರದ ಸುಂಕದಗುಂಡಿ ಸೇತುವೆ ಸಮೀಪ ಗುರುವಾರ ನಡೆದ ಲಾರಿ ಹಾಗೂ ಕಾರುಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಸಾವನ್ನಪ್ಪಿದ್ದು, ಸಹ ಪ್ರಯಾಣಿಕ ಗಂಭೀರ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಸಾವಿಗೀಡಾದ ಚಾಲಕನನ್ನು ವಂಡ್ಸೆ ನಿವಾಸಿ ನಿತೇಶ್ ಮೊಗವೀರ(23) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿರುವ ಸಂತೋಷ ಶೆಟ್ಟಿ (20 )ಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಒಂದು ವರ್ಷದಿಂದ ಬಾಗಲಕೋಟೆಯಲ್ಲಿ ಹೊಟೇಲ್ ನಡೆಸುತ್ತಿದ್ದು, ಮನೆಯಲ್ಲಿ ಪೂಜೆ ಇದ್ದ ಕಾರಣ ಊರಿಗೆ ಬರುತಿದ್ದರು. ಈ ಸಮಯದಲ್ಲಿ ಸ್ನೇಹಿತ ಸಂತೋಷ ಶೆಟ್ಟಿ ಕೂಡ ಜತೆಯಲ್ಲಿ ಹೊರಟಿದ್ದರು. ಸಂಜೆ ವೇಳೆಗೆ ವಿಪರೀತ ಮಳೆ ಬಂದ ಕಾರಣ ತಿರುವಿನಲ್ಲಿ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










