ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಪಡುವರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಟೆಬಾಗಿಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 23 ವರ್ಷಗಳಿಂದ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಪ್ರಸ್ತುತ ಶಿರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಡವಿನಕೋಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವರ್ಗಾವಣೆಗೊಂಡ ಶಿಕ್ಷಕಿ ಪೂರ್ಣಿಮಾ ಕೆ. ಎಸ್ ಅವರು ಶಾಲೆಗೆ ನೀಡಿರುವ ಸುದೀರ್ಘ ಅವಧಿಯ ಸೇವೆಯನ್ನು ಗುರುತಿಸಿ ಗೌರವಿಸಿ ಬೀಳ್ಕೊಟ್ಟರು.
ಶಾಲಾ ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿ ಸಮುದಾಯ ಮತ್ತು ಶಾಲಾ ಎಸ್.ಡಿ.ಎಮ್.ಸಿ. ಯ ಪದಾಧಿಕಾರಿಗಳೊಂದಿಗೆ ಶಾಲಾ ಹಳೆವಿದ್ಯಾರ್ಥಿ ಸಂಘ ಹಾಗೂ ಪಾಲಕ ಬಂಧುಗಳು ಮತ್ತು ಅಂಗನವಾಡಿ ಮತ್ತು ಅಕ್ಷರ ದಾಸೋಹ ಸಿಬ್ಬಂದಿಗಳೊಂದಾಗಿ ಅರಶಿಣ ಕುಂಕುಮವಿಟ್ಟು ನೆನಪಿನ ಕಾಣಿಕೆ ನೀಡಿ ದಂಪತಿಗಳಿಗೆ ಗೌರವಿಸಿ ಅವಿಸ್ಮರಣೀಯ ಬೀಳ್ಕೋಡುಗೆ ನೀಡಿದರು.
ಈ ಸಂದರ್ಭದಲ್ಲಿ ಸಭೆಯ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಮ್.ಸಿ ಯ ಅಧ್ಯಕ್ಷೆ ಸುಜಾತ ವಹಿಸಿದ್ದು ಮುಖ್ಯ ಅತಿಥಿಗಳಾಗಿ ಗ್ರಾ.ಪಂ ಸದಸ್ಯೆ ಗೌರಿ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮಕೃಷ್ಣ ಶೇರುಗಾರ್, ಹ.ವಿ. ಸಂಘದ ಗೌರವ ಸಲಹೆಗಾರರಾದ ಗೋಪಾಲ ಜಿ., ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ ಹೆಬ್ಬಾರ್, ಎಸ್.ಡಿ.ಎಮ್.ಸಿ ಉಪಾಧ್ಯಕ್ಷ ರಾಮಚಂದ್ರ ಪುರಾಣಿಕ, ನಿವೃತ್ತ ಮುಖ್ಯ ಶಿಕ್ಷಕ ಸುರೇಶ್ ಬಂಕೇಶ್ವರ, ಅಧ್ಯಾಪಕ ಸುಧಾಕರ ಪಿ, ವೇದಿಕೆಯಲ್ಲಿ ಉಪಸ್ಧಿತರಿದ್ದು ಅಭಿನಂದನೆ ಸಲ್ಲಿಸಿದರು.
ಶಾಲಾ ಮುಖ್ಯ ಶಿಕ್ಷಕ ವಾಸುದೇವ ಎಚ್. ಸ್ವಾಗತಿಸಿದರು. ಸಹಶಿಕ್ಷಕಿಯರಾದ ಗೌರಿ ಎಸ್ ಮತ್ತು ಶ್ರೀಸಾಯಿ ತಮ್ಮ ಅನಿಸಿಕೆಯೊಂದಿಗೆ ಕಾರ್ಯಕ್ರಮ ನಿರೂಪಿಸಿ, ಸಾವಿತ್ರಿ ವಂದಿಸಿ ಗೌರವ ಶಿಕ್ಷಕಿಯರಾದ ಶ್ರೀಗಂಧ ನಾಯ್ಕ್ ಮತ್ತು ಸಂಪ್ರೀತ ಸಹಕರಿಸಿದರು.