ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ದೇಶದ ಸರ್ವೋಚ್ಛ ನ್ಯಾಯಾಲಯವು ಅಯೋಧ್ಯೆ ವಿವಾದಿತ ಪ್ರದೇಶದ ಬಗೆಗೆ ಅಂತಿಮ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲೆಯಲ್ಲಿ ಪ್ರತಿಬಂದಕಾಜ್ಞೆ ಜಾರಿಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ, ಸಾರ್ವಜನಿಕ ಶಾಂತಿ ನೆಮ್ಮದಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನ.9ರ ಬೆಳಿಗ್ಗೆ 10ಗಂಟೆಯಿಂದ ನ.10ರ ಬೆಳಿಗ್ಗೆ 6 ಗಂಟೆಯ ತನಕ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಮತ್ತು ಜೆಲ್ಲೆಯಲ್ಲಿನ ಎಲ್ಲಾ ಮದ್ಯದ ಅಂಗಡಿಗಳನ್ನು ನ.11ರ ಬೆಳಿಗ್ಗೆ 6ರ ತನಕ ಮುಚ್ಚುವಂತೆ ಆದೇಶಿಸಲಾಗಿದೆ.