ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ 2019-20ನೇ ಸಾಲಿನಲ್ಲಿ ನ್ಯಾಯಾಂಗ ಸೇವಾ ತರಬೇತಿಗೆ ಸಂಬಂಧಿಸಿದಂತೆ, ಸಿವಿಲ್/ ಸೆಷನ್ಸ್/ ಡಿಸ್ಟಿಕ್ಟ್ ಜಡ್ಜ್, ಪಬ್ಲಿಕ್ ಪ್ರಾಸಿಕ್ಯೂಟರ್ ಮೊದಲಾದ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಅನುಷ್ಟಾನ ಮಾಡಲಾಗುತ್ತಿದೆ.
2019-20 ನೇ ಸಾಲಿನಲ್ಲಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ www.sw.kar.nic.in ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಯ ವಯಸ್ಸು 18 ರಿಂದ 40 ವರ್ಷದೊಳಗಿರಬೇಕು. ಎಲ್.ಎಲ್.ಬಿ ಪದವಿಯಲ್ಲಿ ಕನಿಷ್ಟ ೫೦ % ಕ್ಕಿಂತ ಹೆಚ್ಚು ಅಂಕಗಳಿಸಿರಬೇಕು ಹಾಗೂ ಬಾರ್ ಕೌನ್ಸಿಲ್‌ನಲ್ಲಿ ನೋಂದಣಿಯಾಗಿರಬೇಕು. ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿದ್ದು, ಪ.ಜಾತಿ ಮತ್ತು ಪ.ವರ್ಗಕ್ಕೆ ಸೇರಿದವರಾಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನದೊಳಗೆ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ದೈಹಿಕ ಅಂಗವಿಕಲ ಮೀಸಲಾತಿಯಡಿ ಅರ್ಜಿ ಸಲ್ಲಿಸುವ ಅಭ್ಯರ್ಥಿ, ನಿಗಧಿತ ಪ್ರಾಧಿಕಾರದಿಂದ ನಿಗಧಿಪಡಿಸಲಾದ ಕೊನೆಯ ದಿನಾಂಕದೊಳಗೆ ಅಂಗವಿಕಲ ಪ್ರಮಾಣ ಪತ್ರ ಪಡೆದಿರಬೇಕು. ಒಬ್ಬ ಅಭ್ಯರ್ಥಿ ಒಂದು ಬಾರಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಗೆ ಆಯ್ಕೆಯಾಗಲು ಅರ್ಹರು. ಅಭ್ಯರ್ಥಿಯ ಕುಟುಂಬದ ಆದಾಯ ಎಲ್ಲಾ ಮೂಲಗಳಿಂದ ೫ ಲಕ್ಷ ರೂ. ಒಳಗಿರಬೇಕು.
ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳು ಸಂಬಂಧಿಸಿದ ಸೂಕ್ತ ದಾಖಲೆಗಳನ್ನು ನವೆಂಬರ್ 15 ರ ಒಳಗೆ ಸಂಬಂಧಪಟ್ಟ ದಾಖಲೆಗಳನ್ನು ಸ್ಕ್ಯಾನ್ ಮಾಡಿ, ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಇ-ಮೇಲ್ ವಿಳಾಸ judge.petc.@gmail.com ಗೆ ಕಳುಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಇವರನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.