ಕುಂದಾಪ್ರ ಡಾಟ್ ಕಾಂ ಸುದ್ದಿ.
ಕಮಲಶಿಲೆ: ಇಲ್ಲಿನ ಪ್ರಸಿದ್ದ ಶ್ರೀ ಬ್ರಾಹ್ಮೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಪ್ರಸಿದ್ಧ ಅರೆಕಾ ಟೀ ಸಂಸ್ಥೆಯ ಸಂಸ್ಥಾಪಕ ನಿವೇದನ್ ನೆಂಪೆ ಭೇಟಿ ನೀಡಿ ಶ್ರೀ ದೇವಿಗೆ ಪೂಜೆ ಸಲ್ಲಿಸಿದರು.
ತಮ್ಮ ತಾಯಿಯೊಂದಿಗೆ ದೇವಳಕ್ಕೆ ಭೇಟಿ ನೀಡಿದ ನಿವೇದನ್ ಅವರನ್ನು ದೇವಸ್ಥಾನ ಆಡಳಿತ ಮಂಡಳಿ ವತಿಯಿಂದ ಅನುವಂಶಿಯ ಮೊಕ್ತೇಸರರಾದ ಸಚ್ಚಿದಾನಂದ ಚಾತ್ರ ಅವರು ಗೌರವಿಸಿದರು. ಈ ಸಂದರ್ಭ ಗುರು ಭಟ್, ಮಂಜುನಾಥ ಪೂಜಾರಿ, ರಾಘವೇಂದ್ರ ಪೂಜಾರಿ ಮೊದಲಾದವರು ಜೊತೆಗಿದ್ದರು.