ಬ್ಯಾರೀಸ್‌ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Call us

Call us

Call us

ಕುಂದಾಪುರ: ಯೋಗವು ಆತ್ಮ ಮತ್ತು ಪರಮಾತ್ಮನ ಇರುವಿಕೆಯನ್ನು ಸ್ಪಷ್ಟಪಡಿಸುತ್ತದೆ. ಯೋಗಕ್ಕೆ ಜಾತಿ, ಮತ ಮತ್ತು ಧರ್ಮದ ಬೇಧವಿಲ. ದೇವರು ನಿರ್ವಿಕಾರ ಹಾಗೂ ದೇಹ ಮತ್ತು ಮನಸ್ಸನ್ನು ಸೇರಿಸುವುದೇ ಯೋಗ. ಇದರಿಂದ ಆರೋಗ್ಯ ಮನಸ್ಸಿನ ಏಕಾಗ್ರತೆ ನೆಮ್ಮದಿ ಹಾಗೂ ಯೋಗದ ಆದರ್ಶಗಳು ಮತ್ತು ಮೌಲ್ಯಗಳನ್ನು ವಿದ್ಯಾರ್ಥಿಗಳು ಸರಿಯಾಗಿ ಅರ್ಥ ಮಾಡಿಕೊಂಡು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಪ್ರಯೋಜನೆ ಪಡೆದುಕೊಳ್ಳಬೇಕೆಂದು ಕುಂದಾಪುರ ಜೀವ ವಿಮಾ ವಿಭಾಗದ ಪ್ರವೀಣ್ ಶೆಟ್ಟಿ ಹೇಳಿದರು.

Call us

Click Here

ಅವರು ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದಿಂದ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಬ್ಯಾರೀಸ್ ಬಿ.ಎಡ್ ಕಾಲೇಜಿನ ಪ್ರಾಂಶುಪಾಲರಾದ ಸಿದ್ದಪ್ಪ ಕೆ. ಎಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ದೋಮ ಚಂದ್ರಶೇಖರ್, ಎನ್.ಎಸ್.ಎಸ್ ಯೋಜನಾಧಿಕಾರಿ ವಿದ್ಯಾಧರ್ ಪೂಜಾರಿ ಉಪಸ್ಥಿತರಿದ್ದರು.

ದ್ವಿತೀಯ ಬಿ.ಸಿ.ಎ ವಿದ್ಯಾರ್ಥಿ ಜೋನ್ಸನ್ ಸ್ವಾಗತಿಸಿದರು, ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ದೀಕ್ಷಿತಾ ವಂದಿಸಿದರು, ದ್ವಿತೀಯ ಬಿ.ಸಿ.ಎ ವಿದ್ಯಾರ್ಥಿನಿ ಅಂಬಿಕಾ ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply