ಸಹಕಾರಿ ಕ್ಷೇತ್ರದಲ್ಲಿ ಸರ್ವರ ಉನ್ನತಿ: ವಿನಯಕುಮಾರ್ ಸೊರಕೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸಮಾಜ ಪ್ರಗತಿಯನ್ನು ಸಾಧಿಸಲು ಆರ್ಥಿಕ ವ್ಯವಸ್ಥೆ ಮುಂಚೂಣಿಯಲ್ಲಿ ಇರಬೇಕು. ಇಂದು ಸಹಕಾರಿ ಕ್ಷೇತ್ರವೂ ಬೆಳೆದಿದೆ ಜೊತೆಗೆ ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಂಡವರು ಹಾಗೂ ಅದರ ಉಪಯೋಗ ಪಡೆದವರ ಉನ್ನತಿಯೂ ಆಗಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.

Call us

Click Here

ಅವರು ಶಿರೂರು ಮೇಲ್‌ಪೇಟೆಯಲ್ಲಿ ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ೭ನೇ ಶಾಖೆಯನ್ನು ಉದ್ಘಾಟಿಸಿ ಮಾತನಾಡಿ ಸಹಕಾರಿ ಕ್ಷೇತ್ರ ಕೃಷಿಕರು, ಕಾರ್ಮಿಕರ ವರ್ಗಕ್ಕೆ ರಕ್ಷಣಾ ಕವಚವಾಗಿ ಸಹಕಾರಿ ಕ್ಷೇತ್ರ ಕಾರ್ಯನಿರ್ವಹಿಸುತ್ತಿದೆ. ದೇಶದಲ್ಲಿ ಆರ್ಥಿಕ ಮುಗ್ಗಟ್ಟಿರುವ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಗ ಮೇಲೆ ಜನರ ವಿಶ್ವಾಸ ಕಳೆದುಕೊಳ್ಳುತ್ತಿರುವ ಸಂದರ್ಭದಲ್ಲಿ ಸಹಕಾರಿ ಕ್ಷೇತ್ರ ಮತ್ತಷ್ಟು ವಿಸ್ತರಿಸಿಕೊಳ್ಳಲು ಸಾಧ್ಯವಾಗುತ್ತಿದೆ ಎಂದರು.

ಭಟ್ಕಳದ ಮಾಜಿ ಶಾಸಕ ಜೆ.ಡಿ. ನಾಯ್ಕ್ ಕಂಪ್ಯೂಟರ್ ಉದ್ಘಾಟನೆ ಮಾಡಿದರು. ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ನಾರಾಯಣ ಹೆಗ್ಡೆ ಭದ್ರತಾ ಕೊಠಡಿ ಉದ್ಘಾಟಿಸಿದರು.

ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ ನಮ್ಮ ಸಂಸ್ಥೆಯ ಪ್ರಸ್ತುತ ಏಳನೇ ಶಾಖೆಯನ್ನು ತೆರೆಯುತ್ತಿದೆ. ಮುಂದಿಯೂ ಹಂತ ಹಂತವಾಗಿ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಲಾಗುತ್ತದೆ. ಸಂಸ್ಥೆಯ ಪ್ರಗತಿಯಲ್ಲಿ ಉಪಾಧ್ಯಕ್ಷರು, ನಿರ್ದೇಶಕರುಗಳು ಹಾಗೂ ಸಿಬ್ಬಂಧಿ ವರ್ಗದ ಕೊಡುಗೆ ದೊಡ್ಡದಿದ್ದು, ಸಂಘಟಿತ ಪ್ರಯತ್ನದಿಂದ ಯಶಸ್ವಿಯಾಗಿದ್ದೇವೆ ಎಂದರು.

Click here

Click here

Click here

Click Here

Call us

Call us

ದ.ಕ ಹಾಲು ಉತ್ಪಾದಕರ ಒಕ್ಕೂಟದ ಉಪಾಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯರುಗಳಾದ ದಸ್ತಗೀರ್ ಸಾಹೇಬ್, ಪುಪ್ಪರಾಜ ಶೆಟ್ಟಿ, ಶಿರೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ದಿಲ್‌ಸಾದ್ ಬೇಗಂ, ಶ್ರೀ ವರಲಕ್ಷ್ಮೀ ಸೌಹಾರ್ದ ಸಹಕಾರಿಯ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ, ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿಯ ಅಧ್ಯಕ್ಷ ಮೋಹನ ಪೂಜಾರಿ ಉಪ್ಪುಂದ, ಶಿರೂರು ಮಾಜಿ ಮಂಡಲ ಪ್ರಧಾನ ನಾರಾಯಣ ಅಳ್ವೆಗದ್ದೆ, ಉದ್ಯಮಿ ರಾಮ ಮೇಸ್ತ, ಕಟ್ಟಡ ಮಾಲಿಕರಾದ ಸತೀಶ್ ಪ್ರಭು ಅತಿಥಿಗಳಾಗಿದ್ದರು. ಸೊಸೈಟಿಯ ನಿರ್ದೇಶಕರುಗಳಾದ ಕೆ. ಶಂಕರ ಪೂಜಾರಿ, ಕೆ. ಶ್ರೀನಿವಾಸ ಪೂಜಾರಿ, ಎನ್. ಅಣ್ಣಪ್ಪ ಬಿಲ್ಲವ, ಜಯಸೂರ್ಯ ಪೂಜಾರಿ, ಕಲ್ಪನಾ ಭಾಸ್ಕರ್, ಪುಟ್ಟ ಎಮ್. ಬಿಲ್ಲವ, ಶೇಖರ ಪೂಜಾರಿ, ಯು. ಕೇಶವ ಪೂಜಾರಿ, ಉದಯ ಜಿ. ಪೂಜಾರಿ ಉಪಸ್ಥಿತರಿದ್ದರು.

ಈ ಸಂದರ್ಭ ಶ್ರೇಷ್ಠ ಸಹಕಾರಿ ಪ್ರಶಸ್ತಿ ಪುರಸ್ಕೃತರಾದ ಎಸ್. ರಾಜು ಪೂಜಾರಿ ಹಾಗೂ ಕಟ್ಟಡ ಮಾಲಿಕರಾದ ಸತೀಶ್ ಪ್ರಭು ಅವರನ್ನು ಸನ್ಮಾನಿಸಲಾಯಿತು.

ಸೊಸೈಟಿಯ ಉಪಾಧ್ಯಕ್ಷ ಎಸ್. ರಾಜು ಪೂಜಾರಿ ಸ್ವಾಗತಿಸಿ, ನಿರ್ದೇಶಕ ಚಿಕ್ಕು ಪೂಜಾರಿ ವಂದಿಸಿದರು. ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಕುಷ್ಟ ಬಿಲ್ಲವ ಪ್ರಸ್ತಾವಿಕ ಮಾತುಗಳನ್ನಾಡಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು.

Leave a Reply