ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸಂಘಟಿತ ಪ್ರಯತ್ನ ಹಾಗೂ ಜನರ ಪಾಲ್ಗೊಳ್ಳುವಿಕೆಯಲ್ಲಿ ಸಹಕಾರಿ ಸಂಸ್ಥೆಗಳ ಯಶಸ್ಸು ಅಡಗಿದೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.
ಅವರು ಭಾನುವಾರ ಶಿರೂರು ಕೆಳಪೇಟೆಯ ಎಸ್‌ಡಿಪಿ ಕಾಂಪೆಕ್ಸ್‌ನಲ್ಲಿ ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಶಿರೂರು ಶಾಖೆಯನ್ನು ಉದ್ಘಾಟಿಸಿ ಬಳಿಕ ಮಾತನಾಡಿ ಸಂಸ್ಥೆ ಲಾಭ ಗಳಿಸುವುದರ ಜೊತೆಗೆ ಮೂರ್ತೆದಾರರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದೆ. ಹಂತ ಹಂತವಾಗಿ ಬೆಳೆದ ಈ ಸಂಸ್ಥೆಯು ಯಶಸ್ವಿಯಾಗಿ ಮುನ್ನಡೆಯಲಿ ಎಂದು ಹಾರೈಸಿದರು.
ಬ್ರಹ್ಮಾವರ ಮೂರ್ತೆದಾರರ ಮಹಾಮಂಡಲದ ಅಧ್ಯಕ್ಷ ಕೆ. ಕೊರಗ ಪೂಜಾರಿ ದೀಪ ಬೆಳಗಿ ಉದ್ಘಾಟಿಸಿದರು. ಕರ್ನಾಟಕ ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಭದ್ರತಾ ಕೊಠಡಿ ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಸ್. ರಾಜು ಪೂಜಾರಿ ಗಣಕಯಂತ್ರ ಉದ್ಘಾಟಿಸಿದರು. ಸಹಕಾರಿ ಸಂಘಗಳ ಉಪನಿಬಂಧಕಿ ಚಂದ್ರಪ್ರತಿಮಾ ಎಂ. ಜೆ ಸಂಘದ ಗಣಕೀಕೃತ ಪಾಸ್‌ಬುಕ್ ಬಿಡುಗಡೆಗೊಳಿಸಿದರು. ಈ ಸಂದರ್ಭ ಅತಿಥಿಗಳನ್ನು ಗೌರವಿಸಲಾಯಿತು.
ಈ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯೆ ಗೌರಿ ದೇವಾಡಿಗ, ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಾಣಿ ಗೋಪಾಲ್, ಕಟ್ಟಡದ ಮಾಲಕ ಎಸ್. ಪ್ರಕಾಶ್ ಪ್ರಭು, ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಮೋಹನ ಪೂಜಾರಿ, ಉಪಾಧ್ಯಕ್ಷ ತಿಮ್ಮಪ್ಪ ಪೂಜಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಎಚ್., ಶಾಖಾ ಪ್ರಬಂಧಕ ರಾಜೀವ ಪೂಜಾರಿ, ನಿರ್ದೇಶಕರುಗಳಾದ ಹೆಚ್. ನರಸಿಂಹ ಪೂಜಾರಿ, ಬಿ. ನಾರಾಯಣ ಪೂಜಾರಿ, ಎಂ. ಮಂಜು ಪೂಜಾರಿ, ರಾಜು ಪೂಜಾರಿ ಕೆರ್ಗಾಲು, ಶೇಷು ಪೂಜಾರಿ, ಸುರೇಶ್ ಪೂಜಾರಿ, ಸಂತೋಷ್, ಶಾರದಾ, ಲಕ್ಷ್ಮೀ ಮೊದಲಾದವರು ಇದ್ದರು. ಶಿಕ್ಷಕ ನಾರಾಯಣ ಬಿಲ್ಲವ ಕಾರ್ಯಕ್ರಮ ನಿರೂಪಿಸಿದರು.