ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ಮುಖ ಮಂಟಪದ ಹತ್ತಿರ ಶ್ರೀ ಮಾತಾ ಫರ್ನಿಚರ‍್ಸ್ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲಯನ್ಸ್‌ಸಸ್ ಇದರ ನವೀಕೃತ ಶೋರೂಮ್‌ನ್ನು ಬೈಂದೂರಿನ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಉದ್ಘಾಟಿಸಿ ಶುಭಹಾರೈಸಿದರು.

ಈ ಸಂದರ್ಭ ಸಾಹಿತಿ ಓಂ ಗಣೇಶ್ ಉಪ್ಪುಂದ, ಜಿಪಂ ಸದಸ್ಯರಾದ ಕೆ. ಬಾಬು ಶೆಟ್ಟಿ, ಸುರೇಶ್ ಬಟವಾಡಿ, ಗೌರಿ ದೇವಾಡಿಗ, ಜಿ.ಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ತಾ.ಪಂ ಸದಸ್ಯರಾದ ಪ್ರಮೀಳಾ ದೇವಾಡಿಗ, ಜಗದೀಶ ದೇವಾಡಿಗ, ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ, ಸುಮುಖ ಗ್ರೂಪ್‌ನ ಬಿ. ಎಸ್. ಸುರೇಶ್ ಶೆಟ್ಟಿ, ನಾಗೂರು ಸಂದೀಪನ್ ಶಾಲೆಯ ಮುಖ್ಯೋಪಧ್ಯಾಯ ವಿಶ್ವೇಶ್ವರ ಅಡಿಗ, ಜಿ.ಪಂ ಮಾಜಿ ಸದಸ್ಯ ಮದನಕುಮಾರ್ ಮೊದಲಾದವರು ಉಪಸ್ಥಿತರಿದ್ದರು. ಶ್ರೀ ಮಾತಾ ಫರ್ನಿಚರ‍್ಸ್‌ನ ಆನಂದ ಪೂಜಾರಿ ಹಾಗೂ ದೀಪಾ ಆನಂದ ಪೂಜಾರಿ ಅತಿಥಿಗಳನ್ನು ಸ್ವಾಗತಿಸಿದರು.










