ಕೊಲ್ಲೂರು: 50 ಆಮೆ ಮತ್ತು ಕೂಮಾ ವಶಕ್ಕೆ. ಆರೋಪಿಗಳ ಬಂಧನ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಆಲೂರು ಗ್ರಾಮದ ಕಳಿ ಎಂಬಲ್ಲಿನ ನದಿಯಲ್ಲಿ ಆಮೆ ಹಾಗೂ ಕೂಮಾಗಳನ್ನು ಹಿಡಿದು ಕೊಲ್ಲಲು ಪ್ರಯತ್ನ ನಡೆಸುತ್ತಿರುವಾಗ ದಾಳಿ ನಡೆಸಿದ್ದ ಕೊಲ್ಲೂರು ವನ್ಯಜೀವಿ ಇಲಾಖೆಯ ಸಿಬ್ಬಂದಿಗಳು ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. 50 ಕೂಮಾ ಮತ್ತು ಆಮೆಗಳನ್ನು ವಶಪಡಿಸಿಕೊಂಡಿದ್ದು ಆ ಪೈಕಿ 25 ಕೂಮಾ ಹಾಗೂ 9 ಆಮೆಗಳನ್ನು ಸಂರಕ್ಷಿಸಲಾಗಿದೆ.

Call us

Click Here

ಆರೋಪಿಗಳನ್ನು ಕೊಲ್ಲೂರು ನಿವಾಸಿಗಳಾದ ಶೀನ ಕೊರಗ, ಚಂದ್ರ ಹಾಗೂ ಗಣೇಶ್ ಎಂದು ಗುರುತಿಸಲಾಗಿದ್ದು, ಅರಣ್ಯ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಮೂವರ ವಿರುದ್ಧ ಕೇಸು ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿಕೊಂಡ ದ್ವಿಚಕ್ರ ವಾಹನ, ಕತ್ತಿ, ಕೊಲ್ಲಲಾದ 15 ಆಮೆಗಳ ಚಿಪ್ಪು ಹಾಗೂ ಬ್ಯಾಟರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸೋಮವಾರ ರಾತ್ರಿ ಗಸ್ತು ನಡೆಸುತ್ತಿದ್ದ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಮಂಗಳವಾರ ಮುಂಜಾನೆ ಆರೋಪಿಗಳು ನಡೆಸುತ್ತಿದ್ದ ಕೃತ್ಯದ ಮಾಹಿತಿ ದೊರೆತು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಗಣಪತಿ ನಾಯ್ಕ್ ಅವರ ನಿರ್ದೇಶನದಂತೆ, ಉಪ ವಲಯ ಅರಣ್ಯಾಧಿಕಾರಿ ದಯಾನಂದ ಕೆ ಹಾಗೂ ಸಿದ್ದೇಶ್ವರ ಕುಂಬಾರ್, ಅರಣ್ಯ ರಕ್ಷಕರಾದ ದೇವಿ ಪ್ರಸಾದ್, ವಿವೇಕ್ ಮತ್ತು ಇಡೂರು ಕಳ್ಳಬೇಟೆ ತಡೆ ಶಿಬಿರದ ಸಿಬ್ಬಂದಿಗಳು ಭಾಗವಹಿಸಿದ್ದರು.

Leave a Reply