ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ: ಕುಂದಾಪುರದಲ್ಲಿ ಪ್ರತಿಭಟನೆ, ಭುಗಿಲೆದ್ದ ಆಕ್ರೋಶ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶಾಸ್ತ್ರಿ ಸರ್ಕಲ್ ಬಳಿಯಲ್ಲಿ ನಿರ್ಮಾಣವಾಗುತ್ತಿರುವ ಫ್ಲೈ ಓವರ್‌ನ ವಿಳಂಭ ಕಾಮಗಾರಿಯನ್ನು ವಿರೋಧಿಸಿ ಮಂಗಳವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ನೇತ್ರತ್ವದಲ್ಲಿ ಧರಣಿ ಹಾಗೂ ಪ್ರತಿಭಟನಾ ಸಭೆ ನಡೆಯಿತು.

Call us

Click Here

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಂಸದ ಕೆ.ಜಯಪ್ರಕಾಶ ಹೆಗ್ಡೆ ಮಾತನಾಡಿ ರಾಷ್ಟ್ರೀಯ ಹೆದ್ದಾರಿ ಚತುಷ್ಫಥ ವಿಸ್ತರಣೆಯ ಮೂಲ ಯೋಜನೆಯಲ್ಲಿ ಕುಂದಾಪುರದ ಶಾಸ್ತ್ರಿ ಸರ್ಕಲ್ ಬಳಿಯಲ್ಲಿ ರಸ್ತೆಗೆ ಎಂಬ್ಯಾಕ್‌ಮೆಂಟ್ ನಿರ್ಮಾಣ ಮಾಡಿ ಸಣ್ಣ ಪ್ರಮಾಣದ ಅಂಡರ್ ಪಾಸ್ ನಿರ್ಮಾಣ ಮಾಡುವ ಉದ್ದೇಶ ಇತ್ತು. ಸ್ಥಳೀಯರ ಒತ್ತಾಯದಂತೆ ಕೇಂದ್ರ ಸರ್ಕಾರದ ಗಮನ ಸೆಳೆದು ಫ್ಲೈ ಓವರ್ ನಿರ್ಮಾಣದ ಪ್ರಾಸ್ತಾವನೆಗೆ ಒಪ್ಪಿಗೆ ಪಡೆಯಲಾಗಿತ್ತು ಎಂದು ತಿಳಿಸಿದ್ದಾರೆ.

2016ರಲ್ಲಿ ಬದಲಾದ ಪ್ರಾಸ್ತಾವಿತ ಯೋಜನೆಗೆ 22.24 ಕೋಟಿ ರೂ. ವೆಚ್ಚದಲ್ಲಿ ಮಂಜೂರಾತಿ ದೊರಕಿತ್ತು. ಇದೀಗ ಮಂದಗತಿಯಲ್ಲಿ ಸಾಗುತ್ತಿರುವ ಕಾಮಗಾರಿಗೆ ಹಲವು ಕಾರಣಗಳಿವೆ. ಇದರ ನಿವಾರಣೆಗೆ ದೆಹಲಿ ಹಾಗೂ ಸ್ಥಳೀಯ ಮಟ್ಟದಲ್ಲಿ ಹೋರಾಟ ನಡೆಸಬೇಕಾದ ಅನೀವಾರ್ಯತೆ ಇದೆ. ಹಿಂದೆ ಸಂಸದನಾಗಿದ್ದಾಗ ನಡೆಸಿದ ಅಡಿಕೆ ಹೋರಾಟದ ಮಾದರಿಯಲ್ಲಿ ಹೋರಾಟ ನಡೆಸಬೇಕಾಗಿದೆ. ಲೋಕಸಭಾ ಸದಸ್ಯರು, ಶಾಸಕರು, ಹೋರಾಟ ಸಮಿತಿಯವರು ಜತೆಯಾಗಿ ನಡೆಸುವ ಪ್ರಯತ್ನದಲ್ಲಿ ನಾನು ಸಂಪೂರ್ಣವಾಗಿ ಸಹಕಾರ ನೀಡುವುದಾಗಿ ಭರವಸೆ ವ್ಯಕ್ತಪಡಿಸಿದರು.

Click here

Click here

Click here

Click Here

Call us

Call us

ಸಭೆಯಲ್ಲಿ ಮಾತನಾಡಿದ ಸಾಸ್ತಾನ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಪ್ರತಾಪ್ ಶೆಟ್ಟಿ, ಕಾಮಗಾರಿಯನ್ನು ಮುಂದಿನ ೬ ತಿಂಗಳ ಒಳಗೆ ಮುಗಿಸುತ್ತೇವೆ ಎಂದು ಹೊಸ ಹೊಸ ವಾಯಿದೆಗಳನ್ನು ನೀಡುತ್ತಿರುವ ಗುತ್ತಿಗೆದಾರ ಕಂಪೆನಿಯ ವಾಯಿದೆಯೇ ಮುಗಿದಿದೆ. ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ನೀಡಿದ ಆದೇಶಕ್ಕೂ ಬೆಲೆ ಇಲ್ಲಾ. ಪ್ರಸ್ತುತ ನೀಡಿರುವ ವಾಯಿದೆಯೊಳಗೆ ಕಾಮಗಾರಿ ಮುಗಿಯದೆ ಇದ್ದಲ್ಲಿ ಟೋಲ್ ಬಂದ್ ಮಾಡುವ ಜಿಲ್ಲಾಡಳಿತದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಅವಕಾಶವಿದ್ದಲ್ಲಿ ಬಾಕಿ ಉಳಿದಿರುವ ಕಾಮಗಾರಿ ಮುಗಿಸಲು ಜಿಲ್ಲಾಧಿಕಾರಿಗಳ ನೇತ್ರತ್ವದಲ್ಲಿ ಸಮಿತಿ ರಚನೆ ಮಾಡಿ ಅದರ ಅಡಿಯಲ್ಲಿ ಸ್ಥಳೀಯ ಗುತ್ತಿಗೆದಾರರು, ಜೆಸಿಬಿ, ಹಿತಾಚಿ ಮುಂತಾದ ಯಂತ್ರಗಳ ಮಾಲಕರ ಸಹಕಾರ ಪಡೆದು ಕಾಮಗಾರಿ ಮುಗಿಸಲು ನಿರ್ಧಾರ ಕೈಗೊಂಡಲ್ಲಿ 2ತಿಂಗಳ ಒಳಗೆ ಕಾಮಗಾರಿ ಮುಗಿಸಲು ಹೋರಾಟ ಸಮಿತಿ ಸಹಕಾರ ನೀಡಲಿದೆ ಎಂದರು.

ಧರಣಿ ನೇತ್ರತ್ವ ವಹಿಸಿದ್ದ ಕುಂದಾಪುರ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಅಧ್ಯಕ್ಷ ಕೆಂಚನೂರು ಸೋಮಶೇಖರ ಶೆಟ್ಟಿ, ಯೋಜನಾ ವೆಚ್ಚ ತಯಾರಿಸದೆ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ನಿಗದಿ ಮಾಡಿದ ಹಣಕ್ಕಿಂತ ಹೆಚ್ಚು ಹಣಗಳು ಯೋಜನೆಗೆ ಬಳಕೆಯಾದರೂ, ಪ್ರಶ್ನಿಸುವವರು ಇಲ್ಲ. ಜಿಲ್ಲೆಯಲ್ಲಿ ನಡೆಯುವ ಯಾವುದೆ ಸಭೆಗಳಿಗೂ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳನ್ನು ಕರೆಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹಿಂದೆ ಜಿಲ್ಲಾಧಿಕಾರಿಗಳಾಗಿದ್ದವರು ತೆಗೆದುಕೊಂಡಿರುವ ನಿರ್ಧಾರಗಳು ಅವರು ವರ್ಗಾವಣೆಯಾಗುತ್ತಿದ್ದಂತೆ ಬದಲಾಗುತ್ತದೆ. ಸುರತ್ಕಲ್‌ನಿಂದ ಕುಂದಾಪುರದವರೆಗೆ 26 ಕಡೆ ರಸ್ತೆ ಕ್ರಾಸ್‌ಗಳನ್ನು ಗುರುತಿಸಲಾಗಿದ್ದರೂ, ಎಲ್ಲಿ ಎನ್ನುವ ವಿವರಗಳು ಲಭ್ಯವಾಗುತ್ತಿಲ್ಲ. ಹೆದ್ದಾರಿ ನಿರ್ಮಾಣದಿಂದ ಆಗುತ್ತಿರುವ ಅವ್ಯವಸ್ಥೆಗಳಿಗೆ ಪರಿಹಾರ ದೊರಕಿಸಿಕೊಳ್ಳದೆ ಹೋದಲ್ಲಿ ಮುಂದಿನ ಪೀಳಿಗೆ ನಮ್ಮನ್ನು ಶಪಿಸಲಿದೆ ಎಂದ ಅವರು ಕೇವಲ 10.5 ಕಿ.ಮೀ ದೂರದಲ್ಲಿ 2 ಟೋಲ್ ಗೇಟ್ ನಿರ್ಮಾಣವಾಗಿದ್ದರೂ, ನಮ್ಮ ಜನಪ್ರತಿನಿಧಿಗಳು ಮಾತನಾಡುತ್ತಿಲ್ಲ ಎಂದರು.

ಸಭೆಯಲ್ಲಿ ಮಾತನಾಡಿದ ಹೋರಾಟ ಸಮಿತಿಯ ಕಿಶೋರಕುಮಾರ್ ಮಾತನಾಡಿ, ಹೆದ್ದಾರಿ ವಿಸ್ತರಣೆಯ ಮೂಲ ಯೋಜನೆಯಲ್ಲಿ ಬಸ್ರೂರು ಮೂರು ಕೈ ಬಳಿ ಎಂಬ್ಯಾಕ್‌ಮೆಂಟ್, ಟಿ.ಟಿ ರಸ್ತೆ ಬಳಿಯಲ್ಲಿ ಅಂಡರ್‌ಪಾಸ್ ನಿರ್ಮಾಣ ಮಾಡುವ ಯೋಜನೆಗಳೇ ಇದ್ದಿರಲಿಲ್ಲ. ಗುತ್ತಿಗೆ ಕಂಪೆನಿಯ ಅನೂಕೂಲಕ್ಕಾಗಿ ಯೋಜನೆಗಳನ್ನು ಬದಲಾಯಿಸಲಾಗುತ್ತಿದೆ. ಜನರ ಸಹನೆಗಳೇ ಜನಪ್ರತಿನಿಧಿಗಳಿಗೆ ವರವಾಗುತ್ತಿದೆ. ಸಾರ್ವಜನಿಕ ಸಮಸ್ಯೆಗಳಿಗಾಗಿ ಹೋರಾಟ ನಡೆಸುವುದು ನಮ್ಮ ಹಕ್ಕು ಎನ್ನುವುದನ್ನು ಪ್ರತಿಪಾದನೆ ಮಾಡುವುದನ್ನೆ ಜನರು ಮರೆಯುತ್ತಿದ್ದಾರೆ ಎಂದರು.

ವಕೀಲ ಗೋಪಾಲಕೃಷ್ಣ ಶೆಟ್ಟಿ ಶಿರಿಯಾರ ಮಾತನಾಡಿ ಪ್ರಾಣ ಹಾನಿ ಹಾಗೂ ಸ್ವತ್ತು ಹಾನಿ ನಿಯಂತ್ರಣ ಮಾಡುವ ಉದ್ದೇಶಕ್ಕಾಗಿ ರೂಪಿಸಲಾದ ಚತುಷ್ಪಥ ಯೋಜನೆಯ ಮೂಲ ಉದ್ದೇಶಗಳೇ ಮರೆಯಾಗುತ್ತಿದೆ. ಸುಂಕ ಕೊಟ್ಟು ಸಂಕಷ್ಟ ಪಡೆದುಕೊಳ್ಳಲಾಗುತ್ತಿದೆ. ಹೆದ್ದಾರಿ ವಿಸ್ತರಣೆಯಾದ ಬಳಿಕ ಜೀವ ಹಾನಿ ಹಾಗೂ ಸ್ವತ್ತು ಹಾನಿ ಹೆಚ್ಚಾಗುತ್ತಿದೆ. ನಿಯಮಕ್ಕೆ ವಿರುದ್ಧವಾಗಿ ಬ್ಯಾರಿಕೇಡ್‌ಗಳನ್ನು ಹಾಕಲಾಗುತ್ತಿದೆ. ಹೆದ್ದಾರಿಯಲ್ಲಿ ಸಮರ್ಪಕವಾದ ದಾರಿದೀಪದ ವ್ಯವಸ್ಥೆ ಇಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸದ ಜನಪ್ರತಿನಿಧಿಗಳು ಇದ್ದರೆಷ್ಟು, ಬಿಟ್ಟರೆಷ್ಟು ಎಂದು ಖಾರವಾಗಿ ಹೇಳಿದರು.

ಪುರಸಭಾ ಮಾಜಿ ಉಪಾಧ್ಯಕ್ಷ ರಾಜೇಶ್ ಕಾವೇರಿ ಮಾತನಾಡಿ ಕೆಲವರಿಗೆ ಪ್ರಾಣಕ್ಕಿಂತ ಮಾನ ಹೆಚ್ಚು ಅನ್ನುವಂತಾಗಿದೆ. ಚುನಾವಣೆಗೆ ರಾಜಕೀಯ ಇರಲಿ, ಅಭಿವೃದ್ಧಿಗೆ ರಾಜಕೀಯ ಬೇಡ. ನವಯುಗ ಕಂಪೆನಿ ಬ್ರಿಟೀಷರ ರಕ್ತ ಹಂಚಿಕೊಂಡು ಹುಟ್ಟಿದೆ.

ಸಿಪಿಎಂ ಪಕ್ಷದ ಹಿರಿಯ ಮುಖಂಡರಾದ ಎಚ್.ನರಸಿಂಹ, ವೆಂಕಟೇಶ ಕೋಣಿ, ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಶಿಧರ ಹೆಮ್ಮಾಡಿ, ಹಿರಿಯ ವಕೀಲ ಎ.ಎಸ್.ಎನ್ ಹೆಬ್ಬಾರ್, ಸಾಸ್ತಾನ ಹೆದ್ದಾರಿ ಹೋರಾಟ ಸಮಿತಿಯ ಶ್ಯಾಮ್‌ಸುಂದರ್ ಎನ್ ಮಾತನಾಡಿದರು.

ಸ್ಥಳಕ್ಕೆ ಎಸಿ ಭೇಟಿ:
ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ಬಂದ ಉಪವಿಭಾಗಾಧಿಕಾರಿ ಕೆ.ರಾಜೂ ಅವರು ಪ್ರತಿಭಟನಾಕಾರರ ಅಹವಾಲುಗಳನ್ನು ಆಲಿಸಿದ ಬಳಿಕ ಹೆದ್ದಾರಿ ಇಲಾಖೆ ಹಾಗೂ ಗುತ್ತಿಗೆ ಕಂಪೆನಿ ಅಧಿಕಾರಿಗಳಲ್ಲಿ ಯೋಜನೆಯನ್ನು ಯಾವಾಗ ಮುಗಿಸುತ್ತೀರಿ ಎನ್ನುವ ಸ್ವಷ್ಟ ಭರವಸೆ ನೀಡುವಂತೆ ಸೂಚಿಸಿದರು. ಪ್ರತಿಸ್ಪಂದಿಸಿದ ಅಧಿಕಾರಿಗಳು ಮಾ.31 ರ ಒಳಗೆ ಮುಗಿಸುವ ಭರವಸೆ ನೀಡಿದರು.

ನಿಗದಿತ ದಿನಾಂಕದ ಒಳಗೆ ಕಾಮಗಾರಿ ಪೂರ್ಣಗೊಳ್ಳದೆ ಹೋದಲ್ಲಿ ಈಗಾಗಲೇ ಜಿಲ್ಲಾಧಿಕಾರಿಗಳ ನೇತ್ರತ್ವದಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ಮಾ.೩೧ ರಿಂದ ಟೋಲ್ ಸಂಗ್ರಹ ಬಂದ್ ಮಾಡಲಾಗುತ್ತದೆ. ಎ.ಸಿ ಕೋರ್ಟ್‌ನಲ್ಲಿ 133 ಕಾನೂನು ಅಡಿಯಲ್ಲಿ ದಾಖಲಾದ ಪ್ರಕರಣದ ವಿಚಾರಣೆಯನ್ನು ಮುಂದುವರೆಸಲಾಗುತ್ತದೆ. ತಪ್ಪಿತಸ್ಥರು ಎಂದು ಕಂಡು ಬಂದಲ್ಲಿ ಸಂಬಂಧಿತರ ವಿರುದ್ದ ಕಾನೂನು ಕ್ರಮ ಜರುಗಿಸುವುದಾಗಿ ಉಪವಿಭಾಗಾಧಿಕಾರಿ ಹೇಳಿದರು.

ಶೋ ಮಾಡಬೇಡಿ ಎಂದು ಅಸಹನೆ ತೋರಿದ ಮಾಜಿ ಸಂಸದರು:
ಸಭೆಯಲ್ಲಿ ಭಾಗವಹಿಸಿದ ಗುತ್ತಿಗೆ ಕಂಪನೆ ಹಾಗೂ ಪ್ರಾಧಿಕಾರದ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದ ಜನರು ಸ್ವಷ್ಟ ನಿರ್ಧಾರ ಪ್ರಕಟಿಸುವ ವರೆಗೂ ತೆರಳಲು ಬಿಡುವುದಿಲ್ಲ ಎಂದರು. ಈ ವೇಳೆ ಮಧ್ಯ ಪ್ರವೇಶಿಸಿದ ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿ ಶೋ ಮಾಡುವುದು ಸರಿಯಲ್ಲ ಎಂದು ಅಸಹನೆ ವ್ಯಕ್ತಪಡಿಸಿ ತೆರಳಿದ ಪ್ರಸಂಗ ನಡೆಯಿತು. ಬಳಿಕ ಅವರ ಮನವೊಲಿಸಿ ಮತ್ತೆ ಸಭೆಗೆ ಕರೆತರಲಾಯಿತು.

ಹೆದ್ದಾರಿ ತಡೆಗೆ ಮುಂದಾದ ಪ್ರತಿಭಟನಾಕಾರರು:
ಸಭೆಯ ಕೊನೆಯ ಹಂತದ ವೇಳೆಯಲ್ಲಿ ಅಧಿಕಾರಿಗಳು ನೀಡಿದ ಭರವಸೆಗಳಿಗೆ ತೃಪ್ತರಾಗದ ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ 66 ರನ್ನು ತಡೆದು ಪ್ರತಿಭಟನೆ ನಡೆಸಲು ಮುಂದಾದದರು. ಏಕಾಏಕಿ ನಡೆದ ಬೆಳವಣಿಗೆಯಿಂದ ಒಂದು ಕ್ಷಣ ವಿಚಿಲಿತರಾದ ಪೊಲೀಸ್ ಅಧಿಕಾರಿಗಳು ಅವರ ಮನವೂಲಿಕೆಗೆ ಮುಂದಾದರು. ಸರ್ಕಲ್ ಇನ್ಸ್‌ಪೆಕ್ಟರ್ ಮಂಜಪ್ಪ ಡಿ.ಆರ್ ಹಾಗೂ ಎಸ್.ಐ ಹರೀಶ್ ನಾಯ್ಕ್ ಅವರ ಮನವೂಲಿಕೆಯಿಂದಾಗಿ ಹೆದ್ದಾರಿ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯಲಾಯಿತು.

ಹೆದ್ದಾರಿ ಪ್ರಾಧಿಕಾರಿದ ಅಧಿಕಾರಿಗಳ ವಿರುದ್ಧವೂ ಪ್ರತಿಭಟನಾ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ ಘಟನೆಯೂ ನಡೆಯಿತು. ಸಭೆಯಲ್ಲಿದ್ದ ಸಾರ್ವಜನಿಕರು ಅಧಿಕಾರಿಗಳು ಹಾಗೂ ವ್ಯವಸ್ಥೆಗೆ ಹಿಡಿಶಾಪ ಹಾಕಿದರಲ್ಲದೇ, ಚುನಾಯಿತ ಪ್ರತಿನಿಧಿಗಳ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು.

ಸೋಮಶೇಖರ ಶೆಟ್ಟಿ ಕೆಂಚನೂರು, ಬಿ.ಕಿಶೋರಕುಮಾರ, ರಾಜೇಶ್ ಕಾವೇರಿ, ಶಶಿಧರ ಹೆಮ್ಮಾಡಿ, ನಿತ್ಯಾನಂದ ಶೆಟ್ಟಿ ಅಂಪಾರು, ಗಣೇಶ್ ಮೆಂಡನ್ ಎಲ್‌ಐಸಿ ರಸ್ತೆ, ನ್ಯಾಯವಾದಿಗಳಾದ ಗೋಪಾಲಕೃಷ್ಣ ಶೆಟ್ಟಿ ಶಿರಿಯಾರ, ಮಲ್ಯಾಡಿ ಜಯರಾಮ್ ಶೆಟ್ಟಿ, ಕೆ.ಸಿ.ಶೆಟ್ಟಿ ವಿನೋದ ಕ್ರಾಸ್ತಾ, ಚಂದ್ರಶೇಖರ ಶೆಟ್ಟಿ, ಪುರಸಭೆಗೆ ಆಯ್ಕೆಯಾದ ದೇವಕಿ ಪಿ ಸಣ್ಣಯ್ಯ, ಚಂದ್ರಶೇಖರ ಖಾರ್ವಿ, ಜಿ.ಕೆ.ಗಿರೀಶ್,, ಅಬ್ಬು ಮಹಮ್ಮದ್, ಪ್ರಭಾವತಿ ಶೆಟ್ಟಿ, ಶ್ರೀಧರ ಗೋಲ್ಡ್‌ನ್ ಮಿಲ್ಲರ್, ಚಿತ್ತೂರು ಪ್ರಕಾಶ್ಚಂದ್ರ ಶೆಟ್ಟಿ, ವಿಠ್ಠಲ್ ಪೂಜಾರಿ ಸಾಸ್ತಾನ, ಪ್ರಶಾಂತ ಶೆಟ್ಟಿ ಸಾಸ್ತಾನ, ರಾಜೇಶ್ ಕೆ.ವಿ ಪಾಂಡೇಶ್ವರ, ಇದ್ದರು.

Leave a Reply