ಉಪ್ಪುಂದದ ಕೊಡಿಹಬ್ಬ: ಸಂಭ್ರಮದ ಮನ್ಮಹಾರಥೋತ್ಸವ ಸಂಪನ್ನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇತಿಹಾಸ ಪ್ರಸಿದ್ಧ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಮನ್ಮಹಾ ರಥೋತ್ಸವ ಉಪ್ಪುಂದ ಕೊಡಿಹಬ್ಬ ಶುಕ್ರವಾರ ಸಂಭ್ರಮ, ಸಡಗರದಿಂದ ಜರುಗಿತು.

Call us

Click Here

ತಂತ್ರಿಗಳ ನೇತೃತ್ವದಲ್ಲಿ ದೇವಳದಲ್ಲಿ ಪಂಚಾಮೃತ ಅಭಿಷೇಕ, ವಿಶೇಷ ಭೂತ ಬಲಿ ಸೇರಿದಂತೆ ಹಲವು ಧಾರ್ಮಿಕ ವಿಧಿವಿಧಾನ ನಡೆಯಿತು. ಮಧ್ಯಾಹ್ನ ದೇವಳದ ಸಭಾಭವನದಲ್ಲಿ ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು. ಬಳಿಕ ದೇವಿಗೆ ಹರಕೆ ರೂಪದಲ್ಲಿ ಬಂದ ಸೀರೆಗಳನ್ನು ಬಹಿರಂಗ ಹರಾಜು ಮಾಡಲಾಯಿತು. ವಿಶೇಷ ಆಸಕ್ತಿಯಿಂದ ಹೆಚ್ಚಿನ ಮಹಿಳೆಯರು ಏಲಂನಲ್ಲಿ ಭಾಗವಹಿಸಿ ಪ್ರಸಾದ ರೂಪದಲ್ಲಿ ಸೀರೆಗಳನ್ನು ಖರೀದಿಸಿದರು. ಸಂಜೆ ನಡೆದ ರಥೋತ್ಸವದಲ್ಲಿ ಸಹಸ್ರಾರು ಭಕ್ತರು ರಥ ಎಳೆದು ಸಂಭ್ರಮಿಸಲಿದ್ದಾರೆ.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ದ್ವಿತೀಯ ಜಾತ್ರೆ ಉಪ್ಪುಂದ ಕೊಡಿಹಬ್ಬವಾಗಿದ್ದು, ಇಲ್ಲಿನ ಗ್ರಾಮದೇವತೆ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಧ್ವಜಾರೋಹಣದೊಂದಿಗೆ ಚಾಲನೆ ನೀಡಲಾಗಿತ್ತು. ರಥೋತ್ಸವದ ಪ್ರಯುಕ್ತ ತಮ್ಮ ಅಂಗಡಿ ಮುಂಗಟ್ಟು, ಮನೆ, ಬೀದಿಗಳನ್ನು ವಿಶೇಷವಾದ ವಿದ್ಯುದ್ದೀಪಗಳಿಂದ ಅಲಂಕರಿಸಿದ್ದರು. ರಾತ್ರಿ ದೇವರ ಅವಭ್ರತಸ್ನಾನ ನಡೆಯಲಿದೆ. ಹಾಗೂ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

 

Click here

Click here

Click here

Click Here

Call us

Call us

Leave a Reply