ಶಿಕ್ಷಕಿ ಮೇಲೆ ಹಲ್ಲೆಗೈದ ಎಸ್‌ಡಿಎಂಸಿ ಅಧ್ಯಕ್ಷನ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಉಪ್ಪುಂದ ಸರಕಾರಿ ಹಿರಿಯ ಪ್ರಾಥಮಿಕ ಉರ್ದು ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಮಲ್ಲಿಕಾ ಶೆಟ್ಟಿ ಅವರ ಮೇಲೆ ಹಲ್ಲೆಗೈದ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಮೋಹನಚಂದ್ರ ಅವರನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿ ಬೈಂದೂರು ವಲಯದ ಶಿಕ್ಷಕರು ಧರಣಿ ನಡೆಸಿ ಬೈಂದೂರು ತಹಶಿಲ್ದಾರ್ ಹಾಗೂ ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕರಿಗೆ ಮನವಿ ಸಲ್ಲಿಸಿದರು.

Call us

Click Here

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೈಂದೂರು ವಲಯ ಅಧ್ಯಕ್ಷ ವಿಶ್ವನಾಥ ಶೆಟ್ಟಿ ಮಾತನಾಡಿ ಉಪ್ಪುಂದ ಸರಕಾರಿ ಉರ್ದು ಶಾಲೆಯಲ್ಲಿ ಹಿಂದೆ ನಾಲ್ಕು ಜನ ಖಾಯಂ ಶಿಕ್ಷಕರಿದ್ದರು. ಆದರೆ ಎಲ್ಲರಿಗೂ ಕಿರುಕುಳ ನೀಡಿದ್ದರಿಂದ ಅವರು ವರ್ಗಾವಣೆ ತೆಗೆದುಕೊಂಡಿದ್ದರು. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಹಿಂದೆ ಮಮತಾ ಎಂಬ ಶಿಕ್ಷಕಿಗೆ ಹಲ್ಲೆ ನಡೆಸಿದ್ದ. ಈಗ ಮಲ್ಲಿಕಾ ಎಂಬ ಶಿಕ್ಷಕಿಗೆ ಹಲ್ಲೆ ನಡೆಸಿದ್ದಾರೆ. ಇನ್ನೋರ್ವ ಶಿಕ್ಷಕಿಯಲ್ಲಿ ಅಗತ್ಯವಾಗಿ ಮಾಹಿತಿ ಹಕ್ಕು ಮೂಲಕ ಕಿರುಕುಳ ನೀಡಲು ತಯಾರಾಗಿದ್ದ. ಎಸ್‌ಡಿಎಂಸಿ ಅವರಿಂದಲೇ ಶಿಕ್ಷಕರಿಗೆ ಕಿರುಕುಳವಾಗುತ್ತಿರುವುದು ವಿಷಾದನೀಯ ಎಂದ ಅವರು ಪೊಲೀಸ್ ಇಲಾಖೆ ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಬಂಧಿಸಬೇಕು ಮತ್ತು ಗಡಿಪಾರು ಮಾಡಬೇಕು ಎಂಬುದು ಶಿಕ್ಷಕರ ಆಗ್ರಹವಾಗಿದ್ದು, ನಮ್ಮ ಬೇಡಿಕೆ ಈಡೇರದೇ ಹೋದರೆ ಶಾಲೆಗೆ ಹೋಗುವ ಬದಲು ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಧರಣಿ ಕೂರುತ್ತೇವೆ ಎಂದು ಎಚ್ಚರಿಸಿದರು.

ಪ್ರತಿಭಟನೆ ವೇಳೆ ಪ್ರಜ್ಞೆ ತಪ್ಪಿ ಬಿದ್ದ ಶಿಕ್ಷಕಿ:
ಬೈಂದೂರು ತಹಶೀಲ್ದಾರರ ಕಛೇರಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭ ಶಿಕ್ಷಕಿ ಮಲ್ಲಿಕಾ ಶೆಟ್ಟಿ ಪ್ರಜ್ಞೆ ತಪ್ಪಿ ಬಿದ್ದ ಘಟನೆಯೂ ನಡೆಯಿತು. ಪ್ರತಿಭಟನೆಯ ಉದ್ದಕ್ಕೂ ಆಳುತ್ತಿದ್ದ ಅವರು ನಿಶಕ್ತರಾಗಿದ್ದು ಕಂಡುಬಂತು. ಕೂಡಲೇ ಅವರನ್ನು ಸಮೀಪದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಈ ಮಧ್ಯೆ ಶಾಲೆಯಲ್ಲಿನ ಕಿರುಕುಳದಿಂದಾಗಿ ಪತ್ನಿ ಮಾನಸಿಕವಾಗಿ ನೊಂದಿದ್ದು, ಮನೆಯಲ್ಲಿಯೂ ನೆಮ್ಮದಿಯಿಂದ ಇರಲಾಗದ ಸ್ಥಿತಿ ಇದೆ ಎಂದು ಮಲ್ಲಿಕಾ ಅವರ ಪತಿ ದಿನೇಶ್ ಶೆಟ್ಟಿ ಅವರು ಕುಂದಾಪ್ರ ಡಾಟ್ ಕಾಂನೊಂದಿಗೆ ಅಳಲು ತೋಡಿಕೊಂಡರು. ಕುಂದಾಪ್ರ ಡಾಟ್ ಕಾಂ.

Click here

Click here

Click here

Click Here

Call us

Call us

ಶಿಕ್ಷಣ ಸಚಿವರ ಸ್ಪಂದನೆ:
ಶಿಕ್ಷಕರ ಮೇಲಿನ ಹಲ್ಲೆಯ ಬಗ್ಗೆ ರಾಜ್ಯ ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪ್ರತಿಕ್ರಿಯಿಸಿದ್ದು, ಎಸ್‌ಡಿಎಂಸಿ ಅಧ್ಯಕ್ಷರಿರುವುದು ಶಾಲೆಯ ಅಭಿವೃದ್ಧಿಗೆ ಹೊರತು ಅವನತಿಗಲ್ಲ. ಹಲ್ಲೆಗೊಳಗಾದ ಶಿಕ್ಷಕಿಯೊಂದಿಗೆ ಮಾತನಾಡಿ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಸ್ಥಳೀಯ ಶಾಸಕರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೂ ಮಾತನಾಡಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ತಿಳಿಸಲಾಗಿದೆ ಎಂದು ತಮ್ಮ ಸಾಮಾಜಿಕ ಜಾಲಾತಾಣದಲ್ಲಿ ಹೇಳಿಕೊಂಡಿದ್ದಾರೆ. /ಕುಂದಾಪ್ರ ಡಾಟ್ ಕಾಂ/

ಬೈಂದೂರು ತಹಶೀಲ್ದಾರ್ ಬಸಪ್ಪ ಪಿ. ಪೂಜಾರ್ ಹಾಗೂ ಬೈಂದೂರು ವೃತ್ತ ನಿರೀಕ್ಷಕ ಸುರೇಶ್ ನಾಯ್ಕ್ ಮನವಿ ಸ್ವೀಕರಿಸಿ ಅಗತ್ಯ ಕ್ರಮ ವಹಿಸುವ ಬಗ್ಗೆ ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರುಗಾರ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಧ್ಯಕ್ಷ ರವೀಂದ್ರ ಹೆಗ್ಡೆ, ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ದಿನಕರ ಶೆಟ್ಟಿ, ಕುಂದಾಪುರ ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಸದಾರಾಮ ಶೆಟ್ಟಿ, ಪ್ರೌಢಶಾಲಾ ಸಹಶಿಕ್ಷಕರ ಸಂಘ ಜಿಲ್ಲಾಧ್ಯಕ್ಷ ಕಿರಣ ಹೆಗ್ಡೆ ಹಾಗೂ ಜಿಲ್ಲೆಯ ವಿವಿಧ ಪದವಾರು ಸಂಘಗಳ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. /ಕುಂದಾಪ್ರ ಡಾಟ್ ಕಾಂ/ ಕುಂದಾಪ್ರ ಡಾಟ್ ಕಾಂ.

 

Leave a Reply