Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಂಚಾಯತ್ ರಾಜ್ ವ್ಯವಸ್ಥೆ ಬಲವರ್ಧನೆಗೆ ಬೆಂಬಲ: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ
    ಉಡುಪಿ ಜಿಲ್ಲೆ

    ಪಂಚಾಯತ್ ರಾಜ್ ವ್ಯವಸ್ಥೆ ಬಲವರ್ಧನೆಗೆ ಬೆಂಬಲ: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ

    Updated:28/12/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೋಟ: ಕರ್ನಾಟಕದ ಪಂಚಾಯತ್‌ರಾಜ್ ವ್ಯವಸ್ಥೆ ಸದೃಢವಾಗಿ ಬೆಳೆದು ಇಡೀ ದೇಶಕ್ಕೆ ಮಾದರಿಯಾಗಿದೆ. ಇದನ್ನು ಇನ್ನಷ್ಟು ಬಲಪಡಿಸಲು ನಿಟ್ಟಿನಲ್ಲಿ ರಾಜ್ಯ ಸರಕಾರ ಎಲ್ಲ ರೀತಿಯ ಬೆಂಬಲ ನೀಡಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

    Click Here

    Call us

    Click Here

    ಅವರು ಶನಿವಾರ ಕೋಟತಟ್ಟ ಗ್ರಾಮ ಪಂಚಾಯತ್ ಹಾಗೂ ಡಾ. ಶಿವರಾಮ ಕಾರಂತರ ಪ್ರತಿಷ್ಠಾನದ ವತಿಯಿಂದ ಶನಿವಾರ ಕೋಟ ವಿವೇಕ ಕಾಲೇಜಿನ ಕ್ರೀಡಾಂಗಣದಲ್ಲಿ ಅವಿಭಜಿತ ದ.ಕ. ಜಿಲ್ಲೆಗಳ ಪಂಚಾಯತ್‌ರಾಜ್ ಮತ್ತು ನಗರ ಸ್ಥಳೀಯಾಡಳಿತ ಜನಪ್ರತಿನಿಧಿಗಳ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹೊಳಪು-2019’ ಉದ್ಘಾಟಿಸಿ ಮಾತನಾಡುತಿದ್ದರು.

    ಅಧಿಕಾರ ವಿಕೇಂದ್ರೀಕರಣದ ಆಶಯ ಬಹಳ ದೊಡ್ಡದು. ಗ್ರಾಮಸಭೆಗಳ ಮಟ್ಟದಿಂದಲೇ ಆಯಾ ಪ್ರದೇಶಗಳಿಗೆ ಅಗತ್ಯವಾದ ಯೋಜನೆಗಳು ರೂಪುಗೊಳ್ಳಬೇಕು. ಸ್ಥಳೀಯ ಸಂಸ್ಥೆಗಳಿಗೆ ಆರ್ಥಿಕ ಮತ್ತು ಕಾರ್ಯನಿರ್ವಹಣಾ ಸ್ವಾತಂತ್ರ್ಯ ಇರಬೇಕು. ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು, ತ್ಯಾಜ್ಯ ವಿಲೇವಾರಿ, ರಸ್ತೆಗಳು ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಲು ರಾಜ್ಯ ಸರಕಾರ ಬದ್ಧವಾಗಿದೆ ಎಂದು ಅವರು ತಿಳಿಸಿದರು.

    ಪಂಚಾಯತ್‌ರಾಜ್ ವ್ಯವಸ್ಥೆ ಅಧಿಕಾರ ವಿಕೇಂದ್ರೀಕರಣ ಆಗಿದೆಯೇ ಅಥವಾ ಭ್ರಷ್ಟಾಚಾರದ ವಿಕೇಂದ್ರೀಕರಣ ಆಗಿದೆಯೇ ಎಂಬ ಜಿಜ್ಞಾಸೆಗಳು ನಡೆದಿವೆ. ಗ್ರಾಮ ಮಟ್ಟದಲ್ಲಿ ಯೋಜನೆಗಳು ರೂಪುಗೊಳ್ಳುವುದು ಮತ್ತು ಅನುಷ್ಠಾನಗೊಳ್ಳುವುದು ಸರಿಯಾದರೂ ಅವುಗಳ ಸೂಕ್ತ ಮೇಲ್ವಿಚಾರಣೆ ಇಲ್ಲದಿದ್ದರೆ ಉzಶಗಳು ವಿಫಲವಾಗುವ ಅಪಾಯಗಳಿವೆ. ಆದುದರಿಂದ ಸ್ಥಳೀಯ ಸಂಸ್ಥೆಗಳು ತಳಮಟ್ಟದಿಂದ ಬಲಗೊಳ್ಳಬೇಕು ಎಂದರು.

    Click here

    Click here

    Click here

    Call us

    Call us

    ಚುನಾಯಿತ ಸದಸ್ಯರು ನಿರ್ದಿಷ್ಟ ಕಾರ್ಯತಂತ್ರದ ಜೊತೆಗೆ ತತ್ಪಾದರ್ಶದ ಚೌಕಟ್ಟನ್ನು ಹಾಕಿಕೊಳ್ಳಬೇಕು. ಸುಧಾರಣೆ, ದಕ್ಷತೆ, ಬದ್ಧತೆ ಮತ್ತು ಫಲಿತಾಂಶ ಆಧಾರಿತ ಅನುಷ್ಠಾನಕ್ಕೆ ಆದ್ಯತೆ ನೀಡಿ ಕೆಲಸ ಮಾಡಿದಾಗ ಮಾತ್ರ ಅಧಿಕಾರ ವಿಕೇಂದ್ರೀಕರಣವನ್ನು ಸಮರ್ಥಿಸಬಹುದಾಗಿದೆ ಎಂದು ಅವರು ಅಭಿಪ್ರಾಯ ಪಟ್ಟರು.

    ಗೌರವ ಸ್ವೀಕರಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿ, ಗ್ರಾಮಾಂತರ ಪ್ರದೇದ ಪ್ರತಿ ಮನೆಗಳಲ್ಲೂ ಶೌಚಾಲಯ ನಿರ್ಮಿಸುವ ಕುರಿತು ಸ್ಥಳೀಯಾಡಳಿತದ ಜನಪ್ರತಿನಿಧಿಗಳು ಪ್ರತಿಜ್ಞೆ ಮಾಡಬೇಕು. ಸರಕಾರ ನೀಡಿರುವ ೨೦ಲಕ್ಷ ರೂ. ಬಳಸಿಕೊಂಡು ಪ್ರತಿ ಗ್ರಾಪಂಗಳಲ್ಲಿ ತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪಿಸಬೇಕು. ರಾಜ್ಯದ ಎಲ್ಲ ೬೦೨೧ ಗ್ರಾಪಂ ಕಟ್ಟಡಗಳಿಗೆ ಸೋಲಾರ್ ಆಳವಡಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಅದನ್ನು ಪ್ರತಿಯೊಬ್ಬರು ಅನುಷ್ಠಾನಕ್ಕೆ ತರಬೇಕು ಎಂದು ಹೇಳಿದರು.

    ಸಚಿವ ಕೋಟ ಶ್ರೀನಿವಾಸ ಪೂಜಾರಿ ಅತ್ಯುತ್ತಮ ಗ್ರಾಪಂ ಗಳಿಗೆ ಪ್ರಶಸ್ತಿ ಪುರಸ್ಕಾರವನ್ನು ಪ್ರದಾನ ಮಾಡಿದರು. ಮಾಜಿ ಸಚಿವ ಜಯ ಪ್ರಕಾಶ್ ಹೆಗ್ಡೆ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಜಿಪಂ ಅಧ್ಯಕ್ಷ ದಿನಕರ ಬಾಬು ಕ್ರೀಡಾ ಜ್ಯೋತಿ ಹಸ್ತಾಂತರಿಸಿದರು. ದ.ಕ. ಜಿಪಂ ಅಧ್ಯಕ್ಷೆ ಮೀನಾಕ್ಷಿ ಪ್ರತಿಜ್ಞಾ ವಿಧಿ ಬೋಧಿssಸಿದರು.

    ಅಧ್ಯಕ್ಷತೆಯನ್ನು ಕೋಟತಟ್ಟು ಗ್ರಾಪಂ ಅಧ್ಯಕ್ಷ ರಘು ತಿಂಗಳಾಯ ವಹಿಸಿ ದ್ದರು. ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಉಡುಪಿ ಶಾಸಕ ಕೆ.ರಘುಪತಿ ಭಟ್, ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಉಡುಪಿ ತಾಪಂ ಅಧ್ಯಕ್ಷೆ ನೀತಾ ಗುರುರಾಜ ಪೂಜಾರಿ, ತಾಪಂ ಸದಸ್ಯೆ ಜ್ಯೋತಿ ಕುಂದರ್, ಲಲಿತಾ, ಜಿಲ್ಲಾಧಿಕಾರಿ ಜಗದೀಶ್, ಜಿಪಂ ಸಿಇಓ ಪ್ರೀತಿ ಗೆಹ್ಲೊತ್ ಮೊದಲಾದವರು ಉಪಸ್ಥಿತರಿದ್ದರು. ಪ್ರತಿಷ್ಠಾನದ ಗೌರವಾಧ್ಯಕ್ಷ ಆನಂದ ಸಿ. ಕುಂದರ್ ಸ್ವಾಗತಿಸಿದರು. ಸತೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

    ಉಡುಪಿ ಹಾಗೂ ದ.ಕ. ಜಿಲ್ಲೆಯ ಒಟ್ಟು ೪೧೩ ಸ್ಥಳೀಯಾಡಳಿತ ಸಂಸ್ಥೆಗಳ ಜನಪ್ರತಿನಿಧಿಗಳು ಹಾಗೂ ಸಿಬಂದಿ ಪಥಸಂಚಲನದಲ್ಲಿ ಭಾಗವಹಿಸಿದರು. ಸ್ಪರ್ಧೆಯಲ್ಲಿ ಸೂಪರ್ ಮಿನಿಟ್, ಗಾಯನ, ಛದ್ಮವೇಷ, ೧೦೦ ಮೀಟರ್ ಓಟ, ಗುಂಡು ಎಸೆತ, ರಿಂಗ್ ಇನ್ ದ ವಿಕೆಟ್, ಮಡಕೆ ಒಡೆಯವುದು, ಹಗ್ಗ ಜಗ್ಗಾಟ, ತ್ರೋಬಾಲ್ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಜರಗಿದವು.

     

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ

    06/12/2025

    ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ

    06/12/2025

    ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d