ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಂಗ ಸಂಸ್ಥೆಯಾದ ಡಾ. ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ದಶಮ ಸಂಭ್ರಮದ ನೆನಪಿಗಾಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪ್ರತಿ ತರಗತಿಗೆ ’ಲೆಕ್ಚರ್ ಪೋಡಿಯಂ’ನ್ನು ಕೊಡುಗೆಯಾಗಿ ನೀಡಿದರು. ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಕಾರ್ಯಕ್ರಮದಲ್ಲಿ ತರಗತಿವಾರು ವಿದ್ಯಾರ್ಥಿ ಪ್ರತಿನಿಧಿಗಳು ಸಾಂಕೇತಿಕವಾಗಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಉಮೇಶ್ ಶೆಟ್ಟಿ ಕೊತ್ತಾಡಿ, ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರವೀಣ್ ಮೊಗವೀರ ಗಂಗೊಳ್ಳಿ ಇವರಿಗೆ ಹಸ್ತಾಂತರಿಸಿದರು.