ಜ.2-6: ಆಳ್ವಾಸ್‌ನಲ್ಲಿ ರಾಷ್ಟ್ರೀಯ ವಿಶ್ವವಿದ್ಯಾಲಯ ಅಥ್ಲೆಟಿಕ್ ಕ್ರೀಡಾಕೂಟ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಮೂಡುಬಿದಿರೆ: ಜನವರಿ 2ರಿಂದ 6ರವರೆಗೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ, ಅಸೊಸೀಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಯ ಸಹಭಾಗಿತ್ವದಲ್ಲಿ 80ನೇ ಅಖಿಲ ಭಾರತ ಅಂತರ್‌ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‌ಶಿಫ್ ಅನ್ನು ಆಯೋಜಿಸಲಾಗಿದೆ.

Call us

Click Here

ಈ ಕ್ರೀಡಾಕೂಟವು ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆಯಲಿದ್ದು, ಕ್ರೀಡಾಕೂಟದಲ್ಲಿ ದೇಶದ ೪೦೦ಕ್ಕೂ ಅಧಿಕ ವಿಶ್ವವಿದ್ಯಾಲಯಗಳ ಸುಮಾರು 5000 ಅಥ್ಲೀಟ್‌ಗಳು ಹಾಗೂ 2000 ಕ್ರೀಡಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕ್ರೀಡಾಕೂಟದ ವ್ಯವಸ್ಥೆಗಾಗಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದಿಂದ ಒಂದು ಕೋಟಿ ರೂ. ಅನುದಾನ ದೊರೆತಿದೆ. ಇದರೊಟ್ಟಿಗೆ ರಾಜ್ಯ ಸರ್ಕಾರದಿಂದ 50 ಲಕ್ಷ ರೂ. ನೀಡುವ ಕುರಿತು ಕ್ರೀಡಾ ಮಂತ್ರಿ ಕೆ.ಎಸ್.ಈಶ್ವರಪ್ಪ ವಾಗ್ದಾನ ನೀಡಿದ್ದಾರೆ ಎಂದು ಅವರು ವಿವರಿಸಿದರು.

ಉದ್ಘಾಟನೆಗೆ ಕಿರಣ್ ರಿಜಿಜು:
ಜ.2ರಂದು ಸಂಜೆ 5:45ಕ್ಕೆ ಕ್ರೀಡಾಕೂಟದ ಉದ್ಘಾಟನೆ ನಡೆಯಲಿದ್ದು, ಭಾರತ ಸರ್ಕಾರದ ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕಿರಣ್ ರಿಜಿಜು ಕೂಟವನ್ನು ಉದ್ಘಾಟಿಸಲಿದ್ದಾರೆ. ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಡಾ ಎಸ್ ಸಚ್ಚಿದಾನಂದ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದ್ದಾರೆ. ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕ್ರೀಡಾ ಸಚಿವ ಕೆ. ಎಸ್. ಈಶ್ವರಪ್ಪ, ಪ್ರವಾಸೋದ್ಯಮ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ. ರವಿ ಹಾಗೂ ಬಿಜೆಪಿ ರಾಜ್ಯಾಧ್ಯಾಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಕ್ರೀಡಾಜ್ಯೊತಿಯನ್ನು ಸ್ವೀಕರಿಸಲಿದ್ದಾರೆ. ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ ಉಮಾನಾಥ್ ಕೋಟ್ಯಾನ್ ಕ್ರೀಡಾಕೂಟದ ಧ್ವಜಾರೋಹಣವನ್ನು ನೆರವೇರಿಸಲಿದ್ದಾರೆ. ಅಸೊಸೀಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಯ ಜಂಟಿ ಕಾರ‍್ಯದರ್ಶಿ ಡಾ ಬಲ್ಜೀತ್ ಸಿಂಗ್ ಸೋಖನ್, ಸ್ಪೋರ್ಟ್ಸ ಆಥಾರಿಟಿ ಆಫ್ ಇಂಡಿಯಾದ ಡೈರೆಕ್ಟರ್ ಜನರಲ್ ಸಂದೀಪ್ ಪ್ರಧಾನ್ ವಿಶೇಷ ಆಹ್ವೌನಿತರಾಗಿದ್ದಾರೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಕ್ಷೇತ್ರದ ಹಾಲಿ ಮತ್ತು ಮಾಜಿ ಸಂಸದರು, ಶಾಸಕರು ಹಾಗೂ ಪರಿಷತ್ ಸದಸ್ಯರು ಉಪಸ್ಥಿತರಿರಲಿದ್ದಾರೆ.

ನಾಲ್ಕನೇ ಬಾರಿ ಆಳ್ವಾಸ್ ಆತಿಥ್ಯ:
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಸತತ ನಾಲ್ಕನೇ ಬಾರಿಗೆ ಅಖಿಲಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನ್ನು ಆಯೋಜಿಸುತ್ತಿದೆ. ಈ ಹಿಂದೆ 2013 ರಲ್ಲಿ 72ನೇ ಹಾಗೂ 75ನೇ ಕ್ರೀಡಾಕೂಟವನ್ನು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಹಾಗೂ 79ನೇ ಕ್ರೀಡಾಕೂಟವನ್ನು ಮಂಗಳೂರು ವಿಶ್ವವಿದ್ಯಾಲಯದ ಆಶ್ರಯದಲ್ಲಿ ಆಯೋಜಿಸಿತ್ತು.

Click here

Click here

Click here

Click Here

Call us

Call us

ಮೊದಲ ಬಾರಿ ಮಂಗಳೂರಿನಲ್ಲಿ ಸೆನೆಟ್ ಸಭೆ:
ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಸೆನೆಟ್ ಸಭೆ ಸಾಮಾನ್ಯವಾಗಿ ಬೆಂಗಳೂರಿನಲ್ಲಿ ನಡೆಯುತ್ತದೆ. ಆದರೆ, ಸೆನೆಟ್ ಸದಸ್ಯರು ಕ್ರೀಡಾಕೂಟಕ್ಕೆ ಸಾಕ್ಷಿಯಾಗಬೇಕೆಂಬ ಉದ್ದೇಶದಿಂದ ಇದೇ ಮೊದಲಬಾರಿಗೆ ಸೆನೆಟ್ ಸಭೆಯನ್ನು ಮಂಗಳೂರಿನಲ್ಲಿ ಆಯೋಜಿಸಲಾಗಿದೆ.

ಆಕರ್ಷಕ ಸಾಂಸ್ಕೃತಿಕ ಮೆರವಣಿಗೆ:
ಕ್ರೀಡಾಕೂಟದ ಸ್ಪರ್ಧೆಗಳು ಜನವರಿ 02ರಂದು ಬೆಳಗ್ಗೆ6:30ರಿಂದಲೇ ಆರಂಭವಾಗಲಿದ್ದು, ಅಂದು ಸಂಜೆ ಕ್ರೀಡಾಕೂಟದ ಉದ್ಘಾಟನೆ ನಡೆಯಲಿದೆ. ಅಪರಾಹ್ನ 3:30ಕ್ಕೆ ಮೂಡುಬಿದಿರೆಯ ಹನುಮಾನ್ ದೇವಸ್ಥಾನದಿಂದ ಭವ್ಯ ಮೆರವಣಿಗೆ ಹೊರಡಲಿದೆ. ನಮ್ಮ ರಾಷ್ಟ್ರದ ವಿವಿಧ ಕಲೆ-ಸಂಸ್ಕೃತಿಗಳನ್ನು ಬಿಂಬಿಸುವ 100ಕ್ಕೂ ಹೆಚ್ಚು ಕಲಾತಂಡಗಳು ಈ ಮೆರವಣಿಗೆಯಲ್ಲಿಇರಲಿವೆ. ಸಂಜೆ 5:45ಕ್ಕೆ ಪಥಸಂಚಲನದ ನಂತರ ಕ್ರೀಡಾಕೂಟದ ಉದ್ಘಾಟನೆ ನಡೆಯಲಿದೆ.

ಉಚಿತ ಊಟ ಹಾಗೂ ವಸತಿ ಸೌಲಭ್ಯ”
ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಗಮಿಸುವ ಎಲ್ಲಾ ಸ್ಪರ್ಧಿಗಳು, ತರಬೇತುದಾರರು, ಕ್ರೀಡಾಧಿಕಾರಿಗಳು ಹಾಗೂ ವಿಶೇಷ ಆಹ್ವಾನಿತರಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಉಚಿತ ಊಟ ಹಾಗೂ ವಸತಿ ಸೌಲಭ್ಯವನ್ನು ಒದಗಿಸಲಾಗುತ್ತಿದೆ. ಕ್ರೀಡಾಪಟುಗಳ ಅನುಕೂಲಕ್ಕಾಗಿ ಉತ್ತರ ಹಾಗೂ ದಕ್ಷಿಣ ಭಾರತ ಎರಡೂ ಶೈಲಿಯ ಊಟದ ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಗೆ ಕ್ರೀಡಾಕೂಟಕ್ಕೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಸಂಸ್ಥೆ ನೀಡುತ್ತಿದೆ.

ವಿಶೇಷ ಸನ್ಮಾನ:
ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿದ ಆಳ್ವಾಸ್ ಸಂಸ್ಥೆಯ ಐವರು ಕ್ರೀಡಾಪಟುಗಳನ್ನು ಉದ್ಘಾಟನಾ ಸಮಾರಂಭದಲ್ಲಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಗುವುದು. ಒಲಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ ಎಂ.ಆರ್.ಪೂವಮ್ಮ, ಸತೀಶ್ ರೈ, ಅಶ್ವಿನಿ ಅಕ್ಕುಂಜಿ, ಮೋಹನ್ ಹಾಗೂ ಧಾರುಣ್ ಅಯ್ಯಸಾಮಿ ವಿಶೇಷ ಸನ್ಮಾನವನ್ನು ಸ್ವೀಕರಿಸಲಿದ್ದಾರೆ.

80ನೇ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನ ವಿಶೇಷತೆಗಳು:

  • ರಾಷ್ಟ್ರದ 400 ವಿಶ್ವವಿದ್ಯಾಲಯಗಳ ಸುಮಾರು 5 ಸಾವಿರ ಅಥ್ಲೀಟ್‌ಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಜೊತೆಗೆ ಸುಮಾರು 2000 ಕ್ರೀಡಾಧಿಕಾರಿಗಳು ಭಾಗವಹಿಸಲಿದ್ದು, ರಾಷ್ಟ್ರದ ಖ್ಯಾತ ಕ್ರೀಡಾಪಟುಗಳನ್ನು ಹಾಗೂ ತರಬೇತುದಾರರನ್ನು ವಿಶೇಷವಾಗಿ ಆಹ್ವಾನಿಸಲಾಗಿದೆ.
  • ಮೊದಲಬಾರಿಗೆ ಆನ್‌ಲೈನ್ ನೋಂದಣಿ ಸೌಲಭ್ಯವನ್ನು ನೀಡಲಾಗಿದೆ.
  • ಉದ್ಘಾಟನಾ ಸಮಾರಂಭದಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪಾಲ್ಗೊಂಡ ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ.
  • ಐದು ದಿನ ಹಗಲು ಮತ್ತುರಾತ್ರಿ ಕ್ರೀಡಾಕೂಟದ ಸ್ಪರ್ಧೆಗಳು ನಡೆಯಲಿವೆ.
  • ವಿಶೇಷವಾಗಿ ಹೊನಲು ಬೆಳಕು ಹಾಗೂ ಅತ್ಯಾಧುನಿಕ ಫೋಟೋ ಫಿನಿಶಿಂಗ್ ತಂತ್ರಜ್ಞಾನದ ವ್ಯವಸ್ಥೆಯನ್ನು ಮಾಡಲಾಗಿದೆ.
  • ಪ್ರತಿದಿನ ರಾತ್ರಿ 8 ಗಂಟೆಗೆ ವಿಜಯ ವೇದಿಕೆಯಲ್ಲಿ ಪದಕ ವಿಜೇತರಿಗೆ ಸನ್ಮಾನ ನಡೆಯಲಿದೆ. ನಂತರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
  • ಕ್ರೀಡಾಕೂಟದ ಪದಕ ವಿಜೇತರಿಗೆ ಹಾಗೂ ಕೂಟದಾಖಲೆ ನಿರ್ಮಿಸಿದ ಆಟಗಾರರಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಗದು ಪುರಸ್ಕಾರವನ್ನು ನೀಡಲಾಗುವುದು.

ಸಮಾರೋಪ ಸಮಾರಂಭ:
ಕ್ರೀಡಾಕೂಟದ ಸಮಾರೋಪ ಸಮಾರಂಭವು ಜನವರಿ 6ರಂದು ಮಧ್ಯಾಹ್ನ 3 ಗಂಟೆಗೆ ಸ್ವರಾಜ್ಯ ಮೈದಾನದಲ್ಲಿ ಜರುಗಲಿದ್ದು, ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಡಾ.ಎಸ್. ಸಚ್ಚಿದಾನಂದ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲಿದ್ದಾರೆ. ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್, ಮಾಜಿ ಸಚಿವರಾದ ಅಭಯಚಂದ್ರ ಜೈನ್ ಹಾಗೂ ಅಮರ್‌ನಾಥ್ ಶೆಟ್ಟಿ, ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಆರ್‌ಜಿಯುಎಚ್‌ಎಸ್‌ನ ಡೆಪ್ಯುಟಿ ರಿಜಸ್ಟ್ರಾರ್ ಡಾ.ಬಿ.ವಸಂತ್ ಶೆಟ್ಟಿ, ಆರ್‌ಜಿಯುಎಚ್‌ಎಸ್‌ನ ಸಿಂಡಿಕೇಟ್ ಸದಸ್ಯ ಡಾ.ಶಿವಶರಣ್ ಶೆಟ್ಟಿ, ಆರ್‌ಜಿಯುಎಚ್‌ಎಸ್‌ನ ಸೆನೆಟ್ ಸದಸ್ಯ ಡಾ.ಶರಣ್ ಶೆಟ್ಟಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟೀ ವಿವೇಕ್ ಆಳ್ವ ಉಪಸ್ಥಿತರಿದ್ದರು.

 

Leave a Reply