ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಜೀರ್ಣೋದ್ಧಾರಗೊಳ್ಳುತ್ತಿರುವ ನಾಕಟ್ಟೆ ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿಗೆ ವಿಧಾನ ಪರಿಷತ್ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ ಭೇಟಿ ನೀಡಿದರು.
ಈ ಸಂದರ್ಭ ಮಾತನಾಡಿದ ಅವರು ಉಡುಪಿ ಜಿಲ್ಲೆಯಲ್ಲಿಯ ಎಲ್ಲಾ ಗರಡಿಗಳಿಗಿಂತ ವಿಶಿಷ್ಟವಾಗಿ ನಿರ್ಮಾಣಗೊಂಡಿರುವ ಗರಡಿ ಶಿಲೆ ಹಾಗೂ ಕಾಷ್ಟಶಿಲ್ಪ ಸುಂದರವಾಗಿ ಮೂಡಿಬಂದಿದೆ ಎಂದು ಮೆಚ್ಚುಗೆ ಸೂಚಿಸಿದರು.
ಈ ಸಂದರ್ಭ ಯಡ್ತರೆ ಗ್ರಾಪಂ ಉಪಾಧ್ಯಕ್ಷ ನಾಗರಾಜ ಗಾಣಿಗ, ಸದಸ್ಯ ಉಮೇಶ್, ಆನಂದ ಶೆಟ್ಟಿ, ವೆಂಕಟರಮಣ, ಸ್ಥಳೀಯರಾದ ಎಸ್. ಮದನಕುಮಾರ್ ಉಪ್ಪುಂದ, ಸುರೇಶ್ ಹೋಬಳಿದಾರ್, ಮಂಜುನಾಥ ಪೂಜಾರಿ ತಗ್ಗರ್ಸೆ, ಯಡ್ತರೆ ಬಿಲ್ಲವ ಸಂಘದ ಅಧ್ಯಕ್ಷ ಬಿ. ದೊಟ್ಟಯ್ಯ ಪೂಜಾರಿ, ಉಪ್ಪುಂದ ಬಿಲ್ಲವ ಸಂಘದ ಗಣೇಶ್ ಪೂಜಾರಿ, ಶೇಖರ ಪೂಜಾರಿ, ಶಿರೂರು ಬಿಲ್ಲವ ಸಂಘದ ಚಿಕ್ಕು ಪೂಜಾರಿ, ರಘುರಾಮ ಪೂಜಾರಿ, ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಉಪಾಧ್ಯಕ್ಷ ವೆಂಕಟ ಪೂಜಾರಿ, ಕಾರ್ಯದರ್ಶಿ ಶಿವರಾಮ ಪೂಜಾರಿ, ಅರ್ಚಕ ಕುಟುಂಬದ ಮಂಜುನಾಥ ಮೇಲ್ಹಿತ್ಲು, ಮುತ್ತಯ್ಯ ಪೂಜಾರಿ ಮೊದಲಾದವರು ಇದ್ದರು.

















