ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯ ಬಿ. ವೈ. ರಾಘವೇಂದ್ರ ಅವರು ಇತ್ತಿಚಿಗೆ ದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ, ಮೂಕಾಂಬಿಕಾ ರೋಡ್ ಬೈಂದೂರು ರೈಲ್ವೆ ನಿಲ್ದಾಣಕ್ಕೆ ಸಂಬಂಧಿಸಿದಂತೆ ಮನವಿ ಸಲ್ಲಿಸಿದರು.
ಮೂಕಾಂಬಿಕಾ ರೋಡ್ ಬೈಂದೂರು ರೈಲ್ವೆ ನಿಲ್ದಾಣದಲ್ಲಿ ಹೆಚ್ಚಿನ ರೈಲು ನಿಲುಗಡೆಗೆ ಆದ್ಯತೆ ನೀಡುವಂತೆ ಅವರು ಮನವಿ ಸಲ್ಲಿಸಿದ್ದು, ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ರೈಲ್ವೆ ಸಚಿವರು ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದ್ದಾರೆ.