ಮನುಷ್ಯ ಧರ್ಮ ಗೌರವಿಸಿದಾಗ ಬದುಕು ಉತ್ತಮ: ಅಬ್ದುಲ್ ರವೂಫ್

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ನೆಹರು ಯುವ ಕೇಂದ್ರ ಉಡುಪಿ ಹಾಗೂ ಸುರಭಿ ರಿ. ಬೈಂದೂರು ಸಂಸ್ಥೆಯ ಆಶ್ರಯದಲ್ಲಿ ಗುರುವಾರ ಇಲ್ಲಿನ ರೋಟರಿ ಭವನದಲ್ಲಿ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ಜರುಗಿತು.

Call us

Click Here

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಬೈಂದೂರು ಶಿಕ್ಷಣ ಇಲಾಖೆಯ ಸಮನ್ವಯಾಧಿಕಾರಿ ಅಬ್ದುಲ್ ರವೂಫ್ ಮಾತನಾಡಿ ಮಹತ್ಮಾ ಗಾಂಧಿಯವರ ಸಿದ್ಧಾಂತವನ್ನು ಆಚರಣೆ ತರುವ ಕೆಲಸವಾದರೆ ಅದುವೇ ಅವರಿಗೆ ನೀಡಬಹುದಾದ ನಿಜವಾದ ಗೌರವ ಎಂದರು. ಎಲ್ಲಾ ಧರ್ಮಗಳ ಆಶಯ ಒಂದೇ ಆಗಿದ್ದು, ಮನುಷ್ಯ ವರ್ಗವನ್ನು ಗೌರವಿಸಿ ಬದುಕಬೇಕು ಎಂಬ ಭಾವನೆ ಇದ್ದರೆ ಮಾತ್ರ ಮನುಷ್ಯನ ಬದುಕು ಉತ್ತಮವಾಗಲು ಹಾಗೂ ಭಾವೈಕ್ಯತೆ ಮೂಡಲು ಸಾಧ್ಯವಿದೆ ಎಂದರು

ಈ ಸಂದರ್ಭ ಸುರಭಿ ರಿ. ಬೈಂದೂರು ಅಧ್ಯಕ್ಷ ಸತ್ಯನಾ ಕೊಡೇರಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷ ಎಸ್. ರಾಜು ಪೂಜಾರಿ ಅತಿಥಿಗಳಾಗಿದ್ದರು. ಕಾರ್ಯಕ್ರಮದಲ್ಲಿ ರಾಷ್ಟ್ರಪಿತ ಮಹತ್ಮಾ ಗಾಂಧೀಜಿ ಅವರನ್ನು ಸ್ಮರಿಸಿ ಬಳಿಕ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು. ನೆಹರು ಯುವ ಕೇಂದ್ರದ ಸ್ವಯಂಸೇವಕ ಸುನಿಲ್ ಹೆಚ್ ಜಿ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುರಭಿ ಬೈಂದೂರು ಜೊತೆ ಕಾರ್ಯದರ್ಶಿ ಲಕ್ಷ್ಮಣ ಕೊರಗ ಸ್ವಾಗತಿಸಿ, ನಿರ್ದೇಶಕ ಸುಧಾಕರ ಪಿ. ಬೈಂದೂರು ವಂದಿಸಿದರು. ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ಉಪ್ಪುಂದ ಕಾರ್ಯಕ್ರಮ ನಿರೂಪಿಸಿದರು.

Leave a Reply