ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಉಪ್ಪುಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ಈಗ ಮುಖ್ಯ ಶಿಕ್ಷಕರಾಗಿ ಭಡ್ತಿ ಹೊಂದಿದ ಎನ್.ಕೆ ಬಿಲ್ಲವ ಹಾಗೂ ಅವರ ಪತ್ನಿ ಜ್ಯೋತಿ ಅವರನ್ನು ಶಾಲೆಯ ಶಿಕ್ಷಕರು, ಎಸ್.ಡಿ.ಎಂ.ಸಿ ಸದಸ್ಯರು ಸನ್ಮಾನಿಸಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ಸುನೀತಾ ಅಧ್ಯಕ್ಷತೆ ವಹಿಸಿದ್ದರು. ಎನ್.ಕೆ ಬಿಲ್ಲವರ ಬಗ್ಗೆ ಮುಖ್ಯಶಿಕ್ಷಕರಾದ ವೆಂಕ್ಟ ಉಪ್ಪಾರರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಹಶಿಕ್ಷಕರಾದ ಭಾರತಿ ಸ್ವಾಗತಿಸಿದರು, ಭಾಸ್ಕರ್ ಪ್ರಭು ಹಾಗೂ ಸಂತೋಷ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ರಾಘವೇಂದ್ರ ದೇವಾಡಿಗ ಸಹಕರಿಸಿದರು.