Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಾಸದೇವ ಭಟ್ ಅವರಿಗೆ ಪತ್ರಿಕಾ ದಿನದ ಗೌರವ ಪ್ರದಾನ
    ಉಡುಪಿ ಜಿಲ್ಲೆ

    ವಾಸದೇವ ಭಟ್ ಅವರಿಗೆ ಪತ್ರಿಕಾ ದಿನದ ಗೌರವ ಪ್ರದಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಉಡುಪಿ: ಬಹುಮುಖ ಪ್ರತಿಭೆಯ ನಾದವೈಭವಂ ಉಡುಪಿ ವಾಸುದೇವ ಭಟ್ಟರು ಪತ್ರಕರ್ತರಾಗಿ ಕೂಡ ಅಂದಿನ ಕಾಲದಲ್ಲಿ ಸಾರ್ಥಕ ಕೀರ್ತಿಯನ್ನು ಪಡೆದಿದ್ದಾರೆ. ಅವರಿಗೆ ರಾಜ್ಯೋತ್ಸವದಂತಹ ಪ್ರಶಸ್ತಿಗಳು ಯಾವಾಗಲೋ ಒಲಿದು ಬರಬೇಕಿತ್ತು ಎಂದು ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಹೇಳಿದರು.

    Click Here

    Call us

    Click Here

    ಅವರು ಪತ್ರಕರ್ತರ ವೇದಿಕೆ ಬೆಂಗಳೂರು ಇದರ ಉಡುಪಿ ಜಿಲ್ಲಾ ಘಟಕದ ಆಶ್ರಯದಲ್ಲಿ ‘ಕುಂದಾಪ್ರ ಡಾಟ್ ಕಾಂ’ ಸಹಯೋಗದೊಂದಿಗೆ ಆಯೋಜಿಸಿದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ನಾದವೈಭವಂ ಉಡುಪಿ ವಾಸುದೇವ ಭಟ್ ಅವರಿಗೆ ’ಪತ್ರಿಕಾ ದಿನದ ಗೌರವ’ವನ್ನು ಅವರ ನಿವಾಸದಲ್ಲಿಯೇ ಪ್ರಧಾನ ಮಾಡಿ ಮಾತನಾಡಿದರು.

    ಸರಕಾರದ ಯಾವುದೇ ಪ್ರಶಸ್ತಿಗಳು ಲಾಭಿ ಇಲ್ಲದೆ ಸಿಗದ ಪರಿಸ್ಥಿತಿ ಇದೆ. ಇದರಲ್ಲಿ ಮುಚ್ಚುಮರೆ ಎಂಬುದಿಲ್ಲ. ವಾಸುದೇವ ಭಟ್ ಅವರನ್ನು ಸರಕಾರ ಗುರುತಿಸಿ ಸೂಕ್ತ ಗೌರವ ನೀಡಬೇಕೆಂದು ಆಶಿಸಿದರು. ಕಲ್ಪವೃಕ್ಷ, ಲೇಖನ ಸಾಮಾಗ್ರಿ, ಸ್ಮರಣಿಕೆ ಹಾಗೂ ಮಾನಪತ್ರ ಸಹಿತ ಅವರನ್ನು ಗೌರವಿಸಲಾಯಿತು.

    ಗೌರವವನ್ನು ಸ್ವೀಕರಿಸಿದ ನಾದವೈಭವಂ ಉಡುಪಿ ವಾಸುದೇವ ಭಟ್ ಮಾತನಾಡಿ ಪ್ರಶಸ್ತಿ-ಗೌರವಗಳ ಬಗೆಗೆ ನನಗೆ ಅಂತಹ ವ್ಯಾಮೋಹಗಳಿಲ್ಲ. ಜನರ ಪ್ರೀತಿಯಿಂದ ಸಿಗುವ ಇಂತಹ ಗೌರವಗಳು ನನಗೆ ಅತಿ ಸಂತೋಷವನ್ನು ತಂದಿವೆ. ಪ್ರತಿಯೊಬ್ಬರೂ ಕೂಡ ಜೀವನೋತ್ಸಾಹನ್ನು ಉಳಿಸಿಕೊಳ್ಳಬೇಕು ಎಂದರು.

    ಗ್ರಾಮೀಣ ಮತ್ತು ಸ್ವತಂತ್ರ ಪತ್ರಕರ್ತರಿಗೆ ಆರ್ಥಿಕ ಬಲವನ್ನು ಅವರು ಕೆಲಸ ಮಾಡುತ್ತಿರುವ ಸಂಸ್ಥೆಗಳು ತುಂಬಬೇಕು. ತುಳುವರ ನಾಡಿ ಮಿಡಿತವಾಗಿ ಒಂದು ತುಳು ದೈನಿಕ ಹಾಗೂ ತುಳು ಸ್ಯಾಟಲೈಟ್ ಚಾನೆಲ್ ಆರಂಭವಾಗಲಿ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪತ್ರಕರ್ತರ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಶೇಖರ ಅಜೆಕಾರು ಹಾರೈಸಿದರು.

    Click here

    Click here

    Click here

    Call us

    Call us

    ಮುಖ್ಯ ಅತಿಥಿಗಳಾಗಿ ಉಡುಪಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ| ನಿಕೇತನಾ, ಟೈಮ್ಸ್ ಆಫ್ ಕುಡ್ಲ ವಾರಪತ್ರಿಕೆಯ ಸಂಪಾದಕರಾದ ಎಸ್.ಆರ್. ಬಂಡಿಮಾರ್, ಉಡುಪಿ ತುಳುಕೂಟದ ಅಧ್ಯಕ್ಷರಾದ ಇಂದ್ರಾಳಿ ಜಯಕರ ಶೆಟ್ಟಿ ಉಪಸ್ಥಿತರಿದ್ದರು.

    ಇನ್ನರ್‌ವಿಲ್‌ನ ಗಿರಿಜಾ ರಾವ್, ರಶ್ಮಿ ಹೊಳ್ಳ, ರೋಟರಿ ಉಡುಪಿಯ ನೂತನ ಪದಾಧಿಕಾರಿಗಳಾದ ಪ್ರಭಾಕರ ಮಲ್ಯ, ರಾಮಚಂದ್ರ ಉಪಾಧ್ಯಾಯ, ಕೊಡವೂರು ಶಂಕರನಾರಾಯಣ ದೇವಸ್ಥಾನದ ಮೊಕ್ತೇಸರರಾದ ಟಿ. ರಾಘವೇಂದ್ರ ರಾವ್, ಉಡುಪಿ ಸಹೇಲಿ ಎವರ್ ಗ್ರೀನ್‌ನ ಜಯಶ್ರೀ ಪತ್ರಕರ್ತ ದಿನದ ಗೌರವ ಸ್ವೀಕರಿಸಿದ ವಾಸುದೇವ ಭಟ್ ದಂಪತಿಗಳನ್ನು ಗೌರವಿಸಿದರು. ವಾಸುದೇವ ಭಟ್ ಅವರ ಮಡದಿ ಸುನಂದಾ ವಾಸುದೇವ ಭಟ್, ಮಗಳು ಶುಭಾ ಎಸ್. ಬಾಸ್ರಿ, ಕಸಾಪ ಉಡುಪಿಯ ಕೋಶಾಧಿಕಾರಿ ಸುಬ್ರಮಣ್ಯ ಬಾಸ್ರಿ, ವಿಶ್ವಕರ್ಮ ಡಾಟ್ ಕಾಂ ನ ಉಮಾಧರ ಎಸ್. ವಿಶ್ವಕರ್ಮ, ರಾಘವ ನಂಬಿಯಾರ್, ಬಾ ಸಾಮಗ, ಕು.ಗೋ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    ‘ಕುಂದಾಪ್ರ ಡಾಟ್ ಕಾಂ’ನ ಸಂಪಾದಕ ಸುನಿಲ್ ಹೆಚ್. ಜಿ. ಬೈಂದೂರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶ್ರಾವ್ಯಾ ಎಸ್. ಬಾಸ್ರಿ ಪ್ರಾರ್ಥಿಸಿದರು. ಕೋಸ್ಟಲ್ ವೈವ್‌ನ ಬಾಲಕೃಷ್ಣ ಧನ್ಯವಾದ ಸಮರ್ಪಿಸಿದರು.

    ಪೋಟೋಗಳು: ಜನಾರ್ಧನ ಕೊಡವೂರು ಹಾಗೂ ಮನೋಹರ ಕುಂದರ್

    DSC_4987 DSC_4992 DSC_4993 DSC_4996 DSC_5024JAN_9838 (Copy)

     

    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ: ಕಾರ್ಯಕಾರಿ ಸಮಿತಿ ಸದಸ್ಯರಾಗಿ ಉದಯ ಪಡಿಯಾರ್‌, ಅಜಿತ್ ಆರಾಡಿ ಆಯ್ಕೆ

    03/02/2026

    ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    03/02/2026

    ಜಿಲ್ಲೆಯಲ್ಲಿ ಸಿ.ಎನ್.ಜಿ ಗ್ಯಾಸ್ ವಿತರಣಾ ಸಮಸ್ಯೆಗಳನ್ನು ಕೂಡಲೇ ಪರಿಹರಿಸಿ: ಸ್ವರೂಪ ಟಿ.ಕೆ

    31/01/2026
    Leave A Reply Cancel Reply

    4 × four =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.