ಬೈಂದೂರು: ತಂಬಾಕು ನಿಯಂತ್ರಣ ತನಿಖಾ ದಳದಿಂದ ದಾಳಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಉಡುಪಿ ಜಿಲ್ಲೆಯಲ್ಲಿ COTPA 2003 ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ ಕುಂದಾಪುರ ತಾಲೂಕಿನ ಬೈಂದೂರು ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿಗಳು, ಹೋಟೇಲ್‌ಗಳು, ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ದಾಳಿ ನಡೆಸಿ ಸೆಕ್ಷನ್ 4, 6(ಎ) ಮತ್ತು 6(ಬಿ) ಅಡಿಯಲ್ಲಿ 20 ಪ್ರಕರಣ ದಾಖಲಿಸಿ ರೂ. 2400 ದಂಡ ವಸೂಲಿ ಮಾಡಲಾಯಿತು. ಅದರಂತೆ ಸೆಕ್ಷನ್ 4, 6 (ಎ) ಮತ್ತು 6(ಬಿ) ನಾಮಫಲಕಗಳನ್ನು ದಾಳಿಯಲ್ಲಿ ವಿತರಿಸಲಾಯಿತು. ಹಾಗೂ ಎಲ್ಲಾ ಅಂಗಡಿ, ಹೋಟೇಲ್‌ಗಳಲ್ಲಿ ಆಹಾರ ಸುರಕ್ಷತಾ ಪರವಾನಿಗೆಯನ್ನು ಪರೀಕ್ಷಿಸಲಾಯಿತು.

Call us

Click Here

ದಾಳಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಾಸುದೇವ, ಕೋಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಉಮೇಶ್ ನಾಯಕ್, ಆಹಾರ ಸುರಕ್ಷತಾ ಅಧಿಕಾರಿ ವೆಂಕಟೇಶ್, ಉಡುಪಿ ಹಿರಿಯ ಆರೋಗ್ಯ ಸಹಾಯಕ ಸತೀಶ್ ರಾವ್, ಹಿರಿಯ ಆರೋಗ್ಯ ಸಹಾಯಕ ರಮೇಶ್ ಶೆಟ್ಟಿ, ಕುಂದಾಪುರ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ದತ್ತಾತ್ರೇಯ, ಜಿಲ್ಲಾ ಎನ್.ಸಿ.ಡಿ ಘಟಕದ ಜಿಲ್ಲಾ ಕಾರ್ಯಕ್ರಮ ಸಂಯೋಜಕ ಡಾ. ಅಫನ್, ಜಿಲ್ಲಾ ರಾಷ್ಟ್ರೀಯ ತಂಬಾಕು ನಿಯಂತ್ರಣಾ ಘಟಕದ ವತಿಯಿಂದ ಎನ್.ಟಿ.ಸಿ.ಪಿ ಜಿಲ್ಲಾ ಸಲಹೆಗಾರ್ತಿ ಮಂಜುಳಾ ಶೆಟ್ಟಿ, ಸಮಾಜಕಾರ್ಯಕರ್ತೆ ಶೈಲಾ ಶ್ಯಾಮನೂರ್, ಬೈಂದೂರು ಪೊಲೀಸ್ ಠಾಣೆಯ ಆರಕ್ಷಕರು ಮತ್ತು ವಾಹನ ಚಾಲಕರು ಉಪಸ್ಥಿತರಿದ್ದರು.

Leave a Reply