ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಆರ್ಥಿಕವಾಗಿ ಹಿಂದುಳಿದ ಜನರಿಗೆ ಸ್ವಾವಲಂಭಿನೆಯ ಬದುಕು ರೂಪಿಸುವ ಜೊತೆಗೆ ಜನರಲ್ಲಿ ಉಳಿತಾಯ ಮನೋಭಾವನೆ ಹೆಚ್ಚಿಸುವ ಉದ್ದೇಶ ಸಹಕಾರಿ ಸಂಘಗಳು ಕಾರ್ಯನಿರ್ವಹಿಸುತ್ತಿದೆ ಎಂದು ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ನ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು.
ಅವರು ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ನ ನಾವುಂದ ಶಾಖೆ ಎರಡು ವರ್ಷ ಪೂರೈಸಿದ ಅಂಗವಾಗಿ ಹಮ್ಮಿಕೊಳ್ಳಲಾದ ಗ್ರಾಹಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಗ್ರಾಹಕರ ವಿಶ್ವಾಸದೊಂದಿಗೆ ನಮ್ಮ ಸಂಸ್ಥೆ ಉತ್ತಮ ಆರ್ಥಿಕ ವ್ಯವಹಾರ ಹೊಂದಿರುವುದಲ್ಲದೇ ಪರಿಸರ ವಿವಿಧ ಅಗತ್ಯತೆಗಳಿಗೆ ನೆರವಾಗುವ ಮೂಲಕ ಸಾಮಾಜಿಕ ಬದ್ಧತೆಯನ್ನು ಪಾಲಿಸಿಕೊಂಡು ಬಂದಿದೆ ಎಂದರು.
ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷ ನರಸಿಂಹ ದೇವಾಡಿಗ, ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅದ್ಯಕ್ಷ ಎಸ್. ಜನಾರ್ದನ ಮರವಂತೆ, ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಎಂ. ಚಂದ್ರಶೀಲ ಶೆಟ್ಟಿ, ನಿರ್ದೇಶಕ ಮಂಜು ಪೂಜಾರಿ, ಎಸ್‌ಸಿಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಶಿವರಾಮ ಪೂಜಾರಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸೀತಾರಾಮ ಮಡಿವಾಳ ಮೊದಲಾದವರು ಉಪಸ್ಥಿತರಿದ್ದರು.
ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಉಪಾಧ್ಯಕ್ಷ ಎಂ ವಿನಾಯಕ ರಾವ್ ಸ್ವಾಗತಿಸಿ, ಶಾಖಾ ಪ್ರಬಂಧಕ ಶ್ರೀನಿವಾಸ್ ವಂದಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು.
ಇದನ್ನೂ ಓದಿ:
► ಮಹಿಳೆ, ಮಕ್ಕಳ ಮೇಲಿನ ದೌರ್ಜನ್ಯ ಸಹಿಸೋಲ್ಲ: ಪಿಎಸ್‌ಐ ಸಂಗೀತಾ – https://kundapraa.com/?p=35873 .