Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪತ್ರಕರ್ತ ಅರುಣ್ ಕುಮಾರ್ ಶಿರೂರು ಅವರ ಅತ್ಯುತ್ತಮ ಗ್ರಾಮಾಂತರ ವರದಿಗೆ ಪ್ರಶಸ್ತಿ
    ಕುಂದಾಪುರ

    ಪತ್ರಕರ್ತ ಅರುಣ್ ಕುಮಾರ್ ಶಿರೂರು ಅವರ ಅತ್ಯುತ್ತಮ ಗ್ರಾಮಾಂತರ ವರದಿಗೆ ಪ್ರಶಸ್ತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ,
    ಕುಂದಾಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಅತ್ಯುತ್ತಮ ಗ್ರಾಮಾಂತರ ವರದಿಗೆ ಕೊಡಮಾಡುವ ಜಿ. ನಾರಾಯಣಸ್ವಾಮಿ ಪ್ರಶಸ್ತಿಗೆ ಪತ್ರಕರ್ತ ಅರುಣ್ ಕುಮಾರ್ ಶಿರೂರು ಅವರು ಭಾಜನರಾಗಿದ್ದಾರೆ.

    Click Here

    Call us

    Click Here

    ಕಾಲೇಜು ದಿನಗಳಲ್ಲಿಯೇ ಸಾಹಿತ್ಯ ಹಾಗೂ ಸಂಘಟನಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಅರುಣ್ ಕುಮಾರ್ ಶಿರೂರು ಅವರು ಉಷಾಕಿರಣ ಪತ್ರಿಕೆಯ ಮೂಲಕ ತಮ್ಮ ವೃತ್ತಿ ಬದುಕನ್ನು ಆರಂಭಿಸಿದರು. ಮಂದೆ ನಮ್ಮ ಟಿ.ವಿ, ಕರಾವಳಿ ನ್ಯೂಸ್ ಚಾನೆಲ್‌ಗಳಲ್ಲಿ ಸುದ್ದಿ ನಿರೂಪಕರಾಗಿ ಸೇವೆ ಸಲ್ಲಿಸಿದ್ದರು. ಉದಯವಾಣಿ ಪತ್ರಿಕೆಯ ಬೈಂದೂರು ಭಾಗದ ವರದಿಗಾರರಾಗಿ ಕಳೆದ ಹನ್ನೆರಡು ವರ್ಷಗಳಿಂದ ಪತ್ರಿಕಾರಂಗದಲ್ಲಿ ತೊಡಗಿಸಿಕೊಂಡಿರುವ ಅವರು, ಬೈಂದೂರಿನ ಗ್ರಾಮೀಣ ಪ್ರದೇಶಗಳ ವರದಿಗಾರಿಕೆಯಲ್ಲಿ ಆಸಕ್ತಿಯಿಂದಲೇ ತೊಡಗಿಕೊಂಡವರು. ಗೋಳಿಬೇರಿನ ಗೋಳಿನ ಕಥೆ, ದೇವರಗದ್ದೆ ಜನರ ಪರಿಸ್ಥಿತಿ ದೇವರೇ ಕಾಯಬೇಕು, ಹೇನುಬೇರು ಜಾನುವಾರು ಮರಣ ವರದಿ ಸೇರಿದಂತೆ ಅವರು ಹಲವು ವರದಿಗಳು ಆಳುವವರ್ಗದ ಗಮನಸೆಳೆದು ಸಮಸ್ಯೆಗಳಿಗೆ ಪರಿಹಾರ ದೊರೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಪತ್ರಿಕೋದ್ಯಮದ ಜೊತೆ ಜೊತೆಗೆ ಸಂಘಟನಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಅರುಣ್ ಕುಮಾರ್ ಅವರು ಜೆಸಿಐ ತರಬೇತುದಾರರಾಗಿ, ಉತ್ತಮ ನಿರೂಪಕರಾಗಿಯೂ ಗುರುತಿಸಿಕೊಂಡಿದ್ದಾರೆ. ಶಿರೂರು ಉತ್ಸವ, ಶಿರೂರು ಟೋಲ್ ಹೋರಾಟ ಸೇರಿದಂತೆ ಹಲವು ಯಶಸ್ವಿ ಕಾರ್ಯಕ್ರಮ, ಹೋರಾಟ ರೂಪಿಸುವಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದಾರೆ. ಅರುಣ್ ಕುಮಾರ್ ಅವರು ಪ್ರಸ್ತುತ ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

    ಮಾರ್ಚ್ 8ರ ಭಾನುವಾರ ಮಂಗಳೂರಿನ ಟೌನ್ ಹಾಲ್‌ನಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 35ನೇ ರಾಜ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಖೋ ಖೋ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

    08/07/2026

    ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

    08/07/2026

    ನವದೆಹಲಿಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಅವರನ್ನು ಭೇಟಿ ಮಾಡಿದ ಸಂಸದ ಬಿ.ವೈ.ಆರ್‌

    08/07/2026
    Leave A Reply Cancel Reply

    17 − 12 =

    Call us

    Click Here

    Call us

    Call us

    Call us
    Highest Viewed Recently
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಖೋ ಖೋ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
    • ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಕೋಟ ವಿವೇಕ ವಿದ್ಯಾಸಂಸ್ಥೆಯಲ್ಲಿ ವಿಶಿಷ್ಟ ಶ್ರೇಣಿಯ ಸಾಧಕರಿಗೆ ಸನ್ಮಾನ
    • ಸಿ.ಎ. ಪರೀಕ್ಷೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ
    • ಉಡುಪಿ: ಜುಲೈ 10ರಂದು ವಿವಿಧ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.